HomeJobsಉದ್ಯೋಗ ನೇಮಕಾತಿ: ಸೆ.25 ರಂದು ನೇರ ಸಂದರ್ಶನ: ಪಿಯುಸಿ, ಪದವೀಧರರಿಗೆ ಅವಕಾಶ

ಉದ್ಯೋಗ ನೇಮಕಾತಿ: ಸೆ.25 ರಂದು ನೇರ ಸಂದರ್ಶನ: ಪಿಯುಸಿ, ಪದವೀಧರರಿಗೆ ಅವಕಾಶ

ಬಳ್ಳಾರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಶ್ರೀರಾಮ್ ಫೈನಾನ್ಷಿಯಲ್ ಲಿಮಿಟೆಡ್ ಇವರ ಸಂಯುಕ್ತ ಆಶ್ರಯದಲ್ಲಿ ಸೆ.25 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉಚಿತ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಶ್ರೀರಾಮ್ ಫೈನಾನ್ಷಿಯಲ್ ಲಿಮಿಟೆಡ್ ಸಂಸ್ಥೆಯ ಬಳ್ಳಾರಿ, ಸಿರುಗುಪ್ಪ, ಕುಡತಿನಿ, ಸಂಡೂರು ಹಾಗೂ ಕೂಡ್ಲಿಗಿ ತಾಲೂಕುಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ವಿದ್ಯಾರ್ಹತೆಯು ಪಿಯುಸಿ ಅಥವಾ ಯಾವುದೇ ಪದವಿ ಪೂರ್ಣಗೊಳಿಸಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ದ್ವಿಚಕ್ರ ವಾಹನ ಹೊಂದಿರಬೇಕು. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ರೀತಿಯ ಶುಲ್ಕವಿರುವುದಿಲ್ಲ (ಉಚಿತ ಪ್ರವೇಶ).

ಆಸಕ್ತ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ನ ಪ್ರತಿ ಹಾಗೂ ಸ್ವ-ವಿವರಗಳ ಪ್ರತಿಯೊಂದಿಗೆ ಕೆಳಗಿನ ವಿಳಾಸದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಸಂದರ್ಶನ ನಡೆಯುವ ವಿಳಾಸ:

ಶ್ರೀರಾಮ್ ಫೈನಾನ್ಷಿಯಲ್ ಲಿಮಿಟೆಡ್,

ನಂ.04, ಶ್ರೀ ಗಾಯತ್ರಿ ಟವರ್ಸ್, 2ನೇ ಮಹಡಿ,

ಕೆಹೆಚ್‌ಬಿ ಕಾಲೋನಿ, ಗೋಪಾಲಸ್ವಾಮಿ ರಸ್ತೆ (ಮೋಕಾ ರಸ್ತೆ),

ಗಾಂಧಿನಗರ, ಬಳ್ಳಾರಿ – 583103.

ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ:7619207762, 9663263086, 7676774293, 6360408094 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಕಲಚೇತನರ ಸಬಲೀಕರಣ ಇಲಾಖೆಯ ವಿವಿಧ 14 ಯೋಜನೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ಫಲಾನುಭವಿ ಆಧಾರಿತ ಒಟ್ಟು 14 ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಹ ವಿಕಲಚೇತನರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಅರ್ಹ ವಿಕಲಚೇತನ ಫಲಾನುಭವಿಗಳು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳ ಮೂಲಕ ಅಥವಾ ನೇರವಾಗಿ ಸೇವಾಸಿಂಧು ಪೋರ್ಟಲ್(https://sevaone.karnataka.gov.in) ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿದೆ.

ಲಭ್ಯವಿರುವ 14 ಯೋಜನೆಗಳ ವಿವರ:

ಆಧಾರ ಯೋಜನೆ, ಸಾಧನೆ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ನಿರುದ್ಯೋಗ ಭತ್ಯೆ, ಪ್ರತಿಭೆ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶಿಶುಪಾಲನಾ ಭತ್ಯೆ, ಯಂತ್ರಚಾಲಿತ ತ್ರಿಚಕ್ರ ವಾಹನ, ಬ್ಯಾಟರಿ ಚಾಲಿತ ವ್ಹೀಲ್ ಚೇರ್, ಹೊಲಿಗೆ ಯಂತ್ರ, ಬ್ರೈಲ್ ಕಿಟ್, ಟಾಕಿಂಗ್ ಲ್ಯಾಪ್‌ಟಾಪ್,

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಅರ್ಜಿಯ ಒಂದು ಜೆರಾಕ್ಸ್ ಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಶಾಂತಿದಾಮ ಆವರಣ, ಕಂಟೋನ್ಮೆಂಟ್, ಬಳ್ಳಾರಿ ಇಲ್ಲಿಗೆ ಸಲ್ಲಿಸಬೇಕಾಗುತ್ತದೆ.

ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದು. ಬಳ್ಳಾರಿ / ಕಂಪ್ಲಿ: 8880875620, ಸಿರುಗುಪ್ಪ: 9743509698, ಸಂಡೂರು: 9632052270, ಕುರುಗೋಡು: 9538000887.

ಜೊತೆಗೆ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ ಹಾಗೂ ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿನ ಯು.ಆರ್.ಡಬ್ಲ್ಯೂ ಗಳನ್ನು ಸಂಪರ್ಕಿಸಬಹುದು ಅಥವಾ ಕಚೇರಿ ದೂರವಾಣಿ ಸಂಖ್ಯೆ: 08392-267886 ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular