ಡ್ರೈವಿಂಗ್ ಲೈಸೆನ್ಸ್‌ಗೆ ಮೊಬೈಲ್ ನಂಬರ್ ಲಿಂಕ್ ಮಾಡದಿದ್ದರೆ ಲೈಸೆನ್ಸ್ ರದ್ದಾಗುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸೆಪ್ಟೆಂಬರ್ 30ರೊಳಗೆ ಮೊಬೈಲ್ ನಂಬರ್ ಅಪ್‌ಡೇಟ್ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದಾಗುತ್ತದೆ ಎಂಬ ಪ್ರಚಾರವೂ ನಡೆಯುತ್ತಿದೆ. ಈ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಅಸಲಿ ವಿಚಾರವೇನು ಎಂಬುದನ್ನು ತಿಳಿಯೋಣ.
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಡ್ರೈವಿಂಗ್ ಲೈಸೆನ್ಸ್‌ಗೆ ಸಂಬಂಧಿಸಿದ ನಕಲಿ ಸುದ್ದಿ ಭಾರೀ ಪ್ರಮಾಣದಲ್ಲಿ ಹರಿದಾಡುತ್ತಿದೆ. ಸೆಪ್ಟೆಂಬರ್ 30ರೊಳಗೆ ಡ್ರೈವಿಂಗ್ ಲೈಸೆನ್ಸ್‌ಗೆ ಮೊಬೈಲ್ ನಂಬರ್ ಲಿಂಕ್ ಮಾಡದಿದ್ದರೆ ಲೈಸೆನ್ಸ್ ರದ್ದಾಗುತ್ತದೆ ಎಂಬ ಸುದ್ದಿ ವೈರಲ್ ಆಗಿದೆ. ಇದರಿಂದ ವಾಹನ ಸವಾರರು ಆತಂಕಗೊಂಡಿದ್ದಾರೆ. ಮೊಬೈಲ್ ನಂಬರ್ ಲಿಂಕ್ ಮಾಡಿಸಿಕೊಳ್ಳಲು ಕೆಲವರು ಸಾರಿಗೆ ಇಲಾಖೆ ಕಚೇರಿಗಳಿಗೆ ತೆರಳಿ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದರೆ, ಇನ್ನು ಕೆಲವರು ಆನ್‌ಲೈನ್ ಮೂಲಕ ವಿವರಗಳನ್ನು ಅಪ್‌ಡೇಟ್ ಮಾಡಿಕೊಳ್ಳುತ್ತಿದ್ದಾರೆ.
ಈ ನಡುವೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಈ ಸುದ್ದಿಯನ್ನು ಖಂಡಿಸಿದ್ದು, ಇದು ಸಂಪೂರ್ಣವಾಗಿ ಸುಳ್ಳು ಮಾಹಿತಿ ಎಂದು ಸ್ಪಷ್ಟಪಡಿಸಿದೆ.
ವಾಹನ ಸವಾರರು ತಮ್ಮ ಡ್ರೈವಿಂಗ್ ಲೈಸೆನ್ಸ್ ಹಾಗೂ ವಾಹನ ನೋಂದಣಿ ಪ್ರಮಾಣಪತ್ರ (RC) ಸೇರಿದಂತೆ ಪ್ರಮುಖ ದಾಖಲೆಗಳಿಗೆ ತಮ್ಮ ಪ್ರಸ್ತುತ ಮೊಬೈಲ್ ನಂಬರ್ ಅನ್ನು ಅಪ್‌ಡೇಟ್ ಮಾಡಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಜನರೊಂದಿಗೆ ಸಾರಿಗೆ ಇಲಾಖೆಯ ಸಂವಹನವನ್ನು ಸುಗಮಗೊಳಿಸುವುದು ಹಾಗೂ ಸಾರಿಗೆ ಸೇವೆಗಳನ್ನು ಮತ್ತಷ್ಟು ಸರಳಗೊಳಿಸುವ ಉದ್ದೇಶದಿಂದ ಈ ಸಲಹೆ ನೀಡಲಾಗಿದೆ.
ಏಜೆಂಟ್‌ಗಳಿಂದ ತಪ್ಪು ಮೊಬೈಲ್ ನಂಬರ್ ನೋಂದಣಿ
ಹಿಂದೆ ಡ್ರೈವಿಂಗ್ ಲೈಸೆನ್ಸ್‌ಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಏಜೆಂಟ್‌ಗಳ ಪಾತ್ರ ಹೆಚ್ಚಾಗಿತ್ತು. ಈ ಸಂದರ್ಭದಲ್ಲಿ ಕೆಲವು ಏಜೆಂಟ್‌ಗಳು ಅರ್ಜಿದಾರರ ಸ್ವಂತ ಮೊಬೈಲ್ ನಂಬರ್ ಬದಲಿಗೆ ತಮ್ಮದೇ ಅಥವಾ ಬೇರೆ ಮೊಬೈಲ್ ನಂಬರ್‌ಗಳನ್ನು ದಾಖಲಿಸುತ್ತಿದ್ದರು.
ಇದರಿಂದ ಲೈಸೆನ್ಸ್ ನವೀಕರಣ, ದಂಡ, ಸಾರಿಗೆ ಇಲಾಖೆಯ ಇತರ ಪ್ರಮುಖ ಮಾಹಿತಿ ಸೇರಿದಂತೆ ಅಗತ್ಯ ಮಾಹಿತಿಯನ್ನು ವಾಹನ ಸವಾರರಿಗೆ ನೇರವಾಗಿ ತಲುಪಿಸುವಲ್ಲಿ ಸಮಸ್ಯೆಯಾಗುತ್ತಿತ್ತು.
ಈ ಸಮಸ್ಯೆಯನ್ನು ನಿವಾರಿಸಲು ವಾಹನ ಸವಾರರು ತಮ್ಮ ಡ್ರೈವಿಂಗ್ ಲೈಸೆನ್ಸ್ ಮತ್ತು RCಗೆ ತಮ್ಮದೇ ಪ್ರಸ್ತುತ ಮೊಬೈಲ್ ನಂಬರ್ ಅನ್ನು ಅಪ್‌ಡೇಟ್ ಮಾಡಿಕೊಳ್ಳುವಂತೆ ಸರ್ಕಾರ ಸೂಚಿಸಿದೆ.

ಸೆಪ್ಟೆಂಬರ್ 30 ಕೊನೆಯ ದಿನಲ್ಲ
ಮೊಬೈಲ್ ನಂಬರ್ ಅಪ್‌ಡೇಟ್ ಮಾಡಲು ಸೆಪ್ಟೆಂಬರ್ 30 ಕೊನೆಯ ದಿನಾಂಕ ಎಂದು ಕೇಂದ್ರ ಸರ್ಕಾರ ಯಾವುದೇ ಗಡುವು ನಿಗದಿಪಡಿಸಿಲ್ಲ. ಸೆಪ್ಟೆಂಬರ್ 30ರೊಳಗೆ ಮೊಬೈಲ್ ನಂಬರ್ ಲಿಂಕ್ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದಾಗುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ತಪ್ಪು ಮಾಹಿತಿಯಾಗಿದೆ.
ಮೊಬೈಲ್ ನಂಬರ್ ಅಪ್‌ಡೇಟ್ ಮಾಡುವುದು ನಿರಂತರ ಪ್ರಕ್ರಿಯೆಯಾಗಿದ್ದು, ಇದಕ್ಕೆ ಯಾವುದೇ ಗಡುವು ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಹೀಗಾಗಿ ವಾಹನ ಸವಾರರು ಆತಂಕಪಡುವ ಅಗತ್ಯವಿಲ್ಲ. ವಾಹನ ಸವಾರರು ಪರಿವಾಹನ್ ಅಥವಾ ಎಂ-ಪರಿವಾಹನ್ ಪೋರ್ಟಲ್‌ಗಳ ಮೂಲಕ ತಮ್ಮ ವಿವರಗಳನ್ನು ಪರಿಶೀಲಿಸಿ ಅಗತ್ಯವಿದ್ದರೆ ಮೊಬೈಲ್ ನಂಬರ್ ಅನ್ನು ಅಪ್‌ಡೇಟ್ ಮಾಡಿಕೊಳ್ಳಬಹುದು.
ಸಾಮಾಜಿಕ ಜಾಲತಾಣದ ಸುದ್ದಿಗೆ ಮರುಳಾಗಬೇಡಿ
ಡ್ರೈವಿಂಗ್ ಲೈಸೆನ್ಸ್ ರದ್ದಾಗುತ್ತದೆ ಎಂಬ ಭಯದಿಂದ ಆತುರದಲ್ಲಿ ಯಾವುದೇ ಕ್ರಮ ಕೈಗೊಳ್ಳುವ ಅಗತ್ಯವಿಲ್ಲ. ಮೊಬೈಲ್ ನಂಬರ್ ಅಪ್‌ಡೇಟ್ ಮಾಡಿಕೊಳ್ಳುವುದು ಉತ್ತಮವಾದರೂ, ಸೆಪ್ಟೆಂಬರ್ 30ರ ಗಡುವು ಎಂಬುದು ಸುಳ್ಳು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಮಾಹಿತಿಯನ್ನು ನಂಬುವ ಮೊದಲು ಅಧಿಕೃತ ಸರ್ಕಾರಿ ಮೂಲಗಳಿಂದ ಮಾಹಿತಿ ಪರಿಶೀಲಿಸಬೇಕು ಎಂದು ಕೇಂದ್ರ ಸರ್ಕಾರ ಸಲಹೆ ನೀಡಿದೆ.
ಮೊಬೈಲ್ ನಂಬರ್ ಅಪ್‌ಡೇಟ್ ಮಾಡಲು ಸೆಪ್ಟೆಂಬರ್ 30 ಕೊನೆಯ ದಿನಾಂಕ ಎಂದು ಕೇಂದ್ರ ಸರ್ಕಾರ ಯಾವುದೇ ಗಡುವು ನಿಗದಿಪಡಿಸಿಲ್ಲ. ಸೆಪ್ಟೆಂಬರ್ 30ರೊಳಗೆ ಮೊಬೈಲ್ ನಂಬರ್ ಲಿಂಕ್ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದಾಗುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ತಪ್ಪು ಮಾಹಿತಿಯಾಗಿದೆ.ಮೊಬೈಲ್ ನಂಬರ್ ಅಪ್‌ಡೇಟ್ ಮಾಡುವುದು ನಿರಂತರ ಪ್ರಕ್ರಿಯೆಯಾಗಿದ್ದು, ಇದಕ್ಕೆ ಯಾವುದೇ ಗಡುವು ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಹೀಗಾಗಿ ವಾಹನ ಸವಾರರು ಆತಂಕಪಡುವ ಅಗತ್ಯವಿಲ್ಲ.
ವಾಹನ ಸವಾರರು ಪರಿವಾಹನ್ ಅಥವಾ ಎಂ-ಪರಿವಾಹನ್ ಪೋರ್ಟಲ್‌ಗಳ ಮೂಲಕ ತಮ್ಮ ವಿವರಗಳನ್ನು ಪರಿಶೀಲಿಸಿ ಅಗತ್ಯವಿದ್ದರೆ ಮೊಬೈಲ್ ನಂಬರ್ ಅನ್ನು ಅಪ್‌ಡೇಟ್ ಮಾಡಿಕೊಳ್ಳಬಹುದು.