HomeKarnatakaBREAKING : ಶಾಸಕ ಯಶವಂತರಾಯಗೌಡ ರಾಜೀನಾಮೆ ಬಳಿಕ ಇಂಡಿ ಸೇರಿ 29 ತಾಲೂಕು ಬರಪೀಡಿತ ಪಟ್ಟಿಗೆ

BREAKING : ಶಾಸಕ ಯಶವಂತರಾಯಗೌಡ ರಾಜೀನಾಮೆ ಬಳಿಕ ಇಂಡಿ ಸೇರಿ 29 ತಾಲೂಕು ಬರಪೀಡಿತ ಪಟ್ಟಿಗೆ

ವಿಜಯಪುರ: ತಮ್ಮ ಇಂಡಿ ವಿಧಾನಸಭಾ ಕ್ಷೇತ್ರವನ್ನು ಬರ ಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ ಮಾಡದಿರುವುದನ್ನು ಖಂಡಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಅವರ ಒತ್ತಾಯಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕನ್ನು ಬರ ಪರಿಸ್ಥಿತಿಯ ‘ಗ್ರೌಂಡ್ ಟ್ರೂಥಿಂಗ್’ ಪಟ್ಟಿಗೆ ಸೇರ್ಪಡೆಗೊಳಿಸಿ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ರಾಜ್ಯದಲ್ಲಿ ಬರ ಪರಿಸ್ಥಿತಿ ಮುಂದುವರಿದಿರುವ ಹಿನ್ನೆಲೆಯಲ್ಲಿ ಸರ್ಕಾರ ಮತ್ತೊಂದು ಹಂತದಲ್ಲಿ ಇಂಡಿ ಸೇರಿದಂತೆ 29 ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆಗೊಳಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು 217 ತಾಲೂಕುಗಳು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿದಂತಾಗಿದೆ

ಇಂಡಿ ತಾಲೂಕಿನಲ್ಲಿ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿ ಉಂಟಾಗಿದ್ದರೂ, ಆರಂಭದಲ್ಲಿ ಪ್ರಕಟಿಸಿದ್ದ ಬರ ಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಇಂಡಿಗೆ ಸ್ಥಾನ ನೀಡಿರಲಿಲ್ಲ. ಇದರಿಂದ ಅಸಮಾಧಾನಗೊಂಡಿದ್ದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ತಮ್ಮ ಕ್ಷೇತ್ರವನ್ನು ಬರ ಪಟ್ಟಿಗೆ ಸೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದ ಅವರು, ತಮ್ಮ ಕ್ಷೇತ್ರದ ರೈತರ ಸಂಕಷ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದರು.

ಇದೀಗ ಸರ್ಕಾರ ಇಂಡಿ ತಾಲೂಕನ್ನು ‘ಗ್ರೌಂಡ್ ಟ್ರೂಥಿಂಗ್’ ಪಟ್ಟಿಗೆ ಸೇರಿಸಿ ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ ತಾಲೂಕಿನಲ್ಲಿ ಬರ ಪರಿಸ್ಥಿತಿಯ ವಾಸ್ತವ ಸ್ಥಿತಿಯನ್ನು ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಲಿದ್ದಾರೆ.

ಗ್ರೌಂಡ್ ಟ್ರೂಥಿಂಗ್ ವೇಳೆ ಮಳೆ ಪ್ರಮಾಣ, ಬೆಳೆ ಪರಿಸ್ಥಿತಿ, ಕೃಷಿ ಹಾನಿ ಸೇರಿದಂತೆ ವಿವಿಧ ಅಂಶಗಳನ್ನು ಪರಿಶೀಲಿಸಿ ವರದಿ ಸಿದ್ಧಪಡಿಸಲಾಗುತ್ತದೆ. ಈ ವರದಿಯ ಆಧಾರದ ಮೇಲೆ ಬರ ಪರಿಹಾರಕ್ಕೆ ಸಂಬಂಧಿಸಿದ ಮುಂದಿನ ಕ್ರಮಗಳನ್ನು ಸರ್ಕಾರ ಕೈಗೊಳ್ಳುವ ಸಾಧ್ಯತೆ ಇದೆ.

ಶಾಸಕರ ರಾಜೀನಾಮೆ ವಿಚಾರದ ಬೆನ್ನಲ್ಲೇ ಇಂಡಿ ತಾಲೂಕು ಗ್ರೌಂಡ್ ಟ್ರೂಥಿಂಗ್ ಪಟ್ಟಿಗೆ ಸೇರ್ಪಡೆಯಾಗಿರುವುದು ಸ್ಥಳೀಯವಾಗಿ ಮಹತ್ವ ಪಡೆದಿದೆ. ರೈತರ ಸಂಕಷ್ಟಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಮುಂದಿನ ನಿರ್ಧಾರಗಳತ್ತ ಇದೀಗ ಗಮನ ನೆಟ್ಟಿದೆ.

ವಿಕಲಚೇತನರ ಸಬಲೀಕರಣ ಇಲಾಖೆಯ ವಿವಿಧ 14 ಯೋಜನೆಗಳಿಗೆ ಅರ್ಜಿ ಆಹ್ವಾನ: ಅಕ್ಟೋಬರ್ 30 ಕೊನೆಯ ದಿನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ಫಲಾನುಭವಿ ಆಧಾರಿತ ಒಟ್ಟು 14 ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಹ ವಿಕಲಚೇತನರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಅರ್ಹ ವಿಕಲಚೇತನ ಫಲಾನುಭವಿಗಳು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳ ಮೂಲಕ ಅಥವಾ ನೇರವಾಗಿ ಸೇವಾಸಿಂಧು ಪೋರ್ಟಲ್ (https://sevaone.karnataka.gov.in) ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿದೆ.

ಲಭ್ಯವಿರುವ 14 ಯೋಜನೆಗಳ ವಿವರ

ಆಧಾರ ಯೋಜನೆ, ಸಾಧನೆ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ನಿರುದ್ಯೋಗ ಭತ್ಯೆ, ಪ್ರತಿಭೆ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶಿಶುಪಾಲನಾ ಭತ್ಯೆ, ಯಂತ್ರಚಾಲಿತ ತ್ರಿಚಕ್ರ ವಾಹನ, ಬ್ಯಾಟರಿ ಚಾಲಿತ ವ್ಹೀಲ್ ಚೇರ್, ಹೊಲಿಗೆ ಯಂತ್ರ, ಬ್ರೈಲ್ ಕಿಟ್, ಟಾಕಿಂಗ್ ಲ್ಯಾಪ್‌ಟಾಪ್.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಅರ್ಜಿಯ ಒಂದು ಜೆರಾಕ್ಸ್ ಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಶಾಂತಿದಾಮ ಆವರಣ, ಕಂಟೋನ್ಮೆಂಟ್, ಬಳ್ಳಾರಿ ಇಲ್ಲಿಗೆ ಸಲ್ಲಿಸಬೇಕಾಗುತ್ತದೆ.

ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದು. ಬಳ್ಳಾರಿ / ಕಂಪ್ಲಿ: 8880875620, ಸಿರುಗುಪ್ಪ: 9743509698, ಸಂಡೂರು: 9632052270, ಕುರುಗೋಡು: 9538000887.

ಜೊತೆಗೆ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ ಹಾಗೂ ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿನ ಯು.ಆರ್.ವಿ.ಆರ್.ಡಬ್ಲ್ಯೂ ಗಳನ್ನು ಸಂಪರ್ಕಿಸಬಹುದು ಅಥವಾ ಕಚೇರಿ ದೂರವಾಣಿ ಸಂಖ್ಯೆ: 08392-267886 ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular