HomeKarnatakaರಸ್ತೆ ಕಾಮಗಾರಿ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಲೋಕೋಪಯೋಗಿ ಸಚಿವ: ಕೃತ್ಯವನ್ನು ಸಮರ್ಥಿಸಿಕೊಂಡ ಮಂತ್ರಿ

ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಲೋಕೋಪಯೋಗಿ ಸಚಿವ: ಕೃತ್ಯವನ್ನು ಸಮರ್ಥಿಸಿಕೊಂಡ ಮಂತ್ರಿ

ನವದೆಹಲಿ: ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ಲೋಕೋಪಯೋಗಿ ಇಲಾಖೆ ಸಚಿವ ಪರ್ವೇಶ್ ವರ್ಮಾ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ನ್ಡೆದಿದ್ದು, ಸಚಿವರ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ರಾಜ್ಯ ರಾಜಧಾನಿ ದೆಹಲಿಯಲ್ಲಿ ಈ ಘಟನೆ ನಡೆದಿದೆ. ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ವ್ಯಕ್ತಿಯೊಬ್ಬರಿಗೆ ಸಚಿವ ಪರ್ವೇಶ್ ವರ್ಮಾ ಕಪಾಳಮೋಕ್ಷ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಪಶ್ಚಿಮ ದೆಹಲಿಯ ತಿಲಕ್ ನಗರ ಪ್ರದೇಶದಲ್ಲಿ ನಡೆದಿದೆ.

ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ವ್ಯಕ್ತಿ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ. ಈ ವೇಳೆ ಸಚಿವರು ಮೊದಲು ಆತನಿಂದ ಮೊಬೈಲ್ ಕಸಿದು ಕೆಳಕ್ಕೆ ತಳ್ಳಿಆತನ ಕೆನ್ನೆಗೆ ಹೊಡೆದಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳದಲ್ಲಿ ಕೆಲಕಾಲ ಗದ್ದಲ ಉಂಟಾಗಿದ್ದು, ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವರ ಈ ನಡೆ ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕರ ನಡುವೆ ತೀವ್ರ ವಾಗ್ವಾದಕ್ಕೂ ಕಾರಣವಾಗಿದೆ. ಘಟನೆಯ ಬಳಿಕ ಸಚಿವ ಪರ್ವೇಶ್ ವರ್ಮಾ ಮಾತನಾಡಿದ್ದು, ತಮ್ಮನ್ನು ಸಮರ್ಥಿಸಿಕೊಂಡಿದ್ದಾರೆ.

ಆ ವ್ಯಕ್ತಿ ತನ್ನ ಕುಟುಂಬದ ಸದಸ್ಯರ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದರಿಂದ ತಾವು ಆರೀತಿ ಪ್ರತಿಕ್ರಿಯಿಸಿದ್ದಾಗಿ ಅವರು ಕಪಾಅಳಮೋಕ್ಷ ಮಾಡಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.

ಇದೇ ವೇಳೆ ಸ್ಥಳದಲ್ಲಿದ್ದ ಎಎಪಿ ಶಾಸಕ ಜರ್ನೈಲ್ ಸಿಂಗ್ ರಸ್ತೆ ಕಾಮಗಾರಿಯ ಗುಣಮಟ್ಟವನ್ನು ಪ್ರಶ್ನಿಸಿದ್ದಾರೆ. ರಸ್ತೆ ಕಮಗಾರಿ ಕಳಪೆ ಗುಣಮಟ್ಟದಾಗಿದೆ. ಒಂದೆಡೆ ಕಾಮಗಾರಿ ನಡೆಯುತ್ತಿರುವಾಗಲೇ ಡಾಂಬರು ಎದ್ದು ಬರುತ್ತಿಚೆ. ರಸ್ತೆಯ ಮೇಲಿನ ಡಾಂಬರನ್ನು ಕೈಯಿಂದಲೇ ಕಿತ್ತು ತೋರಿಸಿ ಕಾಮಗಾರಿ ಕಳಪೆಯಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೇ ಪ್ರಶ್ನಿಸಲು ಮುಂದಾದ ವ್ಯಕ್ತಿಗೆ ಸಚ್ವ ಕಪಳ ಮೋಕ್ಷ ಮಾಡಿದ್ದಾರೆ. ಈ ಬಗ್ಗೆ ಚರ್ಚೆಯಾಗಬೇಕಿದೆ ಎಂದು ಶಾಸಕರು ತಿಳಿಸಿದ್ದಾರೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಪೊಕ್ಸೋ ಕೇಸ್ ದಾಖಲು; ಶಿಕ್ಷಕ ಸಸ್ಪೆಂಡ್

ಕೊಪ್ಪಳ: ವಿದ್ಯಾರ್ಥಿನಯರೊಂದಿಗೆ ಅಸಭ್ಯ ವರ್ತನೆ ಹಾಗೂ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಸರ್ಕಾರಿ ಶಾಲೆ ಶಿಕ್ಷಕರೊಬ್ಬರನ್ನು ಅಮಾನತು ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದಡಿ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಅಂದನಗೌಡ ಎಂಬಾತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.

ಪ್ರಕರಣದ ಬೆನ್ನಲ್ಲೇ ಆರೋಪಿ ಶಿಕ್ಷಕನನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಸೇವೆಯಿಂದ ಅಮಾನತುಗೊಳಿಸಿದ್ದಾರೆ. ಇದೇ ವೇಳೆ ಆರೋಪಿ ಶಿಕ್ಷಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಕೊಪ್ಪಳ ಗ್ರಾಮೀಣ ಭಾಗದ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕ ಅಂದನಗೌಡ, ಶಾಲಾ ಕೊಠಡಿಯೊಳಗೆ ಬಾಲಕಿಯರನ್ನು ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸುತ್ತಿದ್ದ. ವಿದ್ಯಾರ್ಥಿನಿಯರ ಖಾಸಗಿ ಅಂಗಗಳನ್ನು ಸ್ಪರ್ಶಿಸುವುದು, ಅಸಭ್ಯವಾಗಿ ನಡೆದುಕೊಳ್ಳುವುದು ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.

ಶಿಕ್ಷಕನ ಕಿರುಕುಳದಿಂದ ನೊಂದ ವಿದ್ಯಾರ್ಥಿನಿಯರು ಸ್ವತಃ 1098 ಮಕ್ಕಳ ಸಹಾಯವಾಣಿಗೆ ಕರೆ ಮಾಡಿ, “ನಮಗೆ ಶಿಕ್ಷಕನಿಂದ ಕಿರುಕುಳವಾಗುತ್ತಿದೆ, ದಯವಿಟ್ಟು ಬಂದು ನಮಗೆ ಸಹಾಯ ಮಾಡಿ” ಎಂದು ಮನವಿ ಮಾಡಿಕೊಂಡಿದ್ದರು. ಮಕ್ಕಳ ಸಹಾಯವಾಣಿಯಿಂದ ಮಾಹಿತಿ ಲಭ್ಯವಾಗುತ್ತಿದ್ದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ತಕ್ಷಣವೇ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಈ ವೇಳೆ ಧೈರ್ಯವಾಗಿ ಮುಂದೆ ಬಂದ ಶಾಲಾ ಬಾಲಕಿಯರು, ಶಿಕ್ಷಕ ಅಂದನಗೌಡ ನಡೆಸುತ್ತಿದ್ದ ಅಸಭ್ಯ ವರ್ತನೆ ಹಾಗೂ ಲೈಂಗಿಕ ಕಿರುಕುಳದ ಸಂಪೂರ್ಣ ವಿವರಗಳನ್ನು ಅಧಿಕಾರಿಗಳ ಮುಂದೆ ಹೇಳಿದ್ದರು.

ಮಕ್ಕಳ ರಕ್ಷಣಾ ಘಟಕದ ತನಿಖೆ ಹಾಗೂ ನಿರ್ದೇಶನದ ಬಳಿಕ ಶಾಲೆಯ ಮುಖ್ಯ ಶಿಕ್ಷಕಿ ಅವರು ಘಟನೆ ನಡೆದ ನಾಲ್ಕು ದಿನಗಳ ನಂತರ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಗೆ ತೆರಳಿ ಆರೋಪಿ ಅಂದನಗೌಡ ವಿರುದ್ಧ ಅಧಿಕೃತ ದೂರು ನೀಡಿದ್ದಾರೆ. ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆಯೇ ಸಾರ್ವಜನಿಕ ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳು ಆರೋಪಿ ಶಿಕ್ಷಕ ಅಂದನಗೌಡನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಶಿಕ್ಷಕ ತಲೆಮರೆಸಿಕೊಂಡಿದ್ದಾನೆ.

ಈ ಬಗ್ಗೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಹಿಲ್ ಭಾಗ್ಲಾ ಮಾಹಿತಿ ನೀಡಿದ್ದು, ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಿಕ್ಷಕನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸಲು 3 ವಿಶೇಷ ಪೊಲೀಸ್ ಪಡೆಗಳನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular