HomeKarnatakaBREAKING NEWS: ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ DK ಶಿವಕುಮಾರ್...

BREAKING NEWS: ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ DK ಶಿವಕುಮಾರ್ ಘೋಷಣೆ

ಬೆಂಗಳೂರು: ಕೊಪ್ಪಳದ ಗವಿಸಿದ್ದೇಶ್ವರ ಮಠದ ಶ್ರೀಗಳಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ಕೊಪ್ಪಳದ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಈ ಬಾರಿ ದಸರಾ ಉದ್ಘಾಟಿಸಲಿದ್ದಾರೆ. ಸ್ವಾಮೀಜಿಗಳಿಗೆ ಆಹ್ವಾನ ನೀಡಲಾಗಿದೆ. ನಾನು ಕೂಡ ದೂರವಾಣಿ ಮೂಲಕ ಸ್ವಾಮೀಜಿಯವರೊಂದಿಗೆ ಮಾತನಾಡಿದ್ದೇನೆ ಎಂದು ವಿಧಾನಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ – 2026ರ ಉದ್ಘಾಟಕರ ಹೆಸರನ್ನು ಸರ್ಕಾರ ಅಂತಿಮಗೊಳಿಸಿದೆ. ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೂಜ್ಯ ಶ್ರೀಗಳು ಈ ಬಾರಿಯ ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

“ಈ ಬಾರಿಯ ದಸರಾ ಉದ್ಘಾಟನೆಗೆ ನಾಡಿನ ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸುತ್ತಿರುವ ಕೊಪ್ಪಳದ ಗವಿಸಿದ್ದೇಶ್ವರ ಮಠದ ಶ್ರೀಗಳವರನ್ನು ಆಹ್ವಾನಿಸಲು ಸರ್ಕಾರ ತೀರ್ಮಾನಿಸಿದೆ. ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಮತ್ತು ಭಕ್ತಿ ಪರಂಪರೆಯನ್ನು ಗೌರವಿಸುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

ಅಕ್ಟೋಬರ್ 11 ರಿಂದ ದಸರಾ ಸಂಭ್ರಮ:

ಈ ವರ್ಷದ ಮೈಸೂರು ದಸರಾ ಅಕ್ಟೋಬರ್ 11ರಿಂದ ಅಕ್ಟೋಬರ್ 21ರವರೆಗೆ ನಡೆಯಲಿದೆ. ಅಕ್ಟೋಬರ್ 11ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಸರ್ಕಾರ ಈಗಾಗಲೇ ತಿಳಿಸಿದೆ.

ದಸರಾ ಉದ್ಘಾಟನೆಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಸೇರಿದಂತೆ ಹಲವರ ಹೆಸರು ಕೇಳಿಬಂದಿದ್ದವು. ಆದರೆ ಅಂತಿಮವಾಗಿ ಗವಿಸಿದ್ದೇಶ್ವರ ಶ್ರೀಗಳವರಿಗೆ ಈ ಗೌರವ ಲಭಿಸಿದೆ.

ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದಲ್ಲಿ ಉಲ್ಬಣಗೊಳ್ಳುತ್ತಿರುವ ಬರ ಪರಿಸ್ಥಿತಿಯ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ರ ಬರೆದಿದ್ದಾರೆ.

ಪ್ರಸ್ತುತ 177 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಮುಂದಿನ ತಿಂಗಳುಗಳಲ್ಲಿ ಪರಿಸ್ಥಿತಿ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ದೀರ್ಘಕಾಲದ ಮಳೆಯ ಕೊರತೆಯು ಕೃಷಿ, ನೀರಿನ ಲಭ್ಯತೆ, ಜಾನುವಾರುಗಳು ಮತ್ತು ಗ್ರಾಮೀಣ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ತಿಳಿಸಿದ್ದಾರೆ.

ಹಾನಿಯ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ, ಮನವಿಯಲ್ಲಿ ಕೋರಲಾದ ಮೊತ್ತದ ಶೇಕಡ 50ರಷ್ಟನ್ನು ಮಧ್ಯಂತರ ಆರ್ಥಿಕ ನೆರವಿನ ರೂಪದಲ್ಲಿ ಬಿಡುಗಡೆ ಮಾಡುವಂತೆ ಹಾಗೂ ಎಸ್‌ಡಿಆರ್‌ಎಫ್(SDRF) ಅಡಿಯಲ್ಲಿನ ಎರಡನೇ ಕಂತಿನ ಕೇಂದ್ರದ ಪಾಲನ್ನು ಮುಂಗಡವಾಗಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಕೋರಿದ್ದಾರೆ. ಈ ನೆರವು ಕರ್ನಾಟಕಕ್ಕೆ ಬೆಳೆ ನಷ್ಟ, ಕುಡಿಯುವ ನೀರಿನ ಪೂರೈಕೆ, ಜಾನುವಾರುಗಳ ರಕ್ಷಣೆ ಮತ್ತು ಇತರ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಹಕಾರಿಯಾಗಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular