HomeKarnatakaವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: SSLC ಪರಿಷ್ಕೃತ ಅಂಕ ಪಟ್ಟಿ ಪಡೆಯಲು ಅವಕಾಶ

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: SSLC ಪರಿಷ್ಕೃತ ಅಂಕ ಪಟ್ಟಿ ಪಡೆಯಲು ಅವಕಾಶ

ಬೆಂಗಳೂರು: ಎಸ್ಎಸ್ಎಲ್ಸಿ ಪರಿಷ್ಕೃತ ಅಂಕ ಪಟ್ಟಿ ಪಡೆದುಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

2026 ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ -1 ಮತ್ತು ಪರೀಕ್ಷೆ -2 ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಗಳಲ್ಲಿ ಅಭ್ಯರ್ಥಿಯ ಹೆಸರು, ತಂದೆ -ತಾಯಿ ಹೆಸರು, ಜನ್ಮ ದಿನಾಂಕ, ಲಿಂಗ, ಮಾಧ್ಯಮ ಮೊದಲಾದ ಮಾಹಿತಿಗಳು ತಪ್ಪಾಗಿದ್ದರೆ ನಿಗದಿತ ಶುಲ್ಕ ಪಾವತಿಸಿ ಹೊಸ ಅಂಕಪಟ್ಟಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳ ಮಾಹಿತಿ ತಪ್ಪಾಗಿದ್ದರೆ ಆಯಾ ಶಾಲೆಯ ಮುಖ್ಯ ಶಿಕ್ಷಕರು ಮಾತ್ರ ಅರ್ಜಿ ಸಲ್ಲಿಸಿ ಹೊಸ ಅಂಕಪಟ್ಟಿ ಪಡೆಯಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಲೆಗಳಿಂದ ನೀಡಲಾಗಿದ್ದ ಮಾಹಿತಿ ಆಧಾರದಲ್ಲಿ ಅಂಕಪಟ್ಟಿ ವಿತರಿಸಲಾಗಿದೆ. ಅದರಲ್ಲಿನ ತಪ್ಪುಗಳಿಗೆ ಆಯಾ ಮುಖ್ಯ ಶಿಕ್ಷಕರೇ ಹೊಣೆಯಾಗಿದ್ದು, ಹೀಗಾಗಿ ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ಮುಖ್ಯ ಶಿಕ್ಷಕರೇ 1,000 ರೂ. ದಂಡ ಪಾವತಿಸಿ ಪರಿಷ್ಕೃತ ಅಂಕಪಟ್ಟಿ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ.

ಅಂಜನಾದ್ರಿ ಬೆಟ್ಟದಿಂದ ಗಗನ್ ಮಹಲ್‌ವರೆಗೆ ಸೈಕ್ಲಿಂಗ್ ಜಾಥಾ, ವಿಶೇಷ ಕಾರ್ಯಕ್ರಮ ಆಯೋಜನೆ: ಡಾ.‌ಸುರೇಶ ಇಟ್ನಾಳ

ಕೊಪ್ಪಳ: ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಕೊಪ್ಪಳ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.‌ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.

ಪ್ರವಾಸೋದ್ಯಮದಲ್ಲಿ ಡಿಜಿಟಲ್ ನಾವೀನ್ಯತೆ, ಕೃತಕ ಬುದ್ಧಿಮತ್ತೆ (ಎಐ) ಬಳಕೆ ಮತ್ತು ಸುಸ್ಥಿರ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ವಿಜಯನಗರ ಸಾಮ್ರಾಜ್ಯದ ಮೊದಲ ರಾಜಧಾನಿ ಮತ್ತು ಈ ಭಾಗದ ಐತಿಹಾಸಿಕ ಸುಪ್ರಸಿದ್ಧ ಪ್ರವಾಸಿ ತಾಣವಾದ ಆನೆಗೊಂದಿಯಲ್ಲಿ ಆಯೋಜಿಸಲಾಗುತ್ತಿದೆ.

ವಿಶೇಷ ಸೈಕ್ಲಿಂಗ್ ಜಾಥ: ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ನಿಮಿತ್ತ ಐತಿಹಾಸಿಕ ತಾಣಗಳಾದ ಅಂಜನಾದ್ರಿ ಬೆಟ್ಟದಿಂದ ಆನೆಗುಂದಿಯ ಗಗನ್ ಮಹಲ್‌ವರೆಗೆ ವಿಶೇಷ ಸೈಕ್ಲಿಂಗ್ ಜಾಥಾವನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಸೈಕ್ಲಿಂಗ್ ಪ್ರಿಯರು ಹಾಗೂ ಸಾರ್ವಜನಿಕರು ಭಾಗವಹಿಸಬಹುದಾಗಿದೆ.

https://docs.google.com/forms/d/e/1FAIpQLScOTYctEtE7i- RZiv4pC6l_yAZCXb35Wcuvhdlod6kHPhlNeA/viewform?usp=publish-editor ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.

ವಿಶೇಷ ಸ್ಪರ್ಧೆ: ಈ ಬಾರಿಯ ಥೀಮ್ ಆಧರಿಸಿ ಸಾಮಾಜಿಕ ಮಾಧ್ಯಮಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮುಂತಾದ ವೇದಿಕೆಗಳಲ್ಲಿ ಕಂಟೆಂಟ್ ಕ್ರಿಯೇಷನ್ (Content Creation) ವಿಶೇಷ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೊಪ್ಪಳ ಜಿಲ್ಲಾಡಳಿತವು ತಿಳಿಸಿದೆ.

“ಕೊಪ್ಪಳ ಜಿಲ್ಲೆಯು ಐತಿಹಾಸಿಕವಾಗಿ ಅತ್ಯಂತ ಮಹತ್ವದ ಹಾಗೂ ಪ್ರಮುಖ ತಾಣಗಳನ್ನು ಒಳಗೊಂಡಿದೆ. ವಿಜಯನಗರ ಸಾಮ್ರಾಜ್ಯದ ಮೂಲ ರಾಜಧಾನಿಯಾಗಿದ್ದ ಐತಿಹಾಸಿಕ ಆನೆಗೊಂದಿಯಲ್ಲಿ ಈ ಬಾರಿಯ ವಿಶ್ವ ಪ್ರವಾಸೋದ್ಯಮ ದಿನವನ್ನು ವಿಶೇಷವಾಗಿ ಆಚರಿಸುವ ಮೂಲಕ ಈ ಭಾಗದ ಪ್ರವಾಸೋದ್ಯಮ ಕ್ಷೇತ್ರಗಳ ಉತ್ತೇಜನ ಹಾಗೂ ಜಾಗೃತಿ ಮೂಡಿಸಲಾಗುತ್ತಿದೆ.”

 — ಡಾ.‌ ಸುರೇಶ ಬಿ. ಇಟ್ನಾಳ

ಜಿಲ್ಲಾಧಿಕಾರಿಗಳು, ಕೊಪ್ಪಳ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular