HomeKarnatakaಭದ್ರಾ ನಾಲೆಗಳ ಮೂಲಕ ಕುಡಿಯುವ ನೀರು ಪೂರೈಕೆ: ನಾಲೆಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಭದ್ರಾ ನಾಲೆಗಳ ಮೂಲಕ ಕುಡಿಯುವ ನೀರು ಪೂರೈಕೆ: ನಾಲೆಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ದಾವಣಗೆರೆ: ಭದ್ರಾ ಜಲಾಶಯದ ಬಲದಂಡೆ, ಎಡದಂಡೆ, ಗೊಂದಿ ಹಾಗೂ ಇತರೆ ವಿತರಣಾ ನಾಲೆಗಳ ಮೂಲಕ ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ಹಾಗೂ ಕೆರೆ ಕಟ್ಟೆಗಳನ್ನು ತುಂಬಿಸಲು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ನೀರು ಹರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಾಲೆಗಳ 200 ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

ಪ್ರಸ್ತುತ ಮಳೆಯ ಕೊರತೆಯಿರುವುದರಿಂದ ಅಂತರ್ಜಲ ವೃದ್ಧಿ ಹಾಗೂ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ಈ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಹರಿಸುತ್ತಿರುವ ನೀರನ್ನು ಡಿಸೆಂಬರ್ 2026ರ ವರೆಗೆ ಕುಡಿಯುವ ನೀರಿಗೆ ಕೊರತೆಯಾಗದಂತೆ ಸದ್ಬಳಕೆ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ರೈತರು ಈ ನೀರನ್ನು ಕೃಷಿ ಬೆಳೆಗಳಿಗೆ ಉಪಯೋಗಿಸುವಂತಿಲ್ಲ ಹಾಗೂ ಮೋಟಾರ್ ಮೂಲಕ ಅನಧಿಕೃತವಾಗಿ ನೀರೆತ್ತುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರ ಅನ್ವಯ ಅಕ್ಟೋಬರ್ 2, 2026ರ ಮಧ್ಯರಾತ್ರಿ 12.00 ಗಂಟೆಯವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ಆದೇಶವು ಭದ್ರಾ ಬಲದಂಡೆ ನಾಲೆ, ದಾವಣಗೆರೆ ಶಾಖಾ ನಾಲೆ, ಮಲೆಬೆನ್ನೂರು ಶಾಖಾ ನಾಲೆ, ಆನವೇರಿ ಶಾಖಾ ನಾಲೆ ಹಾಗೂ ಇದರ ವ್ಯಾಪ್ತಿಯ ಎಲ್ಲಾ ವಿತರಣಾ ನಾಲೆಗಳಿಗೆ ಅನ್ವಯಿಸುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಅವಧಿಯಲ್ಲಿ ಕಾಲುವೆಗಳ ಪಾತ್ರದಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಆದೇಶ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಅಚ್ಚುಕಟ್ಟು ಭಾಗದ ಎಲ್ಲಾ ರೈತ ಬಾಂಧವರು ಇಲಾಖೆಯೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

ಸೆ.26 ರಂದು  ನಗರದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ನಗರ ಉಪವಿಭಾಗ-2 ರ ವ್ಯಾಪ್ತಿಯ 66/11 ಕೆವಿ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್18-ದುರ್ಗಾಂಭಿಕ ಫೀಡರ್ ಮಾರ್ಗದಲ್ಲಿ ತುರ್ತು ಜಲಸಿರಿ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಸೆಪ್ಟೆಂಬರ್‌ 26 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 3 ಗಂಟೆಯವರೆಗೆ ಬಾರ್ ಲೈನ್ ರೋಡ್, ಕಾಡಪ್ಪ ಕಣ, ಕಾಯಿ ಪೇಟೆ, ಎಂ.ಬಿ. ಕೆರೆ, ಹೊಂಡದ ಸರ್ಕಲ್, ಚಲುವಾದಿಕೇರಿ, ಜಾಲಿ ನಗರ, ಟೀಚರ್ಸ್ ಕಾಲೋನಿ, ಶಿವಾಜಿನಗರ, ದುರ್ಗಾಂಭಿಕ ದೇವಸ್ಥಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ. ಸಂಬಂಧಪಟ್ಟ ಪ್ರದೇಶಗಳ ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಈ ಕಾಮಗಾರಿಗೆ ಸಹಕರಿಸಬೇಕಾಗಿ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ಸೆ. 28 ಮತ್ತು 29 ರಂದು ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ದಾವಣಗೆರೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆಯ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಸೆಪ್ಟೆಂಬರ್ 28 ಮತ್ತು 29 ರಂದು ರೈತರಿಗೆ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಈ ತರಬೇತಿಯು ದಾವಣಗೆರೆ ಜಿಲ್ಲೆಯ ರೈತರಿಗೆ ಮಾತ್ರ ಸೀಮಿತವಾಗಿದ್ದು, ಒಟ್ಟು 30 ಜನ ರೈತರಿಗೆ ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದಾವಣಗೆರೆಯ ಪಶುವೈದ್ಯಕೀಯ ಸಹಾಯಕರ ತರಬೇತಿ ಕೇಂದ್ರದ ದೂರವಾಣಿ ಸಂಖ್ಯೆ: 08192-233787 ಅನ್ನು ಸಂಪರ್ಕಿಸಬಹುದು ಎಂದು ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು(ಆಡಳಿತ) ತಿಳಿಸಿದ್ದಾರೆ.

ಬಿದರಕೆರೆ ಮತ್ತು ಜಗಳೂರು ಸುತ್ತಮುತ್ತಲು ವಿದ್ಯುತ್ ವ್ಯತ್ಯಯ

ದಾವಣಗೆರೆ: ಚಿತ್ರದುರ್ಗದ 220/66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ದುರಸ್ತಿ ಮತ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ, 66/11 ಕೆವಿ ಬಿದರಕೆರೆ ಮತ್ತು ಜಗಳೂರು ವಿದ್ಯುತ್ ವಿತರಣಾ ಕೇಂದ್ರಗಳಿಗೆ ಒಳಪಡುವ ಎನ್‌ಜೆವೈ  ಮತ್ತು ಐಪಿ ಮಾರ್ಗಗಳ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ  ಸೆಪ್ಟೆಂಬರ್ 26 ರಂದು  ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕಾಗಿ ಬೆಸ್ಕಾಂ ಜಗಳೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular