ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 28 ರಂದು ಬೆಳಿಗ್ಗೆ 10 ಗಂಟೆಗೆ ನೇರ ‘ಉದ್ಯೋಗ ಮೇಳ’ವನ್ನು ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ.
ದಿನಾಂಕ: 28-09-2026 ರಂದು ಬೆಳಿಗ್ಗೆ 10:00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದ್ದು, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ 18 ರಿಂದ 35 ವರ್ಷ ಒಳಗಿನ ಹಾಗೂ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಭಾಗವಹಿಸಬಹುದು.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ತರಬೇಕಾಗಿ ವಿನಂತಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರನ್ನು ನೇರವಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ: 9380663606 ಗೆ ಕರೆ ಮಾಡಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ವಿಕಲಚೇತನರ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
ಶಿವಮೊಗ್ಗ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ಫಲಾನುಭವಿ ಆಧಾರಿತ ಯೋಜನೆಗಳ ಸೌಲಭ್ಯಕ್ಕಾಗಿ ವಿಕಲಚೇತನರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಡಿ.ಬಿ.ಟಿ (ನೇರ ನಗದು ವರ್ಗಾವಣೆ) ತಂತ್ರಾಂಶದಡಿ ಶಿವಮೊಗ್ಗ ಜಿಲ್ಲೆಯ ವಿಶೇಷ ವಿಕಲಚೇತನ ವ್ಯಕ್ತಿಗಳು ಇಲಾಖೆಯ 14 ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ವಿಕಲಚೇತನ ಫಲಾನುಭವಿಗಳು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಸೇವಾಸಿಂಧು/ಸೇವಾ ಒನ್ https://sevaone.karnataka.gov.in;ಪೋರ್ಟಲ್ ಮೂಲಕ ದಿನಾಂಕ 22-09-2026 ರಿಂದ 30-10-2026 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
ನಿಗದಿತ ಅಂತಿಮ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳಿಗೆ ಅವಕಾಶವಿರುವುದಿಲ್ಲ. ಆದ್ದರಿಂದ ಶಿವಮೊಗ್ಗ ಜಿಲ್ಲೆಯ ಅರ್ಹ ವಿಕಲಚೇತನರು ಸೌಲಭ್ಯ ಪಡೆಯಲು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯ ವಿವಿಧ ಹೋಬಳಿಗಳಲ್ಲಿ ಸೆಪ್ಟೆಂಬರ್ 26 ರಂದು ‘ಪ್ರಜಾಸೇವೆ ಆಂದೋಲನ ಸಭೆ’
ಶಿವಮೊಗ್ಗ: ಸರ್ಕಾರದ ಸುತ್ತೋಲೆಯನ್ವಯ ಶಿವಮೊಗ್ಗ ಜಿಲ್ಲೆಯಾದ್ಯಂತ ದಿನಾಂಕ 26-09-2026 ರಂದು ಹೋಬಳಿ ಮಟ್ಟದಲ್ಲಿ ‘ಪ್ರಜಾಸೇವೆ ಆಂದೋಲನ ಸಭೆ’ಗಳನ್ನು ಆಯೋಜಿಸಲಾಗಿದೆ. ಈ ಕುರಿತು ಶಿವಮೊಗ್ಗ ಹಾಗೂ ಸಾಗರ ಉಪ ವಿಭಾಗಾಧಿಕಾರಿಗಳಿಗೆ ಮತ್ತು ಜಿಲ್ಲೆಯ ಎಲ್ಲಾ ತಹಶೀಲ್ದಾರರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಸಾರ್ವಜನಿಕರ ಕುಂದುಕೊರತೆಗಳ ದಾಖಲಾತಿ ಮಾಡಿಕೊಂಡು ವರದಿ ಸಲ್ಲಿಸುವ ಉದ್ದೇಶದಿಂದ ಈ ಸಭೆಗಳನ್ನು ಕರೆಡಲಾಗಿದ್ದು, ನಿಗದಿಪಡಿಸಿದ ಸ್ಥಳಗಳಲ್ಲಿ ಅಗತ್ಯ ಪೂರ್ವಸಿದ್ದತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಆದೇಶಿಸಲಾಗಿದೆ.
ಸಭೆ ನಡೆಯುವ ಸ್ಥಳಗಳ ವಿವರ:
ಶಿವಮೊಗ್ಗ ತಾಲ್ಲೂಕು, ಕಸಬಾ ಹೋಬಳಿ: ಶಿವಮೊಗ್ಗ ಮಹಾನಗರ ಪಾಲಿಕೆ ಸಭಾಂಗಣ
ಭದ್ರಾವತಿ ತಾಲ್ಲೂಕು, ಹೊಳೆಹೊನ್ನೂರು ಹೋಬಳಿ : ಸತ್ಯಧರ್ಮ ಕಲ್ಯಾಣ ಮಂಟಪ, ಹೊಳೆಹೊನ್ನೂರು.
ತೀರ್ಥಹಳ್ಳಿ ತಾಲ್ಲೂಕು ಅಗ್ರಹಾರ ಹೋಬಳಿ: ಗ್ರಾಮ ಪಂಚಾಯಿತಿ ಆವರಣ, ಕೋಣಂದೂರು.
ಶಿಕಾರಿಪುರ ತಾಲ್ಲೂಕು, ತಾಳಗುಂದ ಹೋಬಳಿ : ಗ್ರಾಮ ಪಂಚಾಯಿತಿ ಆವರಣ, ತಾಳಗುಂದ.
ಸೊರಬ ತಾಲ್ಲೂಕು ಉಳವಿ ಹೋಬಳಿ : ಗ್ರಾಮ ಪಂಚಾಯಿತಿ ಆವರಣ, ಉಳವಿ.
ಹೊಸನಗರ ತಾಲ್ಲೂಕು, ಹುಂಚ ಹೋಬಳಿ: ಪದ್ಮಾಂಬ ಪ್ರೌಢಶಾಲೆ ಸಭಾಭವನ, ಹುಂಚ ಇಲ್ಲಿ ಸಭೆಗಳನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ಈ ಸಭೆಗಳ ಸೌಲಭ್ಯವನ್ನು ಪಡೆದುಕೊಂಡು ತಮ್ಮ ಕುಂದುಕೊರತೆಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

