ಚೆನ್ನೈ: ತಮಿಳುನಾಡು ಸಿಎಂ ವಿಜಯ್ ನೇತೃತ್ವದ ಟಿವಿಕೆ ಪಕ್ಷದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ತಾಯಿ ಮಾಮನ್ ತಂಗ ಮೋದಿರ” ಯೋಜನೆಗೆ ಇಂದ್ಸು ಚಾಲನೆ ದೊರೆತಿದೆ. ಸರ್ಕಾಅರಿ ಆಸ್ಪತ್ರೆಯಲ್ಲಿ ಹುಟ್ಟುವ ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ ಉಡುಗೊರೆ ನೀಡಿವ ಮೂಲಕ ಸಿಎಂ ವಿಜಯ್ ಈ ಯೋಜನೆಗೆ ಚಾಲನೆ ನೀಡಿದರು.
ಮಧುರೈನ ಸರ್ಕಾರಿ ರಾಜಾಜಿ ಆಸ್ಪತ್ರೆಯ ಹೆರಿಗೆ ವಾರ್ಡ್ ಗೆ ಭೇಟಿ ನೀಡಿದ ಸಿಎಂ ವಿಜಯ್, ನವಜಾಅತ ಶಿಶುವನ್ನು ಆಶಿರ್ವದಿಸಿ ಬಳಿಕ ಮಗುವಿನ ತಾಯಿಗೆ ಚಿನ್ನದ ಉಂಗುರ ನೀಡರು. ʻತಾಯ್ ಮಾಮನ್ ತಂಗ ಮೋದಿರಂʼ (ತಾಯಿಯ ಸಹೋದರನ ಚಿನ್ನದುಂಗುರ ಯೋಜನೆ) ಯೋಜನೆ ಎಂಬ ಹೆಸರಿನಲ್ಲಿ ಈ ಜೋನೆಗೆ ಚಾಲನೆ ದೊರೆತಿದೆ.
ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ವಿಜಯ್ ತಮ್ಮ ತಮಿಳಿಗ ವೆಟ್ರಿ ಕಳಗಂ ಪಕ್ಷದ ಪ್ರಚಾರ ಸಭೆಯಲ್ಲಿ ಈ ಯೋಜನೆ ಘೋಷಿಸಿದ್ದರು. ಇದೀಗ ಮಾತು ಕೊಟ್ಟಂತೆ ಸಿಎಂ ವಿಜಯ್ ಈ ಯೋಜನೆ ಜಾರಿಗೆ ತಂದಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸಿದ ಶಿಶುಗಳಿಗೆ ಸರ್ಕಾರವು ಒಂದು ಗ್ರಾಂ, 22 ಕ್ಯಾರೆಟ್ ಚಿನ್ನದ ಉಂಗುರವನ್ನು ನೀಡುತ್ತದೆ. ಈ ಯೋಜನೆಗೆ ಅರ್ಹತೆ ಪಡೆಯಲು, ನವಜಾತ ಶಿಶುಗಳ ತಾಯಂದಿರು ತಮಿಳುನಾಡಿನ ಖಾಯಂ ನಿವಾಸಿಗಳಾಗಿರಬೇಕು.
ಈ ಯೋಜನೆಗಾಗಿ ರಾಜ್ಯ ಸರ್ಕಾರ ವಾರ್ಷಿಕ 755.83 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಈಗಾಗಲೇ 1.28 ಲಕ್ಷ ಉಂಗುರಗಳನ್ನು ಈಗಾಗಲೇ ಸಿದ್ಧಪಡಿಸಿ ಇಡಲಾಗಿದೆ. ಈ ಉಂಗುರಗಳು ವಿಶಿಷ್ಟ ಸರಣಿ ಸಂಖ್ಯೆಗಳನ್ನು ಹೊಂದಿರುತ್ತವೆ. ಟ್ಯಾಂಪರ್-ಪ್ರೂಫ್ ಪ್ಯಾಕೇಜಿಂಗ್ನಲ್ಲಿ ಈ ಉಂಗುರಗಳನ್ನು ವಿತರಿಸಲಾಗುತ್ತದೆ.
ಅಕ್ಟೋಬರ್ 6 ರಂದು ಉಪಚುನಾವಣೆ ನಡೆಯಲಿರುವ ಮಧುರಾಂತಕಂ ಮತ್ತು ಧಾರಾಪುರಂ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಬರುವ ಪ್ರದೇಶಗಳನ್ನು ಹೊರತುಪಡಿಸಿ, ತಮಿಳುನಾಡಿನ ರಾಜ್ಯಾದ್ಯಂತ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.
ಫಲಾನುಭವಿಗಳು ನೋಂದಾಯಿಸಿಕೊಂಡಿರಬೇಕು. ಅಲ್ಲದೇ ಮಕ್ಕಳ ಆರೋಗ್ಯ ಕಾರ್ಡ್ (RCH) ID ಹೊಂದಿರಬೇಕು. ಫಲಾನುಭವಿಗಳು ಆಸ್ಪತ್ರೆಗಳಿಂದ ಬಿಡುಗಡೆಯಾದಾಗ ಉಂಗುರಗಳನ್ನು ನೀಡಲಾಗುತ್ತದೆ.
ಉಂಗುರಗಳ ಪೂರೈಕೆ ಕೆಲಸವನ್ನು ಜೋಯಾಲುಕ್ಕಾಸ್ ಮತ್ತು ಕಲ್ಯಾಣ್ ಜ್ಯುವೆಲ್ಲರ್ಸ್ಗೆ ನೀಡಲಾಗಿದೆ. ಯೋಜನೆಯ ಅನುಷ್ಠಾನದ ಕುರಿತು ಜೂನ್ 23, 2026 ರಂದು ಸರ್ಕಾರಿ ಆದೇಶವನ್ನು ಪ್ರಕಟಿಸಲಾಗಿತ್ತು. ಸ್ಥಳೀಯ ಅನುಷ್ಠಾನ, ದಾಸ್ತಾನು, ವಿತರಣೆಯಲ್ಲಿ ಪಾರದರ್ಶಕತೆಯನ್ನು ಮೇಲ್ವಿಚಾರಣೆ ಮಾಡಲು ಆಯಾ ಜಿಲ್ಲಾಧಿಕಾರಿಗಳ ಅಡಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ವಿಶೇಷ ಮೇಲ್ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ.
ವಿಜಯೇಂದ್ರ ಕ್ಷೇತ್ರದಿಂದಲೇ ಆರಂಭವಾಗಲಿದೆ ಕಾಂಗ್ರೆಸ್ ಭಾರತ್ ಜೋಡೋ-2 ಪಾದಯಾತ್ರೆ: ಬಿ.ಕೆ.ಹರಿಪ್ರಸಾದ್ ಘೋಷಣೆ
ಬೆಂಗಳೂರು: 2028ರ ವಿಧಾನಸಭಾ ಚುನಾವಣೆಗಾಗಿ ಆಡಳಿತಾರೂಡ ಕಾಂಗ್ರೆಸ್ ಪಕ್ಷ ಈಗಿನಿಂದಲೆ ಭರ್ಜರಿ ಸಿದ್ಧತೆ ನಡೆಸಿದ್ದು, ರಾಜ್ಯದ 84 ಕ್ಷೇತ್ರಗಳಲ್ಲಿ ಪಾದಯಾತ್ರೆಗೆ ಯೋಜನೆ ರೂಪಿಸಿದೆ.
ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಹಾಗೂ ಮುಂಬರುವ ವಿಧಾನಸಭ ಅಚುನಾಅವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕರ್ನಾಟಕದಾದ್ಯಂತ ಕಾಂಗ್ರೆಸ್ ಪಾದಯಾತ್ರೆ ನಡೆಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಸೆಪ್ಟೆಂಬರ್ 30ರಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಪಾದಯಾತ್ರೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ‘ಭಾರತ್ ಜೋಡೋ ಪಾದಯಾತ್ರೆ-2’ ಹೆಸರಿನಲ್ಲಿ ನಡೆಯಲಿರುವ ಈ ಪಾದಯಾತ್ರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿರುವ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ನಡೆಯಲಿದೆ ಎಂದು ಹೇಳಿದರು.
ರಾಜ್ಯದ ಒಟ್ಟು 84 ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸುವ ಉದ್ದೇಶವಿದ್ದು, ಪ್ರತಿ ಕ್ಷೇತ್ರದಲ್ಲಿ ಸುಮಾರು 10 ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಶಿಕಾರಿಪುರದಿಂದ ಆರಂಭವಾಗುವ ಪಾದಯಾತ್ರೆ ಅಕ್ಟೋಬರ್ 20ರವರೆಗೆ ನಡೆಯಲಿದೆ. 84 ಕ್ಷೇತ್ರಗಳಲ್ಲಿ 42 ಕ್ಷೇತ್ರಗಳ ಪಾದಯಾತ್ರೆ ಪೂರ್ಣಗೊಂಡ ಬಳಿಕ ಅಂತಿಮ ಕಾರ್ಯಕ್ರಮ ಎಲ್ಲಿ ನಡೆಯಲಿದೆ ಎಂಬುದನ್ನು ತಿಳಿಸಲಾಗುವುದು ಎಂದು ಹರಿಪ್ರಸಾದ್ ಹೇಳಿದ್ದಾರೆ. ಉತ್ತರ ಕರ್ನಾಟಕದ ಯಾವುದಾದರೂ ಒಂದು ಕ್ಷೇತ್ರದಲ್ಲಿ ಅಂತಿಮ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ ಎಂದಿದ್ದಾರೆ.
ಚುನಾವಣಾ ಆಯೋಗದ ವಿರುದ್ಧದ ವಿಚಾರಗಳು ಪಾದಯಾತ್ರೆಯ ಪ್ರಮುಖ ಅಜೆಂಡಾಗಳಲ್ಲಿ ಒಂದಾಗಿವೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧವೂ ಪ್ರಶ್ನೆಗಳನ್ನು ಎತ್ತಿರುವ ಹರಿಪ್ರಸಾದ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಡಿಕೆ ಶಿವಕುಮಾರ್ ಅವರು ಪಾದಯಾತ್ರೆಯಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದರು.
ಪಾದಯಾತ್ರೆಯ ವೇಳೆ ಬರ ಪರಿಸ್ಥಿತಿ ಸೇರಿದಂತೆ ರೈತರ ಸಮಸ್ಯೆಗಳ ಬಗ್ಗೆಯೂ ಚರ್ಚಿಸಿ, ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹರಿಪ್ರಸಾದ್ ತಿಳಿಸಿದ್ದಾರೆ. 2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡೇ ಪಾದಯಾತ್ರೆ ನಡೆಸಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಿಂದಿನ ಚುನಾವಣೆಯಲ್ಲಿ ಜನರಿಗೆ ಬಿಜೆಪಿಯ ಕುರಿತು ಸರಿಯಾದ ಮಾಹಿತಿ ಇರಲಿಲ್ಲ. ಈಗ ಜನರಿಗೆ ಮಾಹಿತಿ ಸಿಕ್ಕಿದ್ದು, ಜಾಗೃತರಾಗುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿ ಅವರ ಹಿಂದಿನ ಯಾತ್ರೆಗಳಲ್ಲಿ ಪ್ರಸ್ತಾಪಿಸಿದ್ದ ವಿಚಾರಗಳನ್ನು ಮತ್ತೆ ಜನರ ಮುಂದೆ ಇಡಲಾಗುವುದು ಎಂದು ಹೇಳಿದರು.
ಇದೇ ವೇಳೆ ಆರ್.ಎಸ್.ಎಸ್, ಬಿಜೆಪಿಯವರನ್ನು ಬೆಂಗಳೂರಿನಿಂದ ಓಡಿಸಬೇಕು ಎಂದು ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ವಂದೇ ಮಾತರಂ ನಮ್ಮ ಪಕ್ಷದವರು ಚೆನ್ನಾಗಿ ಹಾಡುತ್ತಾರೆ. ವಂದೇ ಮಾತರಂ ಏನಿದ್ರು ನಮ್ಮದು ಎಂದಿರುವ ಅವರು, ನೀವು ಖಾಕಿ ಚಡ್ಡಿ, ದೊಣ್ಣೆ ಹಿಡಿದು ಸಂಜೆ ಹೋಗಿ ಎಂದು ವ್ಯಂಗ್ಯವಾಡಿದ್ದಾರೆ.
ಸಿಇಸಿ ಜ್ಞಾನೇಶ್ ಕುಮಾರ್ ಒಬ್ಬ ಅಜ್ಞಾನಿ. ಜ್ಞಾನೇಶ್ ಕುಮಾರ್ ಹೋಗುವ ತನಕ ಹೋರಾಟ ಮಾಡಿ. ಅವನ ಬಗ್ಗೆ ನಿರ್ಲಕ್ಷ್ಯವಹಿಸಿದ್ರೆ, ಅರ್ಹ ಮತದಾರನ್ನು ಕೈಬಿಡ್ತಾನೆ. ಅವನಂತಹ ನೀಚ ಈ ದೇಶದಲ್ಲಿ ಬೇರೆ ಯಾರೂ ಸಹ ಇಲ್ಲ. ಸಂವಿಧಾನ ದುರುಪಯೋಗ ಮಾಡಿಕೊಂಡ ನೀಚ ಅವನು. ನೀವೆಲ್ಲ ಮತದಾರರ ಪಟ್ಟಿಯ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.

