HomeKarnatakaಟೆಲಿಗ್ರಾಮ್ ಬಳಸಿ ವಿಧ್ವಂಸಕ ಕೃತ್ಯಕ್ಕೆ ಸಂಚು; ಗೃಹ ಸಚಿವರನ್ನು ಕೇಳಿ ಎಂದ ಡಿಸಿಎಂ ಡಾ. ಜಿ....

ಟೆಲಿಗ್ರಾಮ್ ಬಳಸಿ ವಿಧ್ವಂಸಕ ಕೃತ್ಯಕ್ಕೆ ಸಂಚು; ಗೃಹ ಸಚಿವರನ್ನು ಕೇಳಿ ಎಂದ ಡಿಸಿಎಂ ಡಾ. ಜಿ. ಪರಮೇಶ್ವರ್

ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಟೆಲಿಗ್ರಾಮ್ ಆಪ್ ಬಳಸಿಕೊಂಡು ಭಯೋತ್ಪಾದಕ ಕೃತ್ಯಕ್ಕೆ ಸಂಚು ರೂಪಿಸಲು ಗ್ರೂಪ್ ರಚನೆಗೆ ಮುಂದಾಗಿದ್ದರು ಎಂಬ ವಿಚಾರದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಡಿಸಿಎಂ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ್, “ಈ ವಿಚಾರದ ಬಗ್ಗೆ ಗೃಹ ಸಚಿವರನ್ನು ಕೇಳಿ. ನಾನು ಈಗ ಮಾಜಿ ಗೃಹ ಸಚಿವನಾಗಿರುವುದರಿಂದ ನನಗೆ ಮಾಹಿತಿ ನೀಡುವುದಿಲ್ಲ. ನಾನು ಗೃಹ ಸಚಿವನಾಗಿದ್ದಾಗ ಇಂತಹ ಪ್ರಕರಣಗಳ ಮಾಹಿತಿ ನನಗೆ ಬರುತ್ತಿತ್ತು. ಈಗಿನ ಗೃಹ ಸಚಿವರಿಗೆ ಮಾಹಿತಿ ನೀಡಲಾಗುತ್ತದೆ” ಎಂದು ಹೇಳಿದ್ದಾರೆ.

ಏನಿದು ಚಿಕ್ಕಬಳ್ಳಾಪುರ ಪ್ರಕರಣ?

ಚಿಕ್ಕಬಳ್ಳಾಪುರದಲ್ಲಿ ಶಬ್ಬೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನ ಮೊಬೈಲ್ ಪರಿಶೀಲನೆ ವೇಳೆ ಇನ್‌ಸ್ಟಾಗ್ರಾಂ ಹಾಗೂ ಟೆಲಿಗ್ರಾಮ್ ಬಳಕೆಯ ಮಾಹಿತಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಗುಪ್ತಚರ ಇಲಾಖೆಯ ಮಾಹಿತಿ ಆಧರಿಸಿ ಪೊಲೀಸರು ಆತನ ಚಟುವಟಿಕೆಗಳ ಬಗ್ಗೆ ತನಿಖೆ ನಡೆಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸರ ಪ್ರಕಾರ, ಸಾಮಾಜಿಕ ಜಾಲತಾಣದ ಕ್ಲೋಸ್ಡ್ ಗ್ರೂಪ್‌ನಲ್ಲಿ ಪ್ರಚೋದನಕಾರಿ ಸಂದೇಶಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದ್ದು, ಆತನ ಹಿನ್ನೆಲೆ ಹಾಗೂ ಮೊಬೈಲ್‌ನಲ್ಲಿ ನಡೆದಿರುವ ಚರ್ಚೆಗಳ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಚಿಕ್ಕಬಳ್ಳಾಪುರ ಎಸ್‌ಪಿ ಪದ್ಮಿನಿ ಸಾಹು ತಿಳಿಸಿದ್ದಾರೆ.

ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಟೆಲಿಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ನಡೆದಿರುವ ಚಟುವಟಿಕೆಗಳ ಸಂಪೂರ್ಣ ಮಾಹಿತಿ ಸಂಗ್ರಹಿಸಲು ತನಿಖಾಧಿಕಾರಿಗಳು ಮುಂದಾಗಿದ್ದಾರೆ.

157 ನೇ ಮಹಾತ್ಮಾ ಗಾಂಧೀಜಿ ಜಯಂತಿ ಜಿಲ್ಲಾಮಟ್ಟದ ಕಾರ್ಯಕ್ರಮ; ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ.ಸೂಚನೆ

ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಅಕ್ಟೋಬರ 2 ರಂದು ಬೆಳಿಗ್ಗೆ 9 ಗಂಟೆಗೆ 157 ನೇ ಗಾಂಧಿ ಜಯಂತಿಯನ್ನು ಧಾರವಾಡ ಹೊಸ ಬಸ್ ನಿಲ್ದಾಣ ಹತ್ತಿರದ ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಕ್ರಮವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ. ಡಿ. ಅವರು ಹೇಳಿದರು.

ಅವರು ಇಂದು (ಸೆ.24) ಸಂಜೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಭವನದಲ್ಲಿ ಜರುಗಿದ ಮಹಾತ್ಮ ಗಾಂಧೀಜಿಯವರ 157 ನೇ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಗಾಂಧೀಜಿ ಜಯಂತಿ ಕಾರ್ಯಕ್ರಮವನ್ನು ನೂತನ ಗಾಂಧಿ ಭವನದಲ್ಲಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಮಹಾನಗರ ಪಾಲಿಕೆ ಅಧಿಕಾರಿಗಳು ಗಾಂಧಿ ಭವನ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಹಾಗೂ ಸುತ್ತಲಿನ ಪ್ರದೇಶದ ಸ್ವಚ್ಛತೆ ಕೈಗೊಳ್ಳಬೇಕು. ಗಾಂಧಿ ಜಯಂತಿಯಂದು ಗಾಂಧಿ ಭವನವನ್ನು ಅಲಂಕರಿಸಿ, ಆಕರ್ಷಿಣೀಯವಾಗಿ ಸಿದ್ಧಗೊಳಿಸಬೇಕೆಂದು ಪಾಲಿಕೆಯ ಅಧಿಕಾರಿಗಳಿಗೆ ಅವರು ಸೂಚಿಸಿದರು.

ರಜಾ ದಿನವಾಗಿರುವದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು, ಗಾಂಧಿ ವಿಚಾರ ಪ್ರಣಿತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮತ್ತು ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಕ್ರಮವಹಿಸಬೇಕೆಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಗಾಂಧಿ ಪ್ರೀಯ ಭಜನೆಗಳು, ಸರ್ಮಧರ್ಮ ಪ್ರಾರ್ಥನೆ, ವಿಶೇಷ ಉಪನ್ಯಾಸವನ್ನು ಆಯೋಜಿಸಬೇಕು. ಈಗಾಗಲೇ ವಾರ್ತಾ ಇಲಾಖೆಯಿಂದ ಜಿಲ್ಲಾಮಟ್ಟದಲ್ಲಿ ಆಯೋಜಿಸಿದ್ದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಪ್ರೌಢಶಾಲಾ ವಿಭಾಗ, ಪಿಯು ಕಾಲೇಜು ವಿಭಾಗ ಮತ್ತು ಪದವಿ ಹಾಗೂ ಸ್ನಾತಕೊತ್ತರ ವಿಭಾಗದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆಗೆ ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಅವರು ತಿಳಿಸಿದರು.

ಗಾಂಧಿ ಭವನದಲ್ಲಿ ಮಹಾತ್ಮ ಗಾಂಧೀಜಿಯವರ ವಿಚಾರಧಾರೆಗಳನ್ನು, ತತ್ವ ಸಿದ್ದಾಂತಗಳನ್ನು ಮತ್ತು ಅವರ ಜೀವನ ಚರಿತ್ರೆಯನ್ನು ಪ್ರತಿಬಿಂಬಿಸುವ ಹಾಗೂ ಮಾರ್ಗದರ್ಶನ ಮಾಡುವ ಕಾರ್ಯಕ್ರಮಗಳನ್ನು ಗಾಂಧೀಜಿ ಪ್ರಣಿತ ಸಂಘ-ಸಂಸ್ಥೆಗಳ, ಶಾಲಾ ಕಾಲೇಜುಗಳ ಸಹಯೋಗದಲ್ಲಿ ಆಯೋಜಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕರಾದ ನಸೀರಾಬಿ ಶೇಖ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಭೆಯಲ್ಲಿ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಡಾ. ಸಂಜೀವ ಕುಲಕರ್ಣಿ, ಧಾರವಾಡ ತಹಶೀಲ್ದಾರ (ಪ್ರ) ಡಾ. ಡಿ.ಎಚ್. ಹೂಗಾರ, ಮಹಾನಗರ ಪಾಲಿಕೆಯ ವಲಯ ಸಹಾಯಕ ಆಯುಕ್ತ ಅರವಿಂದ ಜಮಖಂಡಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಜಿ.ಪಂ ಅಧಿಕಾರಿ ಆರ್.ಎಸ್. ಕನವಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೀರಣ್ಣಗೌಡ ಪಾಟೀಲ, ಆಹಾರ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ಶಾಲಾ ಮತ್ತು ಶಿಕ್ಷಣ ಇಲಾಖೆ, ಲೋಕೊಪಯೋಗಿ ಇಲಾಖೆ, ಜಿಲ್ಲಾ ಖಾದಿಗ್ರಾಮೋದ್ಯೋಗ ಇಲಾಖೆ ಮತ್ತು ಇತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular