HomeKarnatakaಬದುಕಿರುವ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು: ರೇಷನ್, ಬ್ಯಾಂಕ್ ಖಾತೆ ರದ್ದಾಗಿ ಸಂಕಷ್ಟಕ್ಕೀಡಾದ...

ಬದುಕಿರುವ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು: ರೇಷನ್, ಬ್ಯಾಂಕ್ ಖಾತೆ ರದ್ದಾಗಿ ಸಂಕಷ್ಟಕ್ಕೀಡಾದ ವ್ಯಕ್ತಿ

ಮಂಡ್ಯ: ಅಧಿಕಾರಿಗಳು ಮಾಡಿದ ಎಡವಟ್ಟಿನಿಂದಾಗಿ ಬದುಕಿರುವ ವ್ಯಕ್ತಿಯೊಬ್ಬರ ದಾಖಲೆಗಳಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಉಲ್ಲೇಖಿಸಿರುವ ಘಟನೆ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ.

ಅಧಿಕಾರಿಗಳ ಬೇಜವಬ್ದಾರಿಗೆ ವ್ಯಕ್ತಿ ಪರದಾಡುವಂತಾಗಿದೆ. ಅಧಿಕಾರಿಗಳ ಈ ಒಂದು ತಪ್ಪಿನಿಂದಾಗಿ ಬಡ ಕುಟುಂಬವೊಂದು ರೇಷನ್ ಕಾರ್ಡ್, ಮತದಾರರ ಹಕ್ಕು ಹಾಗೂ ಬ್ಯಾಂಕ್ ವಹಿವಾಟುಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಡ್ಯ ನಗರದ ಗುತ್ತಲು ಬಡಾವಣೆಯ ಟಿಪ್ಪು ರಸ್ತೆ ನಿವಾಸಿ ಶಫಿಉಲ್ಲಾ ಖಾನ್ ಎಂಬವರೇ ಅಧಿಕಾರಿಗಳ ಎಡವಟ್ಟಿನಿಂದ ಪೆಚೆಗೆ ಸಿಲುಕಿದವರು. ಶಫಿಉಲ್ಲಾ ಖಾನ್ ಅವರಿಗೆ ಕಳೆದ ಎರಡು ತಿಂಗಳಿಂದ ನ್ಯಾಯಬೆಲೆ ಅಂಗಡಿಯಲ್ಲಿ ರೇಷನ್ ಸಿಗುತ್ತಿರಲಿಲ್ಲ. ಇದರಿಂದ ಸಂಶಯಗೊಂಡು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಲು ಹೋದಾಗ ಅಧಿಕಾರಿಗಳು ನೀಡಿದ ಮಾಹಿತಿ ಕೇಳಿ ಶಾಕ್ ಆಗಿದ್ದಾರೆ. “ನೀವು 2024ರಲ್ಲಿಯೇ ಸಾವನ್ನಪ್ಪಿದ್ದೀರಿ ಎಂದು ವ್ಯವಸ್ಥೆಯಲ್ಲಿ ಅಪ್‌ಡೇಟ್ ಆಗಿದೆ” ಎಂದು ಸಿಬ್ಬಂದಿ ಹೇಳಿದ್ದಾರೆ.

ಈ ವಿಷಯ ತಿಳಿಯುತ್ತಿದ್ದಂತೆ ಶಫಿಉಲ್ಲಾ ಖಾನ್ ನಗರಸಭೆಗೆ ತೆರಳಿ ವಿಚಾರಣೆ ನಡೆಸಿದ್ದಾರೆ. ಆಗ ಮಂಡ್ಯದ ಮಿಮ್ಸ್ ಆಸ್ಪತ್ರೆ ನೀಡಿದ ಮರಣ ವರದಿಯ ಆಧಾರದ ಮೇಲೆ ನಗರಸಭೆಯಿಂದ ‘ಡೆತ್ ಸರ್ಟಿಫಿಕೇಟ್’ ನೀಡಲಾಗಿದೆ ಎಂದು ತಿಳಿದುಬಂದಿದೆ. ಯಾರೋ ಮಾಡಿದ ತಪ್ಪಿಗೆ ಶಫಿಉಲ್ಲಾ ಖಾನ್ ಅವರ ಹೆಸರು ರೇಷನ್ ಕಾರ್ಡ್ ಹಾಗೂ ಮತದಾರರ ಪಟ್ಟಿಯಿಂದ ಸಂಪೂರ್ಣವಾಗಿ ಡಿಲೀಟ್ ಆಗಿದೆ. ಅಷ್ಟೇ ಅಲ್ಲದೆ, ಜೀವಂತವಾಗಿದ್ದರೂ ಸತ್ತಿದ್ದಾರೆ ಎಂದು ದಾಖಲಾಗಿರುವುದರಿಂದ ಅವರ ಬ್ಯಾಂಕ್ ಖಾತೆ ವಹಿವಾಟುಗಳೂ ಸ್ತಬ್ಧವಾಗಿವೆ.

ತಪ್ಪನ್ನು ತಿದ್ದುಪಡಿ ಮಾಡಿಕೊಡುವಂತೆ ಶಫಿಉಲ್ಲಾ ಖಾನ್ ಸರಕಾರಿ ಕಚೇರಿಗಳಿಗೆ ಪ್ರತಿದಿನ ಅಲೆಯುತ್ತಿದ್ದರೂ ಅಧಿಕಾರಿಗಳು ಕನಿಷ್ಠ ಸ್ಪಂದನೆ ನೀಡುತ್ತಿಲ್ಲ. ಇನ್ನು ಈ ಕುರಿತು ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದರೆ ಪೋಲಿಸರೂ ಜಾರಿಕೊಳ್ಳುತ್ತಿದ್ದಾರೆ. ಪಶ್ಚಿಮ ಠಾಣೆಗೆ ಹೋದರೆ “ನಮ್ಮ ವ್ಯಾಪ್ತಿಗೆ ಬರಲ್ಲ, ಪೂರ್ವ ಠಾಣೆಗೆ ಹೋಗಿ” ಎನ್ನುತ್ತಾರೆ. ಪೂರ್ವ ಠಾಣೆಗೆ ತೆರಳಿದರೆ ಮತ್ತೆ ಪಶ್ಚಿಮ ಠಾಣೆಗೆ ಕಳುಹಿಸುತ್ತಿದ್ದಾರೆ.

ಯಾರೋ ಮಾಡಿದ ಎಡವಟ್ಟಿನಿಂದಾಗಿ ಪ್ರತಿಯೊಂದಕ್ಕೂ ಪರದಾಡುವಂತಾಗಿದ್ದು, “ನಾನು ಜೀವಂತವಾಗಿದ್ದೇನೆ, ನನ್ನ ದಾಖಲೆಗಳನ್ನು ಸರಿಪಡಿಸಿ ನನಗೆ ನ್ಯಾಯ ಕೊಡಿಸಿ” ಎಂದು ಶಫಿಉಲ್ಲಾ ಖಾನ್ ಕಣ್ಣೀರಿಡುತ್ತಿದ್ದಾರೆ. ಜಿಲ್ಲಾಡಳಿತ ಹಾಗೂ ಹಿರಿಯ ಅಧಿಕಾರಿಗಳು ಇನ್ನಾದರೂ ಮಧ್ಯಪ್ರವೇಶಿಸಿ ತಪ್ಪು ಸರಿಪಡಿಸಲಿದೆಯೇ? ಕಾದುನೋಡಬೇಕಿದೆ.

ಮಂಗಳೂರಿನಲ್ಲಿ ಬಾಲ್ಕನಿ ತಡೆಗೋಡೆ ಕುಸಿದು ಬಿದ್ದು ವಿದ್ಯಾರ್ಥಿ ಸಾವು ಪ್ರಕರಣ: ಕಾರ್ಯಕ್ರಮ ಆಯೋಜಕರು, ಕಟ್ಟಡ ಮಾಲೀಕರ ವಿರುದ್ಧ FIR ದಾಖಲು

ಮಂಗಳೂರು: ಸಮಾರಂಭವೊಂದರಲ್ಲಿ ಮಂಗಳೂರಿನಲ್ಲಿ ಬಾಲ್ಕನಿ ತಡೆ ಗೋಡೆ ಕುಸಿದು ಬಿದ್ದು ವಿದ್ಯಾರ್ಥಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮ ಆಯೋಜಕರು ಹಾಗೂ ಕಟ್ಟಡ ಮಾಲೀಕರ ವಿರುದ್ಧ ಎಫ್ಐರ್ ದಾಖಲಾಗಿದೆ.

ಪದಗ್ರಹಣ ಸಮಾರಂಭದಲ್ಲಿ ಕನ್ವೆನ್ ಶನ್ ಹಾಲ್ ನ ಬಾಲ್ಕನಿಯ ತಡೆ ಗೋಡೆ ಕುಸಿದು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಬ್ರೇನ್ ಡೆಡ್ ಆಗಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದ.

ಮಂಗಳೂರಿನ ಪಾಂಡವೇಶ್ವರದಲ್ಲಿ ಈ ದುರಂತ ಸಂಭವಿಸಿದೆ. ಮೊಹಮ್ಮದ್ ಶಮಾಜ್ (16) ಮೃತ ವಿದ್ಯಾರ್ಥಿ. ಮಂಗಳೂರಿನ ಅಲೋಶಿಯಸ್ ಕಾಲೇಜು ವಿದ್ಯಾರ್ಥಿಯಾಗಿದ್ದ. ನಿನ್ನೆ ರಾಮಲಕ್ಷ್ಮಣ ಕನ್ವೆನ್ಶನ್ ಹಾಲ್ ನಲ್ಲಿ ಸರ್ವ ಕಾಲೇಜು ಚುನಾವಣೆ ಹಾಗೂ ಪದಗ್ರಹಣ ಸಮಾರಂಭ ನಡೆದಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಗೊಂಡಿದ್ದ ವಿದ್ಯಾರ್ಥಿಗಳ ಸಂಭ್ರಮಾಚರಣೆ ವೇಳೆ ಕಟ್ಟಡದ ಬಾಲ್ಕನಿಯ ತಡೆಗೋಡೆ ವಿದ್ಯಾರ್ಥಿಗಳ ಮೇಲೆ ಕುಸಿದು ಬಿದ್ದಿದೆ.

ಘಟನೆಯಲ್ಲಿ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಶಮಾಜ್ ಬ್ರೇನ್ ಡೆಡ್ ಆಗಿದೆ. ಆತನ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾನೆ.

ಉಳಿದ ಗಾಯಾಳು ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಪಾಂಡವೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಗನ ಸಾವಿನ ಬೆನ್ನಲ್ಲೇ ಮೃತ ಮೊಹಮ್ಮದ್ ಶಮಾಜ್ ತಂದೆ ಪಾಂಡವೇಶ್ವರ ಠಾಣೆಯಲ್ಲಿ ದೂರು ನೀಡಿದ್ದಾರೆ. ನಿರ್ಲಕ್ಷ ಹಾಗೂ ಬೇಜವಾಬ್ದಾರಿಯಿಂದ ದುರಣ್ತ ಸಂಭವಿಸಿದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಆಯೋಜಕರು ಹಾಗೂ ಕಟ್ಟಡ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular