HomeKarnatakaರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಖಾಲಿ ಚೊಂಬು, ಚಿಪ್ಪು ಹಿಡಿದು ಬಿಜೆಪಿ-ಜೆಡಿಎಸ್ ನಾಯಕರ ಪ್ರತಿಭಟನೆ

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಖಾಲಿ ಚೊಂಬು, ಚಿಪ್ಪು ಹಿಡಿದು ಬಿಜೆಪಿ-ಜೆಡಿಎಸ್ ನಾಯಕರ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ ವಿತ್ತೀಯ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ಯೋಜನೆಗಳ ಘೋಷಣೆಗೆ ಹಣಕಾಸು ಇಲಾಖೆ ಎಚ್ಚರಿಕೆ ನೀಡಿದೆ. ಹಣಕಾಸು ಇಲಾಖೆ ಟಿಪ್ಪಣಿ ಬಹಿರಂಗ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಆರೋಪಿಸಿ ವಿಪಕ್ಷ ಬಿಜೆಪಿ-ಜೆಡಿಎಸ್ ನಾಯಕರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಕೈಯಲ್ಲಿ ಚೊಂಬು, ಚಿಪ್ಪು ಹಿಡಿದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯವನ್ನು ದಿವಾಳಿ ಮಾಡಿರುವ ಸರ್ಕಾರ. ಇದು ಪಾಪರ್ ಸರ್ಕಾರ ಎಂದು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಯ ಕೈಗೆ ಚೊಂಬು, ಚಿಪ್ಪು ನೀಡಿದ್ದಾರೆ ಎಂದು ಕಿಡಿಕಾರಿದರು. ಇದೇ ವೇಳೆ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧವೂ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯ ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದೆ. ಆರ್ಥಿಕವಾಗಿ ದಿವಾಳಿಯಾಗಿದೆ. ಒಂದೆಡೆ ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿದೆ. ಜನ ಜಾನುವಾರುಗಳಿಗೂ ಕುಡಿಯಲು ನೀರಿಲ್ಲ. ರೈತರು ಬೆಳೆದ ಬೆಳೆಗಳು ನೀರಿಲ್ಲದೇ ಒಣಗಿ ಹೋಗಿವೆ. ರಾಜ್ಯಯದಲ್ಲಿ ನೀರಿಗಾಗಿ ಹಾಹಾಕಾರ ಶುವುವಾಗುವ ಭೀತಿ ಇದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಜಿಲ್ಲೆ ಜಿಲ್ಲೆಗಳಲ್ಲಿ ಸಚಿವ ಸಂಪುಟ ಸಭೆ ನಡೆಸಿ ಇನ್ನಷ್ಟು ದುಂದು ವೆಚ್ಚ ಮಾಡುತ್ತಿದ್ದಾರೆ ಎಂದು ಕಿಡು ಕಾರಿದರು.

ಜಿಲ್ಲೆಗೊಂದು ಸಚಿವ ಸಂಪುಟ ಸಭೆ ನಡೆಸಿ ಮನ ಬಂದಂತೆ ಯೋಜನೆಗಳನ್ನು ಘೋಷಿಸುತ್ತಿದ್ದಾರೆ. ಯಾವುದೇ ಯೋಜನೆಗಳು ಜಾಅರಿಗೆ ಬರು ಸಾಧ್ಯವಿಲ್ಲ. ಕಾರಣ ಸರ್ಕಾಅರದ ಬಳಿ ನಯಾಪೈಸೆ ಹಣವಿಲ್ಲ. ಸರ್ಕಾರ ದಿವಾಳಿಯಾಗಿದೆ. ಆರ್ಥಿಕ ಇಲಾಖೆಯೇ ಈ ಬಗ್ಗೆ ಮಾಹಿತಿ ನೀಡಿದೆ ಎಂದರು.

ಈಗಾಗಲೇ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಗೆ ಸರ್ಕಾರದ ಬಳಿ ಹಣವಿಲ್ಲ. ಅಂಗನವಾಡಿ ಕಾರ್ಯಕರ್ತರು, ಹಿರಿಯ ನಾಗರಿಕರಿಗೆ ಹಲವು ತಿಂಗಳಿಂದ ಸಹಾಯಧನವೇ ಬಿಡುಗಡೆಯಾಗಿಲ್ಲ. ಫಲಾನುಭವಿಗಳ ಖಾತೆಗೆ ಹಣ ಜಮೆಯಾಗದೇ ಪರದಡುತ್ತಿದ್ದಾರೆ. ಹಣಕಾಸು ಇಲಾಖೆಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ವಿತ್ತೀಯ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ಯೋಜನೆಗಳ ಘೋಷಣೆಗೆ ರಾಜ್ಯ ಸರ್ಕಾರಕ್ಕೆ ಹಣಕಾಸು ಇಲಾಖೆ ಎಚ್ಚರಿಕೆ ನೀಡಿದೆ. ಲೋಕೋಪಯೋಗಿ, ಜಲಸಂಪನ್ಮೂಲ, ಸಣ್ಣ ನೀರಾವರಿ ಹಾಗೂ RDPR ಇಲಾಖೆಗಳಲ್ಲಿ ಒಟ್ಟು 36,136 ಕೋಟಿ ಬಿಲ್​​ ಬಾಕಿಯಿದೆ. ಹೀಗಾಗಿ ಹೊಸ ಕಾಮಗಾರಿಗಳಿಗಿಂತ ಮೊದಲು ಹಣಕಾಸಿನ ಲಭ್ಯತೆ ಖಚಿತಪಡಿಸಿಕೊಳ್ಳಲು ಹಣಕಾಸು ಇಲಾಖೆ ಸಲಹೆ ನೀಡಿದೆ.

ಆರ್ಥಿಕ ಇಲಾಖೆಯ ಎಚ್ಚರಿಕೆಗೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿ, ಅವರು ಸಲಹೆ ನೀಡಿರುವುದರಲ್ಲಿ ತಪ್ಪೇನಿಲ್ಲ. ಸರ್ಕಾರದ ಹಿತದೃಷ್ಟಿಯಿಂದ ಹುಷಾರಾಗಿರಿ ಎಂದಿದ್ದಾರೆ. ಅಧಿಕಾರದಲ್ಲಿರುವ ನಮಗೆ ಹೇಗೆ ನಡೆಸಬೇಕು ಎನ್ನುವ ಅರಿವಿದ್ದು, ನಾವು ಮಾಡುತ್ತೇವೆ. ಈ ಬಗ್ಗೆ ಮಾತಾಡೋರೆಲ್ಲ ಕೇಂದ್ರ ಸರ್ಕಾರ ನಮಗೆ ಕೊಡಬೇಕಿರುವ ಪಾಲು ಕೊಡಿಸಲಿ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular