ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 14ನೇ ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸಲು ಕೋರ್ಟ್ ಗೆ ಹಾಜರಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಆತಂಕ ಶುರುವಾಗಿದೆ. ಮಾಫಿ ಸಾಕ್ಷಿ ಪ್ರದೋಷ್ ನನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ಕರೆತಂದಿದ್ದಾರೆ.
59ನೇ ಸಿಸಿ ಹೆಚ್ ಕೋರ್ಟ್ ನಲ್ಲಿ ನ್ಯಾಅಯಾಧೀಶೆ ಸುಜಾತಾಅ ಸಾಂಭ್ರಾಣಿ ಮುಂದೆ ಮಾಫಿ ಸಾಕ್ಷಿ ಪ್ರದೋಷ್, ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಗ್ಗೆ ಹೇಳಿಕೆ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿ ನಟ ದರ್ಶನ್ ಗೆ ಇಂದು ಬಿಗ್ ಡೇ ಆಗಿದೆ.

