HomeKarnatakaರಾಜ್ಯದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ವಿದ್ಯಾರ್ಥಿವೇತನ, ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ರಾಜ್ಯದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ವಿದ್ಯಾರ್ಥಿವೇತನ, ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸಮಾಜ ಕಲ್ಯಾಣ ಇಲಾಖೆಯು 2026-27ನೇ ಸಾಲಿನ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಎಸ್.ಎಸ್.ಎಲ್.ಸಿ ಹಾಗೂ ಮೆಟ್ರಿಕ್ ನಂತರದ ಪ್ರೋತ್ಸಾಹಧನ ಮತ್ತು ವಸತಿನಿಲಯಗಳ ಪ್ರವೇಶಾವಕಾಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಈ ಸೌಲಭ್ಯಗಳಿಗಾಗಿ ವಿದ್ಯಾರ್ಥಿಗಳು ಎಚ್‌ಎಂಐಎಸ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಅಕ್ಟೋಬರ್ 01 ಜಿಲ್ಲೆ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ ‘ವಿದ್ಯಾರ್ಥಿ ವೇತನ ಅಭಿಯಾನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅರ್ಹ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ಆದ www.sw.kar.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

 ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೋಟೆ, ಬಳ್ಳಾರಿ-583101 (ದೂ: 9480843023). ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಕೌಲ್ ಬಜಾರ್ 1ನೇ ಗೇಟ್ ಹತ್ತಿರ, ಡಾ. ಬಿ.ಆರ್.ಅಂಬೇಡ್ಕರ್ ಭವನ, ಬಳ್ಳಾರಿ-583101 (ದೂ: 9480843073).

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸಿಡಿಪಿಒ ಕಚೇರಿ ಹತ್ತಿರ, ಸಂಡೂರು-583119 (ದೂ: 9480843079).ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ವಿನಾಯಕ ನಗರ, 15ನೇ ವಾರ್ಡ್, ಈಡಿಗರ ಶೀನಪ್ಪ ಲೇಔಟ್, ಸಿರುಗುಪ್ಪ-583121 (ದೂ: 9480843078).

ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಈ ಅಭಿಯಾನದ ಸದುಪಯೋಗ ಪಡೆದುಕೊಂಡು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾರಾಷ್ಟ್ರದ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಂದ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿರುವ ಪವಿತ್ರ ‘ದೀಕ್ಷಾ ಭೂಮಿ’ಗೆ ಭೇಟಿ ನೀಡಲು ಬಯಸುವ ಯಾತ್ರಾರ್ಥಿಗಳಿಗೆ ಬಸ್ಸುಗಳ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದ್ದು, ಆಸಕ್ತರಿಂದ ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಭದ್ರಾವತಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಅರ್ಜಿಯನ್ನು ವೆಬ್‌ಸೈಟ್ ಲಿಂಕ್: http://swdservices.karnataka.gov.in/ ಮೂಲಕ ದಿನಾಂಕ: 09.10.2026 ರೊಳಗೆ ಸಲ್ಲಿಸಬೇಕು.

ಆಸಕ್ತ ಅರ್ಹ ಯಾತ್ರಾರ್ಥಿಗಳು ನಿಗದಿತ ದಿನಾಂಕದೊಳಗಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಅವರು ಕೋರಿದ್ದಾರೆ.

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸೂಚನೆ : ಹೆಚ್ ಎಂ.ಮಧು

ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಸರ್ಕಾರದ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಧು ಎಚ್.ಎಂ. ಸೂಚಿಸಿದರು.

ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ಸಮರ್ಪಕವಾಗಿ ಜಮೆಯಾಗುವಂತೆ ನೋಡಿಕೊಳ್ಳಬೇಕು. ಅನರ್ಹ ಫಲಾನುಭವಿಗಳನ್ನು ಪಟ್ಟಿಯಿಂದ ಕೈಬಿಡಬೇಕು. ಬಿಪಿಎಲ್‌ನಿಂದ ಎಪಿಎಲ್‌ಗೆ ಪರಿವರ್ತನೆಯಾಗಿರುವ ಫಲಾನುಭವಿಗಳ ಅರ್ಹತೆಯನ್ನು ಪರಿಶೀಲಿಸಿ, ಅರ್ಹ ಬಡವರಿಗೆ ಯೋಜನೆಯ ಸೌಲಭ್ಯ ದೊರೆಯುವಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.

ಗೃಹಜ್ಯೋತಿ ಯೋಜನೆಯಡಿ ಶೇ.97ರಷ್ಟು ಮರುಪರಿಶೀಲನೆ ಪ್ರಗತಿ ಸಾಧಿಸಲಾಗಿದ್ದು, ಹೊಸದಾಗಿ ನೋಂದಾಯಿಸಿಕೊಂಡ ಫಲಾನುಭವಿಗಳಿಗೂ ಯೋಜನೆಯ ಸೌಲಭ್ಯ ಸಮರ್ಪಕವಾಗಿ ತಲುಪಿಸುವಂತೆ ತಿಳಿಸಲಾಯಿತು.

ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ನಿರಂತರವಾಗಿ ವಿದ್ಯುತ್ ಕಡಿತ ಮಾಡುವ ಸಂದರ್ಭ ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು. ಮಧ್ಯವಾರ್ಷಿಕ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವಿದ್ಯುತ್ ಪೂರೈಕೆ ಮಾಡುವಂತೆ ಸೂಚಿಸಲಾಯಿತು.

ಶಕ್ತಿ ಯೋಜನೆಯಡಿ ವಿದ್ಯಾರ್ಥಿಗಳಿಗೆ 70 ಕಿ.ಮೀ. ಪ್ರಯಾಣ ಮಿತಿಯಲ್ಲಿ ಬಸ್‌ಪಾಸ್‌ ವಿತರಿಸಿರುವ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಯಿತು. ಪರೀಕ್ಷಾ ದಿನಗಳಲ್ಲಿ ನಿಗದಿತ ವೇಳಾಪಟ್ಟಿಯಂತೆ ಬಸ್‌ಗಳ ಸಂಚಾರ ಖಚಿತಪಡಿಸಬೇಕು. ಮಹಿಳೆಯರು ಹಾಗೂ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ಗಳ ವ್ಯವಸ್ಥೆ ಮಾಡುವಂತೆ ಸೂಚಿಸಲಾಯಿತು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular