HomeKarnatakaಪತ್ನಿಯ ಶೀಲ ಶಂಕಿಸಿ ಬರ್ಬರ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಪತ್ನಿಯ ಶೀಲ ಶಂಕಿಸಿ ಬರ್ಬರ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಶಿವಮೊಗ್ಗ :   ಪತ್ನಿಯ ಶೀಲ ಶಂಕಿಸಿ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದ ಆರೋಪಿಗೆ ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 2,10,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

ಶಿವಮೊಗ್ಗದ ಟಿಪ್ಪು ನಗರ 6ನೇ ಕ್ರಾಸ್ ನಿವಾಸಿ ಅಬ್ದುಲ್ ಶೋಹೇಬ್ ಉರ್ಫ್ ಬಿಡಿ ಶಿಕ್ಷೆಗೆ ಗುರಿಯಾದ ಆರೋಪಿ.

 ಆರೋಪಿ ಅಬ್ದುಲ್ ಶೋಹೇಬ್ ತಾನು ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಕೌಸರ್ ಫಿಸಾಳ ಚಾರಿತ್ರ್ಯದ ಬಗ್ಗೆ ಅನುಮಾನಪಟ್ಟು, ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಾಕು, ಮಚ್ಚು ಮತ್ತು ಕಲ್ಲುಗಳಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದ. ಈ ಸಂಬಂಧ ಮೃತರ ತಾಯಿ ನೀಡಿದ ದೂರಿನನ್ವಯ ತುಂಗಾನಗರ ಪೊಲೀಸ್ ಠಾಣೆಯಲ್ಲಿ (ಗುನ್ನೆ ಸಂಖ್ಯೆ: 341/2021) ಪ್ರಕರಣ ದಾಖಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಅಂದಿನ ತನಿಖಾಧಿಕಾರಿಗಳಾದ ಪೊಲೀಸ್ ಇನ್‌ಸ್ಪೆಕ್ಟರ್ ಎಂ.ಎಸ್. ದೀಪಕ್ ಮತ್ತು ಮಂಜುನಾಥ್ ಅವರು ತನಿಖೆ ನಡೆಸಿ, ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಕಲಂ 498(ಎ) ಮತ್ತು 302 ರ ಅಡಿಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಿದ್ದರು.

 ನ್ಯಾಯಾಲಯದ ತೀರ್ಪು

 ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಮಾನ್ಯ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ಶ್ರೀಮತಿ ಪ್ರೀತಿ ಕೆ.ಪಿ. ಅವರು, ಆರೋಪಿಯ ಮೇಲಿನ ಅಪರಾಧ ದೃಢಪಟ್ಟ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 23. ರಂದು ತೀರ್ಪು ಪ್ರಕಟಿಸಿದ್ದಾರೆ. IPC ಕಲಂ 498(ಎ) ಹಾಗೂ 302 ರ ಅಡಿಯಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು ರೂ.2,10,000/- ದಂಡ ವಿಧಿಸಲಾಗಿದ್ದು, ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿ ಕಾರಾಗೃಹ ವಾಸದ ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಿದ್ದಾರೆ.

 ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಪುಷ್ಪ ಪಿ.ಓ. ಅವರು ವಾದ ಮಂಡಿಸಿದ್ದರು. ತನಿಖೆಗೆ ಪೊಲೀಸ್ ಸಿಬ್ಬಂದಿಯಾದ ಸಿ.ಹೆಚ್.ಸಿ ಕಿರಣ್‌ಕುಮಾರ್, ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್‌ಗಳಾದ ಪ್ರಮೀಳಾ ಮತ್ತು ಭಾಗ್ಯ ಅವರು ಸಹಕರಿಸಿದ್ದರು.

 

* ಸೆ.28 ರಿಂದ 30ರವರೆಗೆ ಬ್ಯಾಂಕ್ ಮುಷ್ಕರ : ಸೆ.27ರ ಭಾನುವಾರ ಬ್ಯಾಂಕ್ ಸೇವೆ ಲಭ್ಯ

 ಶಿವಮೊಗ್ಗ :  ಬ್ಯಾಂಕ್ ಸಂಘಗಳ ಸಂಯುಕ್ತ ವೇದಿಕೆ (UFBU) ಯು ಸೆ.28 ರಿಂದ 30ರ ವರೆಗೆ ದೇಶ ವ್ಯಾಪಿ ಮುಷ್ಕರ ಘೋಷಿಸಿರುವ ಹಿನ್ನೆಲೆಯಲ್ಲಿ, ಹಾಗೂ ಸೆ. 26 ಮತ್ತು 27 ರಂದು ವಾರದ ರಜೆ ಇರುವುದರಿಂದ ಬ್ಯಾಂಕ್ ಗ್ರಾಹಕರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲು, ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳ ಮತ್ತು ಗ್ರಾಮೀಣ ಬ್ಯಾಂಕುಗಳ ಶಾಖೆಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲು ಆರ್‌ಬಿಐ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ರಾಷ್ಟ್ರೀಕೃತ ಹಾಗೂ ಗ್ರಾಮೀಣ ಬ್ಯಾಂಕುಗಳ ಶಾಖೆಗಳು ದಿನಾಂಕ 27.09.2026 ರ ಭಾನುವಾರದಂದು ತೆರೆಯಲಿದ್ದು ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ಹನುಮಂತಪ್ಪ ಪಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular