HomeKarnatakaಭೂಮಾಪಕರು, ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ: ಲಿಖಿತ ಪರೀಕ್ಷೆಗೆ ದಿನಾಂಕ ಪ್ರಕಟ, ಪ್ರವೇಶ ಪತ್ರ ಡೌನ್ಲೋಡ್ ಗೆ...

ಭೂಮಾಪಕರು, ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ: ಲಿಖಿತ ಪರೀಕ್ಷೆಗೆ ದಿನಾಂಕ ಪ್ರಕಟ, ಪ್ರವೇಶ ಪತ್ರ ಡೌನ್ಲೋಡ್ ಗೆ ಲಿಂಕ್ ಬಿಡುಗಡೆ

ಬೆಂಗಳೂರು: ಭೂಮಾಪಕರ ಹಾಗೂ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಕ್ರಮವಾಗಿ ಅ.2 ಮತ್ತು 4ರಂದು ಉಳಿಕೆ ಮೂಲ ವೃಂದದವರಿಗೆ ಲಿಖಿತ ಪರೀಕ್ಷೆ ನಡೆಯಲಿದ್ದು, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಲಿಂಕ್ ಬಿಡುಗಡೆ ಮಾಡಿದೆ.

ಭೂಮಾಪಕರ ಹುದ್ದೆಗೆ 92,701 ಹಾಗೂ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ 4,11,656 ಮಂದಿ ಅರ್ಜಿ ಸಲ್ಲಿಸಿದ್ದಾರೆ.

ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಪರೀಕ್ಷಾ ಕೇಂದ್ರದ ಮಾಹಿತಿಯನ್ನು ನೋಡಿ, ಆ ಪ್ರಕಾರ ಪರೀಕ್ಷೆಗೆ ಹಾಜರಾಗಲು ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೈದ್ಯಕೀಯ ಕೋರ್ಸ್ ಪ್ರವೇಶ

ಬೆಂಗಳೂರು: UGNEET-26: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮೂರನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಅ.2ರಂದು ಬೆಳಿಗ್ಗೆ 10ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ.

Caution Deposit ಕಟ್ಟಲು ಅಕ್ಟೋಬರ್ 1ರವರೆಗೆ ಸಮಯ ನೀಡಲಾಗಿದೆ.

ಇದುವರೆಗೂ ಯಾವುದೇ ಸೀಟು ಹಂಚಿಕೆಯಾಗದಿರುವವರು, ಸೀಟು ಹಂಚಿಕೆ ನಂತರ ದಂಡ ಪಾವತಿಸಿ ರದ್ದುಪಡಿಸಿಕೊಂಡವರು, ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆ ನಂತರ ಚಾಯ್ಸ್-4 ಆಯ್ಕೆ ಮಾಡಿ ಹೊರ ಹೋಗಿರುವವರು, ಎರಡನೇ ಸುತ್ತಿನ ಅಂತಿಮ ಫಲಿತಾಂಶಕ್ಕೂ ಮೊದಲು quit ಮಾಡಿಕೊಂಡ ಅಭ್ಯರ್ಥಿಗಳು 3ನೇ ಸುತ್ತಿನಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟಿಗೆ ಈಗಾಗಲೇ ಪ್ರವೇಶ ಪಡೆದಿರುವ ಅಭ್ಯರ್ಥಿಗಳು Up-Gradation ಮಾಡಿಕೊಳ್ಳಲು ಆಸಕ್ತಿ ಇದ್ದಲ್ಲಿ ಅವರು ಕೂಡ ಭಾಗವಹಿಸಬಹುದು.

ಮೊದಲ ಮತ್ತು ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆ ನಂತರ ಯಾವುದೇ ಚಾಯ್ಸ್ ದಾಖಲಿಸದಿರುವವರು ಈ ಸುತ್ತಿನಲ್ಲಿ ಭಾಗವಹಿಸಲು ಅರ್ಹರಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಎಂಬಿಎ, ಎಂಸಿಎ ಕೋರ್ಸ್ ಶುಲ್ಕ ಪಾವತಿ

PGCET-26: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಶುಲ್ಕ ಪಾವತಿಗೆ ಅ.3 ಕೊನೆ ದಿನ ಎಂದು ಹೇಳಿದೆ.

ಸೀಟು ಹಂಚಿಕೆಯಾದ ಅಭ್ಯರ್ಥಿಗಳು ನೇರವಾಗಿ ಶುಲ್ಕ ಪಾವತಿಸಿ, ಅ.5ರೊಳಗೆ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು ಎಂದು ತಿಳಿಸಲಾಗಿದೆ.

ಅರ್ಜಿ ಆಹ್ವಾನ

2026-27ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ವೆಬ್‍ಸೈಟ್ https://kswdc.karnataka.gov.in ರ ಮೂಲಕ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್, 31  ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆ ಹಾಗೂ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಚೇರಿ, ಕೊಡಗು ಜಿಲ್ಲೆ ಇವರನ್ನು ಹಾಗೂ ದೂ.ಸಂ.08272-228010, 9482194105 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಸುಮಂಗಳ ಹಿರೇಮನಿ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular