HomeUncategorizedಪ್ರವಾಸಿಗರಿಗೆ ಗುಡ್ ನ್ಯೂಸ್: ಸಕ್ರೆಬೈಲು ಆನೆ ಬಿಡಾರ ಪುನರಾರಂಭ

ಪ್ರವಾಸಿಗರಿಗೆ ಗುಡ್ ನ್ಯೂಸ್: ಸಕ್ರೆಬೈಲು ಆನೆ ಬಿಡಾರ ಪುನರಾರಂಭ

ಶಿವಮೊಗ್ಗ: ದುಬಾರೆ ಆನೆ ಶಿಬಿರದಲ್ಲಿ ನಡೆದ ಆಕಸ್ಮಿಕ ದುರ್ಘಟನೆಯ ಬಳಿಕ ತಾತ್ಕಾಲಿಕವಾಗಿ ಬಂದ್ ಆಗಿದ್ದ ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಸಕ್ರೆಬೈಲು ಆನೆ ಬಿಡಾರ ಪ್ರವಾಸಿಗರ ಪ್ರವೇಶಕ್ಕೆ ಪುನರಾರಂಭಗೊಂಡಿದೆ.

ಇಂದಿನಿಂದ ಸಕ್ರೆಬೈಲು ಆನೆ ಬಿಡಾರದಲ್ಲಿ ಪ್ರವಾಸಿಗರ ಪ್ರವೇಶ ಪುನರಾರಂಭವಾಗಿದ್ದು, ವೀಕ್ಷಣೆಗೆ ಅವಕಾಶ ನೀಡಿದ ಮೊದಲ ದಿನವೇ 400ಕ್ಕೂ ಹೆಚ್ಚು ಪ್ರವಾಸಿಗರು ಸಕ್ರೆಬೈಲು ಆನೆ ಬಿಡಾರಕ್ಕೆ ಭೇಟಿ ನೀಡಿದ್ದಾರೆ.

ಅಧಿಕಾರಿಗಳು ಪ್ರವಾಸಿಗರ ಸುರಕ್ಷತೆಗೆ ಮಾರ್ಗಸೂಚಿ ಪಾಲನೆ ಮಾಡಿದ್ದಾರೆ. ಪ್ರವಾಸಿಗರ ವೀಕ್ಷಣಾ ಪ್ರದೇಶದಲ್ಲಿ ಪ್ರತಿನಿತ್ಯ 8 ರಿಂದ 10 ಆನೆಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಆನೆಗಳ ಮೈ ತೊಳೆಯುವ ಪ್ರದೇಶಕ್ಕೆ ಪ್ರವಾಸಿಗರಿಗೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ, ಹೊಸ ಮಾರ್ಗಸೂಚಿಯಂತೆ ಆನೆಗಳ ವೀಕ್ಷಣೆಗೆ ಪ್ರವಾಸಿಗರಿಗೆ ದೂರದಿಂದ ಮಾತ್ರ ಅವಕಾಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದುಬಾರೆ ಆನೆ ಶಿಬಿರದಲ್ಲಿ ಕಳೆದ ಏಪ್ರಿಲ್ 18ರಂದು ಎರಡು ಆನೆಗಳ ನಡುವಿನ ಕಾದಾಟದಲ್ಲಿ ಓರ್ವ ಪ್ರವಾಸಿ ಮಹಿಳೆ ಮೃತಪಟ್ಟಿದ್ದರು. ಈ ಘಟನೆ ಬಳಿಕ ಪ್ರವಾಸಿಗರ ಸುರಕ್ಷತೆಯನ್ನ ಗಮನದಲ್ಲಿಟ್ಟುಕೊಂಡು ರಾಜ್ಯದ ಎಲ್ಲಾ ಆನೆ ಶಿಬಿರಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು.

ಇದೀಗ ಹಲವು ಸುರಕ್ಷತಾ ಮಾರ್ಗಸೂಚಿಗಳನ್ನು ಜಾರಿಗೊಳಿಸುವ ಮೂಲಕ ಸಕ್ರೆಬೈಲು ಆನೆ ಬಿಡಾರವನ್ನ ಪುನರಾರಂಭಿಸಲಾಗಿದೆ. ಶಿಬಿರಕ್ಕೆ ಆಗಮಿಸುವ ಪ್ರವಾಸಿಗರು ಹಾಗೂ ಆನೆಗಳ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಎರಡು ಗುಂಪುಗಳಿಗೆ ಪ್ರತ್ಯೇಕ ಮಾರ್ಗಗಳನ್ನು ಗುರುತಿಸಲಾಗಿದೆ.

ಮುಖ್ಯವಾಗಿ, ಸಾರ್ವಜನಿಕರು ಮತ್ತು ಆನೆಗಳ ನಡುವೆ ನೇರ ಸಂಪರ್ಕವಾಗದಂತೆ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಪ್ರವಾಸಿಗರು ಆನೆಗಳನ್ನು ವೀಕ್ಷಿಸುವ ಸಂದರ್ಭದಲ್ಲಿ ಅಹಿತಕರ ಘಟನೆಗಳು ಸಂಭವಿಸುವ ಸಾಧ್ಯತೆಯನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಪ್ರವಾಸಿಗರಿಗೆ ಅಗತ್ಯ ಮಾಹಿತಿ ನೀಡಲು ಹಾಗೂ ಸುರಕ್ಷತಾ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲು ಶಿಬಿರದ ವಿವಿಧೆಡೆ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಶಿಬಿರಕ್ಕೆ ಭೇಟಿ ನೀಡುವವರು ಅರಣ್ಯ ಇಲಾಖೆ ಸೂಚಿಸಿರುವ ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ.

ಸಕ್ರೆಬೈಲು ಆನೆ ಬಿಡಾರದಲ್ಲಿ ಪ್ರವಾಸಿಗರು ಆನೆಗಳನ್ನು ಬಹಳ ಹತ್ತಿರದಿಂದ ವೀಕ್ಷಿಸುವ ಅವಕಾಶವುರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಇದೀಗ ಹಲವು ತಿಂಗಳ ಬಳಿಕ ಶಿಬಿರ ಮತ್ತೆ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗುತ್ತಿರುವುದರಿಂದ ಪ್ರವಾಸಿಗರಲ್ಲಿ ಸಂಭ್ರಮ ಮನೆ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular