HomeKarnatakaಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನಾಲ್ಕು ಸಿಂಹದ ಮರಿಗಳು ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನಾಲ್ಕು ಸಿಂಹದ ಮರಿಗಳು ಸಾವು

ಶಿವಮೊಗ್ಗ: ಮಲೆನಾಡಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದಲ್ಲಿ ನಾಲ್ಕು ಸಿಂಹದ ಮರಿಗಳು ಸಾವನ್ನಪ್ಪಿದ್ದು, ಮೃಗಾಲಯದ ಸೂತಕ ಛಾಯೆ ಆವರಿಸಿದೆ.

2025ರಲ್ಲಿ ಮಧ್ಯಪ್ರದೇಶದಿಂದ ಕರೆತಂದಿದ್ದ ಸಾರಾ ಎಂಬ ಸಿಂಹಿಣಿ ಎರಡು ದಿನಗಳ ಹಿಂದಷ್ಟೇ ನಾಲ್ಕು ಮರಿಗಳಿಗೆ ಜನ್ಮ ನೀಡಿತ್ತು. ಆದರೆ ಈಗ ನಾಲ್ಕೂ ಮರಿಗಳು ಮೃತಪಟ್ಟಿವೆ. ಸಿಂಹದ ಮರಿಗಳ ಸಾವಿಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ.

ಅಳವಿನಂಚಿನ ಪ್ರಭೇದದ ಸಂತಾನೋತ್ಪತ್ತಿ ಉದ್ದೇಶದಿಂದ ಪ್ರಾಣಿ ವಿನಿಮಯ ಯೋಜನೆ ಭಾಗವಾಗಿ ಇಂದೋರ್ ನಿಂದ ‘ಶಿವ’ ಹಾಗೂ ‘ಸಾರಾ’ ಏಷ್ಯಾಟಿಕ್ ಸಿಂಹಗಳನ್ನ ಶಿವಮೊಗ್ಗ ತಾಲೂಕಿನ ತ್ಯಾವರೆಕೊಪ್ಪದಲ್ಲಿರುವ ಮೃಗಾಲಯಕ್ಕೆ ಕರೆತರಲಾಗಿತ್ತು. ಈ ಪೈಕಿ 5 ವರ್ಷದ ಸಾರಾ ಹೆಸರಿನ ಸಿಂಹ ಇತ್ತೀಚಗೆ ನಾಲ್ಕು ಮರಿಗಳಿಗೆ ಜನ್ಮ ನೀಡಿತ್ತು. ಇದರಿಂದ ಸಂಭ್ರಮ ಮನೆ ಮಾಡಿತ್ತು. ಆದ್ರೆ, ಈಗ 4 ಮರಿಗಳು ಸಾವನ್ನಪ್ಪಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೆಪ್ಟೆಂಬರ್ 16 ರಂದು 4 ಮರಿಗಳಿಗೆ ಸಿಂಹಿಣಿ ‘ಸಾರಾ’ ಜನ್ಮ ನೀಡಿತ್ತು. ಜನಿಸಿದ ಎರಡು ದಿನದಲ್ಲೇ ನಾಲ್ಕೂ ಮರಿಗಳು ಮೃತಪಟ್ಟಿವೆ. ಸಿಂಹಿಣಿ ಸಾರಾ ಮರಿಗಳಿಗೆ ಸರಿಯಾಗಿ ಹಾಲು ನೀಡದೇ ನಿರ್ಲಕ್ಷ್ಯ ವಹಿಸಿದ್ದರಿಂದ ಮರಿಗಳು ಮೃತಪಟ್ಟಿವೆ ಎನ್ನುವುದು ಮೃಗಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ವೈದ್ಯಕೀಯ ತನಿಖೆಯ ಬಳಿಕವೇ ಮರಿಗಳ ಸಾವಿಗೆ ನಿಖರ ಕಾರಣ ತಿಳಿಯಲಿದೆ.

ಮಂಗಳೂರಿನಲ್ಲಿ ಬಾಲ್ಕನಿ ತಡೆಗೋಡೆ ಕುಸಿದು ಬಿದ್ದು ವಿದ್ಯಾರ್ಥಿ ಸಾವು ಪ್ರಕರಣ: ಕಾರ್ಯಕ್ರಮ ಆಯೋಜಕರು, ಕಟ್ಟಡ ಮಾಲೀಕರ ವಿರುದ್ಧ FIR ದಾಖಲು

ಮಂಗಳೂರು: ಸಮಾರಂಭವೊಂದರಲ್ಲಿ ಮಂಗಳೂರಿನಲ್ಲಿ ಬಾಲ್ಕನಿ ತಡೆ ಗೋಡೆ ಕುಸಿದು ಬಿದ್ದು ವಿದ್ಯಾರ್ಥಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮ ಆಯೋಜಕರು ಹಾಗೂ ಕಟ್ಟಡ ಮಾಲೀಕರ ವಿರುದ್ಧ ಎಫ್ಐರ್ ದಾಖಲಾಗಿದೆ.

ಪದಗ್ರಹಣ ಸಮಾರಂಭದಲ್ಲಿ ಕನ್ವೆನ್ ಶನ್ ಹಾಲ್ ನ ಬಾಲ್ಕನಿಯ ತಡೆ ಗೋಡೆ ಕುಸಿದು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಬ್ರೇನ್ ಡೆಡ್ ಆಗಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದ.

ಮಂಗಳೂರಿನ ಪಾಂಡವೇಶ್ವರದಲ್ಲಿ ಈ ದುರಂತ ಸಂಭವಿಸಿದೆ. ಮೊಹಮ್ಮದ್ ಶಮಾಜ್ (16) ಮೃತ ವಿದ್ಯಾರ್ಥಿ. ಮಂಗಳೂರಿನ ಅಲೋಶಿಯಸ್ ಕಾಲೇಜು ವಿದ್ಯಾರ್ಥಿಯಾಗಿದ್ದ. ನಿನ್ನೆ ರಾಮಲಕ್ಷ್ಮಣ ಕನ್ವೆನ್ಶನ್ ಹಾಲ್ ನಲ್ಲಿ ಸರ್ವ ಕಾಲೇಜು ಚುನಾವಣೆ ಹಾಗೂ ಪದಗ್ರಹಣ ಸಮಾರಂಭ ನಡೆದಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಗೊಂಡಿದ್ದ ವಿದ್ಯಾರ್ಥಿಗಳ ಸಂಭ್ರಮಾಚರಣೆ ವೇಳೆ ಕಟ್ಟಡದ ಬಾಲ್ಕನಿಯ ತಡೆಗೋಡೆ ವಿದ್ಯಾರ್ಥಿಗಳ ಮೇಲೆ ಕುಸಿದು ಬಿದ್ದಿದೆ.

ಘಟನೆಯಲ್ಲಿ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಶಮಾಜ್ ಬ್ರೇನ್ ಡೆಡ್ ಆಗಿದೆ. ಆತನ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾನೆ.

ಉಳಿದ ಗಾಯಾಳು ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಪಾಂಡವೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಗನ ಸಾವಿನ ಬೆನ್ನಲ್ಲೇ ಮೃತ ಮೊಹಮ್ಮದ್ ಶಮಾಜ್ ತಂದೆ ಪಾಂಡವೇಶ್ವರ ಠಾಣೆಯಲ್ಲಿ ದೂರು ನೀಡಿದ್ದಾರೆ. ನಿರ್ಲಕ್ಷ ಹಾಗೂ ಬೇಜವಾಬ್ದಾರಿಯಿಂದ ದುರಣ್ತ ಸಂಭವಿಸಿದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಆಯೋಜಕರು ಹಾಗೂ ಕಟ್ಟಡ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular