HomeKarnatakaಬೆಂಗಳೂರಿನಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿ: ಮೃತರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಘೋಷಿಸಿದ...

ಬೆಂಗಳೂರಿನಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿ: ಮೃತರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ!

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಹಿಂಭಾಗಾದಲ್ಲಿ ಕಾಡಾನೆ ದಾಳಿ ನಡೆಸಿ ವ್ಯಕ್ತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಸಚಿವ ಈಶ್ವರ ಖಂಡ್ರೆ 20 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಇಂದು ಮುಂಜಾನೆ ವಾಅಕಿಂಗ್ ಗೆ ಹೋಗಿದ್ದ ವ್ಯಕ್ತಿ ನಾಗರಾಜ್ ಎಂಬುವವರ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು.

ಕುಟುಂಬದವರು ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಸೂಕ್ತ ಪರುಹಾರಕ್ಕೆ ಆಗ್ರಹಿಸಿದ್ದರು. ಕಾಡಾನೆ ದಾಳಿಗೆ ಬಲಿಯಾದ ನಾಗರಾಜ್ ಕುಟುಂಬವನ್ನು ಭೇಟಿಯಾದ ಸಚಿವ ಈಶ್ವರ ಖಂಡ್ರೆ, ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ 20 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಆನೆಗಳ ಓಡಾಟ ತಡೆಯಲು ರಾಮನಗರ, ಬನ್ನೇರುಘಟ್ಟ ಹಾಗೂ ಬೆಂಗಳೂರು ನಗರ ಅರಣ್ಯ ತಂಡಗಳಿಂದ ವಿಶೇಷ ನಿಗಾ ವಹಿಸಲಾಗಿದ್ದು, ಕಾರ್ಯಾಚರಣೆಗೆ ಡ್ರೋನ್ ಬಳಸಲು ಯೋಜನೆ ರೂಪಿಸಲಾಗಿದೆ. ಇನ್ಮುಂದೆ ಇಂತಹ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುವುದಾಗಿ ಭರವಸೆ ನೀಡಿದ್ದಾರೆ.

ಕೇದಾರನಾಥ ಮಾರ್ಗದಲ್ಲಿ ಭೀಕರ ಭೂಕುಸಿತ: ಪರ್ವತದಿಂದ ಉರುಳಿ ಅಪ್ಪಳಿಸಿದ ಬಂಡೆ: 5 ವರ್ಷದ ಬಾಲಕ ಸಾವು

ಕೇದಾರನಾಥಕ್ಕೆ ಯಾತ್ರಾರ್ಥಿಗಳು ತೆರಳುತ್ತಿದ್ದ ವೇಳೆಯೇ ಮಾರ್ಗ ಮಧ್ಯೆ ಭೀಕರ ಭೂಕುಸಿತ ಸಂಭವಿಸಿದ್ದು, ಘಟನೆಯಲ್ಲಿ 5 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.

ಕೇದಾರನಾಥದ ಚಿರ್ಬಾಸಾ ಬಳಿ ಈ ದುರಂತ ಸಂಭವಿಸಿದೆ. ಗೌರಿಕುಂಡದಿಂದ ಸುಮಾರು 3 ಕಿ.ಮೀ ದೂರದಲ್ಲಿರುವ ಚಿರ್ಬಾಸಾ ಬಳಿಯ ಮಾರ್ಗದಲ್ಲಿ ಬೆಟ್ಟದಿಂದ ಬಂಡೆ, ಶಿಲಾಖಂಡದ ರಾಶಿಗಳು ಏಕಾಏಕಿ ಕೂಸಿದು ಬಿದ್ದಿವೆ.ಬೃಹತ ಕಲ್ಲು ಅಪ್ಪಳಿಸಿದ ಪರುಣಾಮ ಬಾಲಕ ಸಾವನ್ನಪ್ಪಿದ್ದಾನೆ. ಉತ್ತರ ಪ್ರದೇಶದ ಇಟಾ ಮೂಲದ ಬಾಲಕ ಯಶ್(5) ಮೃತ ದುರ್ದೈವಿ.

ಭೂಕುಸಿತದಿಂದಾಗಿ ಈ ಮಾರ್ಗ ಮಧ್ಯದಲ್ಲಿ ಯಾತ್ರಾರ್ಥಿಗಳು ಸಿಲುಕಿ ಪರದಾಡುವಂತಾಗಿತ್ತು. 1,500 ಯಾತ್ರಾರ್ಥಿಗಳನ್ನು ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪಡೆಗಳ ಜಂಟಿ ತಂಡಗಳು ಯಾತ್ರಾರ್ಥಿಗಳನ್ನು ರಕ್ಷಿಸಿ, ಸುರಕ್ಷಿತವಾಗಿ ಗೌರಿಕುಂಡಕ್ಕೆ ಕರೆತಂದಿವೆ.

ಗೌರಿಕುಂಡ್‌ನಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ಚಿರ್ಬಾಸಾ ಬಳಿಯ ಮಾರ್ಗದ ಇನ್ನೊಂದು ಬದಿಯಲ್ಲಿ ಹಲವಾರು ಯಾತ್ರಾರ್ಥಿಗಳು ಸಿಲುಕಿಕೊಂಡಿರುವ ಬಗ್ಗೆ ಸೋನ್‌ಪ್ರಯಾಗ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿಯ ಮೇರೆಗೆ ತಕ್ಷಣವೇ ಕಾರ್ಯಪ್ರವೃತ್ತರಾದ ಸಬ್ ಇನ್ಸ್‌ಪೆಕ್ಟರ್ ಆಶಿಶ್ ಡಿಮ್ರಿ ನೇತೃತ್ವದ ಎಸ್‌ಡಿಆರ್‌ಎಫ್​ ತಂಡವು ಘಟನಾ ಸ್ಥಳಕ್ಕೆ ಧಾವಿಸಿತ್ತು. ಸ್ಥಳಕ್ಕೆ ಆಗಮಿಸಿದ ಎಸ್​ಡಿಆರ್​ಎಫ್​, ಎನ್​ಡಿಆರ್​ಎಫ್​ ಮತ್ತು ಡಿಡಿಆರ್​ಎಫ್​ ತಂಡಗಳು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದವು.

ಈ ಗುಡ್ಡಗಾಡು ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದು ಪ್ರಮುಖವಾಗಿ ಭೂ ಕುಸಿತಕ್ಕೆ ಕಾರಣವಾಗಿದೆ. ಇದು ಅನೇಕ ಕಡೆ ಸಂಚಾರಕ್ಕೂ ಅಡ್ಡಿಯನ್ನುಂಟು ಮಾಡಿದೆ.

ಭಾನುವಾರ ಕೂಡ ನಿರಂತರವಾಗಿ ಸುರಿದ ಮಳೆಗೆ ಬದ್ರಿನಾಥ್ ​ – ರಿಷಿಕೇಶ್​ ರಾಷ್ಟ್ರೀಯ ಹೆದ್ದಾರಿಯು ಕಲ್ಲು ಮತ್ತು ಅವಶೇಷಗಳಿಂದ ಮುಚ್ಚಿ ಹೋಗಿತ್ತು. ಭಾನುವಾರ ಬೆಳಗ್ಗೆ ಸುಮಾರು 8 ಗಂಟೆಗೆ ಬೆಟ್ಟದ ಇಳಿಜಾರಿನಿಂದ ಹೆಚ್ಚಿನ ಪ್ರಮಾಣದಲ್ಲಿ ಬಂಡೆಗಳು ಮತ್ತು ಅವಶೇಷಗಳು ಉರುಳಿಬಿದ್ದ ಪರಿಣಾಮವಾಗಿ ರಸ್ತೆ ಸಂಚಾರ ಮಾರ್ಗ ಬಂದ್​ ಆಗಿ, ಯಾತ್ರಾರ್ಥಿಗಳಿದ್ದ ವಾಹನಗಳು ರಸ್ತೆಯ ಎರಡೂ ಬದಿಗಳಲ್ಲಿ ಸಿಲುಕಿಕೊಂಡಿದ್ದವು.

ಕಳೆದ ವಾರ, ರುದ್ರಪ್ರಯಾಗದ ಕೇದಾರನಾಥ ಯಾತ್ರಾ ಮಾರ್ಗದಲ್ಲಿರುವ ಚಿರ್ಬಾಸಾ ಹೆಲಿಪ್ಯಾಡ್ ಬಳಿ ಸಂಭವಿಸಿದ ಭೂಕುಸಿತದಿಂದ ರಸ್ತೆ ಭಾಗಶಃ ಹಾನಿಗೊಳಗಾಗಿ, ಹೆಚ್ಚಿನ ಸಂಖ್ಯೆಯ ಯಾತ್ರಾರ್ಥಿಗಳು ಆ ಮಾರ್ಗವನ್ನು ದಾಟಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿತ್ತು. ಬಳಿಕ ರಕ್ಷಣಾ ತಂಡಗಳು 6,500ಕ್ಕೂ ಹೆಚ್ಚು ಯಾತ್ರಾರ್ಥಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ್ದವು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular