HomeLatest Newsಐಪಿಎಲ್ ಮ್ಯಾಚ್ ಫಿಕ್ಸಿಂಗ್ ಆರೋಪ: ಕಾನೂನು ಹೋರಾಟದ ಎಚ್ಚರಿಕೆ ನೀಡಿದ ಸಿಎಸ್‌ಕೆ ಮಾಜಿ ಆಟಗಾರ ವಂಶ್...

ಐಪಿಎಲ್ ಮ್ಯಾಚ್ ಫಿಕ್ಸಿಂಗ್ ಆರೋಪ: ಕಾನೂನು ಹೋರಾಟದ ಎಚ್ಚರಿಕೆ ನೀಡಿದ ಸಿಎಸ್‌ಕೆ ಮಾಜಿ ಆಟಗಾರ ವಂಶ್ ಬೇಡಿ

ದೆಹಲಿ ಪ್ರೀಮಿಯರ್ ಲೀಗ್ (ಡಿಪಿಎಲ್) ಪಂದ್ಯಾವಳಿಯ ವೇಳೆ ನಡೆದಿದೆ ಎನ್ನಲಾದ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಂಟ್ರಲ್ ಡೆಲ್ಲಿ ಕಿಂಗ್ಸ್ ತಂಡದ ವಿಕೆಟ್ ಕೀಪರ್-ಬ್ಯಾಟರ್ ವಂಶ್ ಬೇಡಿ ಸ್ಪಷ್ಟನೆ ನೀಡಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಆಟಗಾರನಿಗೆ ಸಂಬಂಧಿಸಿದ ಫಿಕ್ಸಿಂಗ್ ಆರೋಪಗಳಲ್ಲಿ ತಮ್ಮ ಹೆಸರು ಕೇಳಿಬರುತ್ತಿರುವುದನ್ನು ಸಂಪೂರ್ಣವಾಗಿ ತಳ್ಳಿಹಾಕಿರುವ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸುಳ್ಳು ಮತ್ತು ನಿಂದನೀಯ ಎಂದು ಕಿಡಿಕಾರಿದ್ದಾರೆ.

ಮಾಜಿ ರಣಜಿ ಆಟಗಾರ ರಚಿತ್ ಭಾಟಿಯಾ ನಡೆಸಿದ ತೆಹಲ್ಕಾ ಸ್ಟಿಂಗ್ ಕಾರ್ಯಾಚರಣೆಯಲ್ಲಿ ಉಲ್ಲೇಖಿಸಲಾದ ವ್ಯಕ್ತಿ ತಾನಲ್ಲ ಎಂದು ವಂಶ್ ಬೇಡಿ ಸ್ಪಷ್ಟಪಡಿಸಿದ್ದಾರೆ. ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿರುವ ಅವರು, ಇಂತಹ ಸುಳ್ಳು ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ತಮ್ಮ ಕಾನೂನು ತಂಡವು ಸೂಕ್ತ ಸಿವಿಲ್ ಮತ್ತು ಕ್ರಿಮಿನಲ್ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.

ಸಿಎಸ್‌ಕೆ ತಂಡದ ಭಾಗವಾಗಿದ್ದ ಹಾಗೂ ದೆಹಲಿ ಪ್ರೀಮಿಯರ್ ಲೀಗ್‌ನಲ್ಲಿ ಪುರಾನಿ ದಿಲ್ಲಿ 6 ತಂಡವನ್ನು ಪ್ರತಿನಿಧಿಸಿದ್ದ ವಂಶ್ ಬೇಡಿ, ಯಾರೂ ಇಂತಹ ಆಧಾರರಹಿತ ಸುದ್ದಿಗಳನ್ನು ಸೃಷ್ಟಿಸಬಾರದು ಮತ್ತು ಹಂಚಿಕೊಳ್ಳಬಾರದು ಎಂದು ವಿನಂತಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನೊಂದೆಡೆ, ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ), ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಆರೋಪಗಳು ಇನ್ನೂ ಸಾಬೀತಾಗಿಲ್ಲ ಮತ್ತು ಯಾವುದೇ ಅಧಿಕೃತ ಸಂಸ್ಥೆಯಿಂದ ದೃಢಪಟ್ಟಿಲ್ಲ ಎಂದು ಹೇಳಿದೆ. ಆಧಾರರಹಿತ ವರದಿಗಳನ್ನಷ್ಟೇ ನೆಚ್ಚಿಕೊಂಡು ಯಾವುದೇ ಆಟಗಾರ ಅಥವಾ ಫ್ರಾಂಚೈಸಿ ವಿರುದ್ಧ ತೀರ್ಮಾನಕ್ಕೆ ಬರುವುದು ಸರಿಯಲ್ಲ ಎಂದು ಡಿಡಿಸಿಎ ಸ್ಪಷ್ಟಪಡಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular