HomeKarnatakaರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ ಕುರಿತು ಸಿಎಂ ಡಿ.ಕೆ ಶಿವಕುಮಾರ್ ಮಹತ್ವದ ಹೇಳಿಕೆ

ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ ಕುರಿತು ಸಿಎಂ ಡಿ.ಕೆ ಶಿವಕುಮಾರ್ ಮಹತ್ವದ ಹೇಳಿಕೆ

ಬೆಂಗಳೂರು:ರಾಜ್ಯದಲ್ಲಿ  ಹಾಲಿನ ದರ ಏರಿಕೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಹಾಲಿನ ದರವನ್ನು ಪ್ರತಿ ಲೀಟರ್‌ಗೆ 12 ರೂ. ಹೆಚ್ಚಳ ಮಾಡುವಂತೆ ಹಾಲು ಒಕ್ಕೂಟಗಳು ಮನವಿ ಮಾಡಿವೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಇದೇ ವೇಳೆ ಹಾಲಿನ ದರದ ಬಗ್ಗೆ ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಸಂಬಂಧಿಸಿದ ವರದಿಗಳನ್ನು ತರಿಸಿಕೊಂಡು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು.  ರಾಜ್ಯದ ರೈತರ ಹಿತಾಸಕ್ತಿ ಮತ್ತು ರಕ್ಷಣೆಗೆ ಅಗತ್ಯ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು , ಹಾಲಿನ ದರ ಏರಿಕೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ ಮಾಡುವಂತೆ ಕರ್ನಾಟಕ ಹಾಲು ಮಹಾಮಂಡಳಿ (KMF) ಹಾಗೂ ಹಾಲು ಒಕ್ಕೂಟಗಳ ಮಟ್ಟದಲ್ಲಿ ಬೇಡಿಕೆ ಕೇಳಿಬಂದಿದೆ. ರೈತರಿಗೆ ಹಾಲಿನ ದರ ಹೆಚ್ಚಳದ ಪ್ರಯೋಜನ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ವ್ಯಕ್ತವಾಗಿದೆ.

ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹12 ರಷ್ಟು ಹೆಚ್ಚಿಸುವಂತೆ ಮನವಿ ಮಾಡಲಾಗಿದೆ. ಹಾಲಿನ ಉತ್ಪಾದನಾ ವೆಚ್ಚ, ರೈತರ ಸಮಸ್ಯೆಗಳು ಹಾಗೂ ಹಾಲು ಒಕ್ಕೂಟಗಳ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ ದರ ಪರಿಷ್ಕರಣೆ ಮಾಡುವ ಅಗತ್ಯವಿದೆ ಎಂದು ತಿಳಿಸಲಾಗಿದೆ. ಈ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ರೈತರ ಹಿತಾಸಕ್ತಿ ಹಾಗೂ ಗ್ರಾಹಕರ ಮೇಲಿನ ಹೊರೆ ಎರಡನ್ನೂ ಗಮನದಲ್ಲಿಟ್ಟುಕೊಂಡು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.ಮೂಲಗಳ ಪ್ರಕಾರ ಲೀಗೆ 5-6 ರೂ ಏರಿಕೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಕೃಷಿ ಮೇಳ -2026: ಬೀಜ ಮೇಳ ಉದ್ಘಾಟನೆ

ಧಾರವಾಡ : ಕೃಷಿಯಲ್ಲಿ ತಲೆ ತಲಾಂತರದಿಂದ ಹಳೆಯ ತಳಿಗಳನ್ನು ಸಂರಕ್ಷಿಸಿಕೊಂಡು ಬರಲಾಗುತ್ತಿದೆ. ಹಿಂದಿನ ತಳಿಗಳನ್ನು ಸಂರಕ್ಷಿಸಿ ಕಾಪಾಡಬೇಕಿದೆ. ಆ ನಿಟ್ಟಿನಲ್ಲಿ ಹಳೆಯ ತಳಿಗಳ ಬೀಜಗಳನ್ನು ಸಂರಕ್ಷಣೆ ಮಾಡುವುದು ಅವಶ್ಯವಿದೆ ಎಂದು ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ.ಆರ್.ಆರ್.ಹಂಚಿನಾಳ ಅವರು ಹೇಳಿದರು.

ಇಂದು ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಕೃಷಿ ಮೇಳ 2026 ರ ಅಂಗವಾಗಿ ಆಯೋಜಿಸಲಾಗಿದ್ದ ಬೀಜ ಮೇಳವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಪೂರ್ವಜರ ಪ್ರಯತ್ನದಿಂದ ಹಳೆಯ ತಳಿಗಳನ್ನು ಬೆಳೆಯಲಾಗುತ್ತಿದೆ. ಹಳೆಯ ತಳಿಗಳು ಭೂಮಿಯ ಲವಣಾಂಶ ಹೀರಿಕೊಂಡು ಬೆಳೆಯುತ್ತವೆ. ಆದರೆ ಯಾವುದೇ ತರಹದ ರಾಸಾಯನಿಕ ಗೊಬ್ಬರವನ್ನು ಬಳಸುತ್ತಿರಲಿಲ್ಲ. ಸುಮಾರು 2 ಲಕ್ಷಕ್ಕೂ ಅಧಿಕ ಭತ್ತದ ತಳಿಗಳು ಇವೆ. ಬೀಜದ ಮಹತ್ವ ಹೇಳಿಕೊಡುವುದು ಬಹಳ ಮುಖ್ಯವಾಗಿದೆ. ಒಳ್ಳೆಯ ಫಲವತ್ತಾದ ಭೂಮಿಯಲ್ಲಿ ಬೀಜಗಳನ್ನು ಹಾಕಿದರೆ ಉತ್ತಮ ಇಳುವರಿಯನ್ನು ಪಡೆಯಬಹುದಾಗಿದೆ ಎಂದು ಅವರು ತಿಳಿಸಿದರು.

ಹಳೆಯ ತಳಿಯ ಬೀಜಗಳನ್ನು ಬಿತ್ತಿದರೆ, ಶೇ.18 ರಿಂದ 20 ರಷ್ಟು ಹೆಚ್ಚಿನ ಇಳುವರಿ ಪಡೆಯಬಹುದು. ಅಲ್ಲದೇ ರಸಗೊಬ್ಬರ, ಕೊಟ್ಟಿಗೆ ಗೊಬ್ಬರ ಬಳಸಿದರೆ ಇನ್ನೂ ಹೆಚ್ಚಿನ ಇಳುವರಿಯನ್ನು ಪಡೆಯಬಹುದಾಗಿದೆ. ಒಳ್ಳೆಯ ಆಹಾರದಿಂದ ಉತ್ತಮ ಸಮಾಜವನ್ನು ನಿರ್ಮಿಸಬಹುದು. ದೇಶಕ್ಕೆ ಮಾದರಿಯಾದ ಕೃಷಿ ವಿಶ್ವವಿದ್ಯಾಲಯವು ರೈತರೊಂದಿಗೆ ಬೆರೆತು ಮುನ್ನಡೆಯಬೇಕು ಎಂದರು.

ರೈತರ ಭಾಗಿತ್ವದಲ್ಲಿ ಬೀಜ ಉತ್ಪಾದನೆ ಮಾಡಿದರೆ ಎಲ್ಲರಿಗೂ ಅನುಕೂಲವಾಗಲಿದೆ. ಇಲ್ಲಿನ ಬೀಜಗಳು ರಾಜಸ್ಥಾನ, ಅಸ್ಸಾಂ ಸೇರಿದಂತೆ ಇಂಡೋನೇμÁ್ಯ ದೇಶಕ್ಕೂ ರಫ್ತು ಮಾಡಲಾಗಿರುತ್ತದೆ. ರೈತರ ತಳಿಗಳಿಗೆ ಪೇಟೆಂಟ್ ನೀಡಲಾಗಿದೆ. ತಳಿ ಸಂಶೋಧನೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬೇಕು. ರೈತರು ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎನ್.ಬಿ.ಪ್ರಕಾಶ ಅವರು ಮಾತನಾಡಿ, ಗುಣಮಟ್ಟದ ಬೀಜದಿಂದ ಮಾತ್ರ ಒಳ್ಳೆಯ ಇಳುವರಿ ಪಡೆಯಲು ಸಾಧ್ಯ. ಆರೋಗ್ಯ ಕಾಪಾಡಲು ಒಳ್ಳೆಯ ಆಹಾರ ಅವಶ್ಯಕವಾಗಿದೆ. ಕೃಷಿ ವಿಶ್ವವಿದ್ಯಾಲಯದಲ್ಲಿ ಬೀಜ ಘಟಕ ಸ್ಥಾಪನೆಯಾಗಿ 25 ವರ್ಷಗಳು ಕಳೆದಿವೆ. ರೈತರ ಸಹಭಾಗಿತ್ವದಲ್ಲಿ ಬೀಜ ಉತ್ಪಾದನೆ ಮಾಡಲಾಗುವುದು. ಬೀಜ ಘಟಕವು ಐಸಿಎಆರ್ ನಿಂದ 2013 ಮತ್ತು 2020 ರಲ್ಲಿ ಪ್ರಶಸ್ತಿ ಪಡೆದುಕೊಂಡಿದೆ. ರೈತರ ಬೀಜಗಳನ್ನು ಸಂರಕ್ಷಿಸುವುದು ಬಹಳ ಮುಖ್ಯವಾಗಿದೆ. ಹಿಂದಿನ ಕಾಲದ ಬೀಜಗಳನ್ನು ಕಾಪಾಡಿಕೊಳ್ಳಬೇಕಿದೆ. ಶೇಂಗಾ ಬೆಳೆಯ ತಳಿಗೆ ಅಂತರಾಷ್ಟ್ರೀಯ ಪ್ರಶಸ್ತಿ ಸಹ ದೊರೆತಿದೆ. ರೈತರ ಆರ್ಥಿಕ ಸ್ಥಿತಿಯೂ ಸಹ ಬದಲಾಗಿದೆ. ಕೃಷಿ ಮೇಳದಲ್ಲಿ ಬೀಜ ಮೇಳವನ್ನು ಮೊದಲ ಬಾರಿಗೆ ಆಯೋಜನೆ ಮಾಡಲಾಗಿದೆ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ 2026 ರ ಶ್ರೇಷ್ಠ ಬೀಜೋತ್ಪಾದಕರಾದ ಶೋಭಾ ಕಾಲವಾಡ, ನಿರ್ಮಲಾ ನಾಗನೂರ, ಶಿವನಗೌಡ ಬಾಳನಗೌಡರ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿಯ ಸದಸ್ಯರಾದ ವೀರನಗೌಡ ಪೆÇಲೀಸಗೌಡರ, ಪಾರ್ವತಿ ಕುರ್ಲೆ, ರವಿಕುಮಾರ ಮಾಳಿಗೇರ, ಬಸವರಾಜ ಕುಂದಗೋಳಮಠ, ಮಾಲತೇಶ ಶ್ಯಾಗೋಟಿ, ಜಯಶ್ರೀ ಶಿಂತ್ರಿ, ಕೃಷಿ ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕ ಡಾ.ಎಂ.ವಿ. ಮಂಜುನಾಥ, ವಿಸ್ತರಣಾ ನಿರ್ದೇಶಕಿ ಡಾ.ಮಂಜುಳಾ ಎನ್. ಸೇರಿದಂತೆ ವಿಶ್ವವಿದ್ಯಾಲಯದ ಅಧಿಕಾರಿಗಳು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ರೈತರು, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸೌಜನ್ಯ ಹಿರೇಮಠ ಪ್ರಾರ್ಥಿಸಿದರು. ಕೃಷಿ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ.ಎ.ಎಸ್.ಸಜ್ಜನ ಸ್ವಾಗತಿಸಿದರು. ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಡಾ.ಸುರೇಖಾ ಸಂಕನಗೌಡರ ನಿರೂಪಿಸಿದರು. ಕೃಷಿ ವಿಶ್ವವಿದ್ಯಾಲಯದ ವಿಶೇಷ ಅಧಿಕಾರಿ ಡಾ.ಟಿ.ಆರ್.ಶಶಿಧರ ವಂದಿಸಿದರು.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular