HomeKarnatakaBREAKING : ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ಚಿಕ್ಕಬಳ್ಳಾಪುರದಲ್ಲಿ ಆರೋಪಿ ಶಬ್ಬೀರ್ ಅರೆಸ್ಟ್.!

BREAKING : ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ಚಿಕ್ಕಬಳ್ಳಾಪುರದಲ್ಲಿ ಆರೋಪಿ ಶಬ್ಬೀರ್ ಅರೆಸ್ಟ್.!

ಚಿಕ್ಕಬಳ್ಳಾಪುರ : ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಆರೋಪದ ಮೇಲೆ ಚಿಕ್ಕಬಳ್ಳಾಪುರ ನಗರ ಪೊಲೀಸರು ಶಬ್ಬೀರ್ ಎಂಬ ಯುವಕನನ್ನು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ನಗರದ ಬಾಪೂಜಿನಗರ ನಿವಾಸಿಯಾಗಿರುವ ಶಬ್ಬೀರ್, ಟೆಲಿಗ್ರಾಂನಲ್ಲಿ ಗ್ರೂಪ್ ರಚಿಸಿಕೊಂಡು ಭಯೋತ್ಪಾದನಾ ಚಟುವಟಿಕೆಗಳ ಕುರಿತು ಚರ್ಚೆ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಟೆಲಿಗ್ರಾಂನಲ್ಲಿ ದಾಳಿ, ಹಣ ಸಂಗ್ರಹದ ಚರ್ಚೆ

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಯು ಟೆಲಿಗ್ರಾಂ ಗ್ರೂಪ್ ಮೂಲಕ ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಕುರಿತು ಚರ್ಚಿಸುತ್ತಿದ್ದ ಎನ್ನಲಾಗಿದೆ. ಗ್ರೂಪ್‌ನಲ್ಲಿ ದಾಳಿ ನಡೆಸುವುದು ಹಾಗೂ ಅದಕ್ಕಾಗಿ ಹಣ ಸಂಗ್ರಹಿಸುವ ಬಗ್ಗೆ ಯೋಜನೆ ರೂಪಿಸಲಾಗುತ್ತಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶ್ರೀಮಂತರನ್ನು ಅಪಹರಿಸಿ ಹಣ ಸಂಗ್ರಹಿಸಲು ಸಂಚು?

ತನಿಖೆಯಲ್ಲಿ ಹೊರಬಂದಿರುವ ಮಾಹಿತಿಯ ಪ್ರಕಾರ, ಶ್ರೀಮಂತರನ್ನು ಅಪಹರಿಸಿ ಹಣ ಸಂಗ್ರಹಿಸಿ, ಅದನ್ನು ಭಯೋತ್ಪಾದನಾ ಚಟುವಟಿಕೆಗಳಿಗೆ ಬಳಸುವ ಕುರಿತು ಚರ್ಚೆ ನಡೆದಿತ್ತು ಎನ್ನಲಾಗಿದೆ. ಹಣ ಸಂಗ್ರಹಿಸಿದ ಬಳಿಕ ದೇಶದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದ ಬಗ್ಗೆ ಮಾತುಕತೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಸೇರಿದಂತೆ ಪ್ರಮುಖರ ಮೇಲೆ ದಾಳಿ ಚರ್ಚೆ

ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಕುರಿತು ಟೆಲಿಗ್ರಾಂ ಗ್ರೂಪ್‌ನಲ್ಲಿ ಚರ್ಚೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ದೇಶದ ವಿವಿಧ ಭಾಗಗಳ ಕೆಲವರು ಈ ಗ್ರೂಪ್‌ನ ಸದಸ್ಯರಾಗಿದ್ದರು ಎನ್ನಲಾಗಿದ್ದು, ಅವರ ಪತ್ತೆಗಾಗಿ ತನಿಖೆ ಮುಂದುವರಿದಿದೆ.

BNS ಸೆಕ್ಷನ್ 113 ಅಡಿ ಪ್ರಕರಣ

ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ನಗರ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 113 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಶಬ್ಬೀರ್‌ನ ವಿಚಾರಣೆ ಮುಂದುವರಿದಿದ್ದು, ಟೆಲಿಗ್ರಾಂ ಗ್ರೂಪ್‌ನ ಚರ್ಚೆಗಳು, ಸದಸ್ಯರ ಸಂಪರ್ಕ ಹಾಗೂ ಈ ಸಂಚಿನ ಹಿಂದೆ ಮತ್ತಷ್ಟು ಮಂದಿ ಇದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಪುರುಷ ಬಂದಿಗಳಿಗೆ 30 ದಿನಗಳ ಉಚಿತ ಟೈಲರಿಂಗ್ ತರಬೇತಿ

ನಗರದ ಕೇಂದ್ರ ಕಾರಾಗೃಹದ ಆವರಣದಲ್ಲಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ (ಆರ್‌ಸೆಟಿ) ಸಹಯೋಗದೊಂದಿಗೆ ಪುರುಷ ಬಂದಿಗಳಿಗಾಗಿ ಆಯೋಜಿಸಲಾಗಿರುವ 30 ದಿನಗಳ ಉಚಿತ ಟೈಲರಿಂಗ್ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ್ ಶಿವಪೂರೆ ಅವರು, ಇಂದಿನ ದಿನಗಳಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ತೀವ್ರ ಪೈಪೋಟಿ ಇದೆ. ಬಂದಿಗಳು ಆಸಕ್ತಿಯಿಂದ ಇಂತಹ ಕೌಶಲ್ಯಗಳನ್ನು ಕಲಿತು ಸಮಾಜದ ಮುಂಚೂಣಿಗೆ ಬರಬೇಕು. ಪ್ರತಿಯೊಬ್ಬರೂ ತಮ್ಮನ್ನು ತಾವು ಸಕಾರಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಂಡು, ಜೀವನದಲ್ಲಿ ಯಶಸ್ಸು ಗಳಿಸುವ ಮೂಲಕ ಕುಟುಂಬದ ಆರ್ಥಿಕ ಅಭಿವೃದ್ಧಿಗೆ ನೆರವಾಗಬೇಕು ಎಂದು ಕರೆ ನೀಡಿದರು.

ಕೇಂದ್ರ ಕಾರಾಗೃಹದ ಅಧೀಕ್ಷಕ ವಿ. ಕೃಷ್ಣಮೂರ್ತಿ ಅವರು ಮಾತನಾಡಿ, ಬಂದಿಗಳಿಗೆ ಇಂತಹ ಸ್ವ-ಉದ್ಯೋಗ ತರಬೇತಿಗಳನ್ನು ನೀಡುವುದರಿಂದ ಅವರು ಸಮಾಜದ ಮುಖ್ಯವಾಹಿನಿಗೆ ಮರಳಲು ಸಾಧ್ಯವಾಗುತ್ತದೆ. ಶಿಕ್ಷೆ ಮುಗಿದು ಬಿಡುಗಡೆಯಾದ ಬಳಿಕ ಸ್ವಂತ ಉದ್ಯೋಗ ಕಂಡುಕೊAಡು ಸ್ವಾವಲಂಬಿ ಹಾಗೂ ಗೌರವಯುತ ಜೀವನ ನಡೆಸಲು ಇದು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಜೊತೆಗೆ, ಇಂತಹ ಉಪಯುಕ್ತ ತರಬೇತಿ ಆಯೋಜಿಸಿದ ಕೆನರಾ ಬ್ಯಾಂಕ್ ಆರ್‌ಸೆಟಿ ಸಂಸ್ಥೆಗೆ ತುಂಬು ಹೃದಯದ ಕೃತಜ್ಞತೆ ಸಲ್ಲಿಸಿದರು.

ಕೆನರಾ ಬ್ಯಾಂಕ್‌ನ ಜಿಲ್ಲಾ ಲೀಡ್ ವ್ಯವಸ್ಥಾಪಕ ಗಿರೀಶ್ ವಿ. ಕುಲಕರ್ಣಿ ಅವರು ಮಾತನಾಡಿ, ಸ್ವ-ಉದ್ಯೋಗ ಕೈಗೊಳ್ಳಲು ವಿವಿಧ ಬ್ಯಾಂಕುಗಳಲ್ಲಿ ದೊರೆಯುವ ಸಾಲ ಸೌಲಭ್ಯಗಳು ಹಾಗೂ ಆರ್ಥಿಕ ನೆರವಿನ ಬಗ್ಗೆ ಬಂದಿಗಳಿಗೆ ಮಾಹಿತಿ ನೀಡಿದರು.

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ವಿನಯ್ ಕುಮಾರ್ ಬಿ. ಕೊಳೂರುಮಠ ಅವರು ಮಾತನಾಡಿ, ಸಂಸ್ಥೆಯ ವತಿಯಿಂದ ಟೈಲರಿಂಗ್ ತರಬೇತಿಯ ಜೊತೆಗೆ ವ್ಯಕ್ತಿತ್ವ ವಿಕಸನ, ಆತ್ಮವಿಶ್ವಾಸ ವೃದ್ಧಿ ಹಾಗೂ ಸಂವಹನ ಕೌಶಲ್ಯಗಳ ತರಬೇತಿಯನ್ನೂ ನೀಡಲಾಗುತ್ತದೆ. ಇದು ಅವರ ಮುಂದಿನ ವೃತ್ತಿ ಬದುಕಿಗೆ ಅತ್ಯಂತ ಸಹಕಾರಿಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಕಾರಾಗೃಹದ ಸಹಾಯಕ ಅಧೀಕ್ಷಕ ಟಿ. ಬಿ. ಭಜಂತ್ರಿ, ಜೈಲರ್ ಪ್ರಕಾಶ್ ಶಿಂಧೆ, ಸಂಪನ್ಮೂಲ ವ್ಯಕ್ತಿ ಅಕ್ಬರ್ ಬಾಷ, ಉಪನ್ಯಾಸಕರಾದ ಜಡೆಪ್ಪ ಜಿ., ದಿನೇಶ್ ಕುಮಾರ್ ಜಿ., ಸಿಬ್ಬಂದಿಗಳಾದ ಸಿದ್ದಲಿಂಗಮ್ಮ, ಸಂತೋಷ್ ಕುಮಾರ್, ಪರಮೇಶ್ ಹಾಗೂ ತರಬೇತಿಯ 25 ಜನ ಶಿಬಿರಾರ್ಥಿ ಬಂದಿಗಳು ಉಪಸ್ಥಿತರಿದ್ದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular