HomeKarnatakaಬೆಂಗಳೂರಿನಲ್ಲಿ ಆನೆ ದಾಳಿ: ವ್ಯಕ್ತಿ ದುರ್ಮರಣ

ಬೆಂಗಳೂರಿನಲ್ಲಿ ಆನೆ ದಾಳಿ: ವ್ಯಕ್ತಿ ದುರ್ಮರಣ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಸಿಲಿಕಾನ್ ಸಿಟಿಯಲ್ಲಿ ಆನೆ ದಾಳಿ ವಿಚಾರ ಕೇಳಿ ಬೆಂಗಳೂರಿಗರು ಬೆಚ್ಚಿ ಬಿದ್ದಿದ್ದಾರೆ.

ಕೆಂಗೇರಿ ಸಮೀಪದ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಹಿಂಭಾಗದಲ್ಲಿ ಆನೆ ದಾಳಿಗೆ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 60 ವರ್ಷದ ನಾಗರಾಜ್ ಮೃತ ದುರ್ದೈವಿ. ಇಂದು ಬೆಳಿಗ್ಗೆ 5:30ರ ಸೂಮಾರಿಗೆ ಈ ದುರಂತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂಚೆಪಾಳ್ಯ ಗ್ರಾಮದ ನಾಗರಾಜ್ ಇಂದು ಬೆಳಗ್ಗೆ 5:30ರ ಸುಮಾರಿಗೆ ವಾಅಕಿಂಗ್ ಗೆ ಹೋಗಿದ್ದರು. ವಾಕಿಂಗ್‌ಗೆ ಹೋಗಿದ್ದ ವ್ಯಕ್ತಿ ಮೇಲೆ ಆನೆ ದಾಳಿ ನಡೆಸಿದ್ದು, ಸ್ಥಳದಲ್ಲೇ ಮೃತಪಟ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular