ಚಿಕ್ಕಮಗಳೂರು: ರೌಡಿ ಶೀಟರ್ಗಳ ಜೊತೆ ಎಣ್ಣೆ ಪಾರ್ಟಿ ಮಾಡಿದ್ದ ಸಖರಾಯಪಟ್ಟಣ ಠಾಣೆಯ ಎಎಸ್ಐ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಸಖರಾಯಪಟ್ಟಣ ಠಾಣೆಯ ಎಎಸ್ಐ ವೀರೇಂದ್ರ ಅಮಾನತುಗೊಂಡವರು. ವಿರೇಂದ್ರ ಅವರನ್ನು ಸಸ್ಪೆಂಡ್ ಮಾಡಿ ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ಕುಮಾರ್ ದಯ್ಮಾ ಆದೇಶ ಹೊರಡಿಸಿದ್ದಾರೆ.
ಎಎಸ್ಐ ವೀರೇಂದ್ರ ಬಾರ್ನಲ್ಲಿ ಪಾರ್ಟಿ ಆಯೋಜನೆ ಮಾಡಿ ಇಡೀ ರಾತ್ರಿ ಜೋರಾಗಿ ಹಾಡು ಹಾಕಿದ್ದರು. ಈ ಹಿನ್ನೆಲೆ ಗ್ರಾಮಸ್ಥರು ಬಾರ್ ಮುಂದೆ ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಬಾರ್ ಬಂದ್ ಮಾಡುವಂತೆ ಮಹಿಳೆಯರು ಸೇರಿದಂತೆ ನೂರಾರು ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದರು. ಎಎಸ್ಐ ದುಂಡಾವರ್ತನೆ ವಿರುದ್ಧ ಗ್ರಾಮಸ್ಥರೇ ಪ್ರತಿಭಟನೆ ನಡೆಸುತ್ತಿದ್ದ ಎಚ್ಚೆತ್ತ ಚಿಕ್ಕಮಗಳೂರು ಎಸ್ ಪಿ, ಎಎಸ್ಐ ವಿರೇಂದ್ರ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಕಡೂರು ತಾಲೂಕಿನ ಎಮ್ಮೆದೊಡ್ಡಿ ಮುಸ್ಲಾಪುರ ಗ್ರಾಮದಲ್ಲಿ ವಾರದ ಹಿಂದೆ ಈ ಘಟನೆ ನಡೆದಿತ್ತು. ನಿರಂತರವಾಗಿ ದೂರು ಕೇಳಿ ಬಂದ ಹಿನ್ನೆಲೆ ಎಎಸ್ಐ ಅವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.
ಕೆಪಿಎಸ್ಸಿ ಮುಚ್ಚುವೆ ಎಂದ ಸಿಎಂ ಡಿ.ಕೆ.ಶಿವಕುಮಾರ್ ಗೆ ಹೆಚ್.ಡಿ.ಕುಮಾರಸ್ವಾಮಿ ತರಾಟೆ: ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತಿದೆ ಎಂದು ಕಿಡಿ
ಬೆಂಗಳೂರು: ಕೆಪಿಎಸ್ಸಿಯನ್ನು ಮುಚ್ಚಲು ಕಾನೂನು ತಜ್ಞರ ಜತೆ ಚರ್ಚೆ ನಡೆಸುತ್ತಿದ್ದೇವೆ ಎಂದು ಹೇಳಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದದರೆ. ಮುಖ್ಯಮಂತ್ರಿಗೆ ಶಾಸನದ ಮಹತ್ವವೇ ಗೊತ್ತಿಲ್ಲದಂತಿದೆ ಎಂದು ಟೀಕಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕರ್ನಾಟಕ ಲೋಕಸೇವಾ ಆಯೋಗ (KPSC) ವನ್ನು ಶಾಸನಬದ್ಧವಾಗಿ ಮುಚ್ಚುತ್ತೇವೆ ಎನ್ನುವ ಮುಖ್ಯಮಂತ್ರಿ ಹೇಳಿಕೆ ಕೇವಲ ಹತಾಶೆಯಿಂದಷ್ಟೇ ಕೂಡಿಲ್ಲ, ಅದು ಬುದ್ಧಿಗೇಡಿತನ, ಹೊಣೆಗೇಡಿತನ ಮತ್ತು ಅಜ್ಞಾನದ ಪರಮಾವಧಿ. ಇವರ ವರಸೆ ಹೇಗಿದೆ ಎಂದರೆ ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ!’; ‘ನೆಗಡಿ ಬಂದರೆ ಮೂಗಿಗೇ ಕತ್ತರಿ ಹಾಕಿದಂತೆ!!’ ಎಂದು ಲೇವಡಿ ಮಾಡಿದ್ದಾರೆ.
ಕೆಪಿಎಸ್ ಸಿ ಸಂಸ್ಥೆ ಚೆನ್ನಾಗಿಯೇ ಇದೆ, ಕೆಟ್ಟ ಜನ ಬಂದು ಕೂತಿದ್ದಾರಷ್ಟೇ. ಬೇಲಿಯೇ ಹೊಲ ಮೇಯುತ್ತಿದೆ. ಅಲ್ಲಿಗೆ ಖದೀಮರನ್ನು ನೇಮಕ ಮಾಡಿದ್ದು ಯಾರು? ವಸೂಲಿಗೆ ಅಂಗಡಿ ತೆರೆಯಲು ಅವಕಾಶ ಕೊಟ್ಟಿದ್ದು ಯಾರು? ವಿಧಾನಸೌಧದ 3ನೇ ಮಹಡಿಯಲ್ಲಿ ಕೂತವರೇ ಎಸಗಿದ ಪಾಪವಲ್ಲವೇ ಇದು? ಆ ಲೆಕ್ಕಕ್ಕೆ ಬಂದರೆ ವಿಧಾನಸೌಧವನ್ನೇ ಮುಚ್ಚಬೇಕು. ನಿಮ್ಮ ಸಾರಥ್ಯದಲ್ಲಿ ಅದೂ ನಡೆದುಹೋಗಲಿ ಎಂದು ಟಾಂಗ್ ನೀಡಿದ್ದಾರೆ.
ಬೇಜವಾಬ್ದಾರಿಯಿಂದ ಚಪಲಕ್ಕೆ ನಾಲಿಗೆ ಜಾರುವ ಮೊದಲು ಕೆಪಿಎಸ್ಸಿ ಎಂದರೆ ಏನು? ಅದರ ಸಂರಚನೆ, ಸ್ವರೂಪ ಹೇಗಿರುತ್ತದೆ? ಸಾಂವಿಧಾನಿಕವಾಗಿ ಅದಕ್ಕಿರುವ ರಕ್ಷಣೆ ಏನು? ಆ ಸಂಸ್ಥೆ ನಡೆದುಬಂದ ಹಾದಿ, ಹೆಗ್ಗಳಿಕೆ ಬಗ್ಗೆ ತಿಳಿದುಕೊಳ್ಳಿ. ಹೊಲಕ್ಕೆ ಕಳೆ ಬಿದ್ದರೆ ಅದನ್ನು ಕಿತ್ತೆಸೆಯಬೇಕು, ಹೊಲಕ್ಕೇ ವಿಷವುಣಿಸುವ ಕೆಲಸ ಆಗಬಾರದು ಎಂದು ಕಿವಿಮಾತು ಹೇಳಿದ್ದಾರೆ.
ಕೆಪಿಎಸ್ ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದರು.
ಅಲ್ಲದೇ ಕೆಪಿಎಸ್ ಸಿಯಲ್ಲಿ ಖದೀಮರು ಸೇರಿಕೊಂಡಿದ್ದಾರೆ. ನಾವು ನಂಬಿಕೆ ಇಟ್ಟು ಆಯ್ಕೆ ಮಾಡಿದ ಅಧಿಕಾರಗಳು ಹೀಗೆಲ್ಲಾ ಮಾಡುತ್ತಿದ್ದಾರೆ. ಅಲ್ಲಿರುವ ಸದಸ್ಯರು ಅಂಗಡಿಯನ್ನೇ ತೆರೆದಿದ್ದಾರೆ. ನಮ್ಮ ಪೊಲೀಸ್ ಅಧಿಕಾರಿಗಳು ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಒಂದು ದಿನ ಎಲ್ಲವೂ ಹೊರಗೆ ಬರುತ್ತದೆ ಎಂದಿದ್ದರು. ಸಿಎಂ ಡಿ.ಕೆ.ಶಿವಕುಮಾರ್ ಈ ಹೇಳಿಕೆಗೆ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

