ಕಲಬುರಗಿ: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ಗೆ ಇದೀಗ ಭೂಕಬಳಿಕೆ ಮಾಡಿದ ಸಂಕಷ್ಟ ಎದುರಾಗಿದೆ. ಜಮೀನು ಕಬಳಿಕೆ ಆರೋಪದಡಿ ಶಿವಶಂಕರಪ್ಪ ಸಾಹುಕಾರ್ ಹಾಗೂ ಅವರ ಅಳಿಯನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ವಿಶ್ವನಾಥ್ ಪಾಟೀಲ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಯಾದಗಿರಿ ಜಿಲ್ಲೆಯ ಶಹಾಪುರ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ದೂರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಶಹಾಪುರ ತಾಲೂಕಿನ ಅಣಬಿ ಗ್ರಾಮದಲ್ಲಿ 10 ಎಕರೆ 20 ಗುಂಟೆ ಜಮೀನು ಕಬಳಿಕೆ ಮಾಡಲಾಗಿದೆ. ನನ್ನ ಮಲತಾಯಿ ಬಸಮ್ಮಗೌಡತಿಗೆ ಮಕ್ಕಳಿರಲಿಲ್ಲ. ಆದರೆ ಶಿವಶಂಕರಪ್ಪ ಸಾಹುಕಾರ್ ಅಳಿಯನಾದ ಶಂಕರಗೌಡನನ್ನು ಮಗ ಎಂದು ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಕೆ ಮಾಡಿದ್ದಾರೆ. ಜಮೀನು ಕಬಳಿಕೆ ಬಳಿಕ ಅಳಿಯನಿಂದ ತನ್ನ ಹೆಸರಿಗೆ ಜಮೀನು ಮಾಡಿಕೊಂಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಶಿವಶಂಕರಪ್ಪ ಸಾಹುಕಾರ್ ಹಾಗೂ ಅವರ ಅಳಿಯನ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಪೊಲಿಸ್ ಠಾಣೆಯಲ್ಲಿಯೇ ಶಿವಸೇನೆ ನಾಯಕನ ಮೇಲೆ ಮಹಿಳೆಯಿಂದ ಮನಬಂದಂತೆ ಹಲ್ಲೆ
ಥಾಣೆ: ಹಣಕಾಸಿನ ವ್ಯವಹಾರದ ವಿಚಾರವಾಗಿ ನಡೆದ ಗಲಾಟೆಯಲ್ಲಿ ಪೊಲೀಸ್ ಠಾಣೆಯಲ್ಲೇ ಮಹಿಳೆಯೊಬ್ಬಳು ಶಿವಸೇನೆಯ ಯುವ ನಾಯಕ ಸಿದ್ದೇಶ್ ಅಭಂಗೇ ಅವರ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ.
ಮಹಾರಾಷ್ಟ್ರದ ಥಾಣೆಯಲ್ಲಿ ಈ ಘಟನೆ ನಡೆದಿದೆ. ರಾತ್ರಿ ನಗರದ ಕೋಪ್ರಿ ಪೊಲೀಸ್ ಠಾಣೆಯಲ್ಲಿ ಈ ಹಲ್ಲೆ ಪ್ರಕರಣ ನಡೆದಿದೆ. ಅಭಂಗೇ ಮತ್ತು ಜವಳಿ ಉದ್ಯಮದಲ್ಲಿ ತೊಡಗಿರುವ ಕೆಲವು ಮಹಿಳೆಯರ ನಡುವಿನ ಹಣಕಾಸಿನ ವಿವಾದವೇ ಈ ಗಲಾಟೆಗೆ ಕಾರಣ ಎನ್ನಲಾಗಿದೆ.
ಹಣಕಾಸಿನ ವಿವಾದ ಬಗೆಹರಿಸಿಕೊಳ್ಳಲು ಮಹಿಳೆಯರ ಗುಂಪು ಹಾಗೂ ಅಭಂಗೇ, ಕೋಪ್ರಿ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ, ಮಹಿಳಾ ಉದ್ಯಮಿಯೊಬ್ಬಳು ತನ್ನ ಸಹಚರನ ಜೊತೆ ಸೇರಿ ಅಭಂಗೇ ಮೇಲೆ ಹಲ್ಲೆ ನಡೆಸಿದ್ದಾಳೆ. ತಕ್ಷಣ ಠಾಣೆಯಲ್ಲಿದ್ದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ. ಎರಡೂ ಕಡೆಯವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಘಟನೆಯ ಬಳಿಕ ಆ ಪ್ರದೇಶದಲ್ಲಿ ತೀವ್ರ ಉದ್ವಿಗ್ನತೆ ಉಂಟಾಗಿತ್ತು ಸದ್ಯ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.

