HomeIndia18 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್ ? ಸುಪ್ರೀಂಕೋರ್ಟ್ ಮಹತ್ವದ ಎಚ್ಚರಿಕೆ

18 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್ ? ಸುಪ್ರೀಂಕೋರ್ಟ್ ಮಹತ್ವದ ಎಚ್ಚರಿಕೆ

ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಮಕ್ಕಳ ಖಾತೆಗಳಿಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. 12ರಿಂದ 13 ವರ್ಷದ ಮಕ್ಕಳು ಸಾಮಾಜಿಕ ಮಾಧ್ಯಮ ಖಾತೆಗಳನ್ನು ಹೇಗೆ ತೆರೆಯುತ್ತಿದ್ದಾರೆ? ಇದು ದೇಶದ ಕಾನೂನುಗಳಿಗೆ ವಿರುದ್ಧವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ಸ್ಪಷ್ಟಪಡಿಸಿದೆ.

ಭಾರತೀಯ ಒಪ್ಪಂದ ಕಾಯ್ದೆಯ ಪ್ರಕಾರ ಅಪ್ರಾಪ್ತ ವಯಸ್ಕರ ಒಪ್ಪಿಗೆ ಕಾನೂನುಬದ್ಧವಾಗಿ ಮಾನ್ಯವಾಗುವುದಿಲ್ಲ ಎಂದು ನ್ಯಾಯಾಲಯ ನೆನಪಿಸಿದೆ.

ನಾಗರಿಕ ಸಮಾಜದಲ್ಲಿ ಮಕ್ಕಳ ಸುರಕ್ಷತೆಯನ್ನು ಕಾಪಾಡಲು ಸೂಕ್ತ ರಕ್ಷಣಾ ವ್ಯವಸ್ಥೆ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ‘ಜಸ್ಟ್ ರೈಟ್ಸ್ ಫಾರ್ ಚಿಲ್ಡ್ರನ್ ಅಲಯನ್ಸ್’ ಎಂಬ ಸ್ವಯಂಸೇವಾ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಈ ಮಹತ್ವದ ಅಭಿಪ್ರಾಯಗಳು ವ್ಯಕ್ತವಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪ್ರಾಪ್ತ ವಯಸ್ಕರು ಸಾಮಾಜಿಕ ಮಾಧ್ಯಮಗಳ ನಿಯಮಗಳು ಮತ್ತು ಷರತ್ತುಗಳಿಗೆ ಒಪ್ಪಿಗೆ ನೀಡಿ ಖಾತೆಗಳನ್ನು ತೆರೆಯುವುದು ಕಾನೂನುಬಾಹಿರ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಆನ್‌ಲೈನ್ ಗ್ರೂಮಿಂಗ್, ಲೈಂಗಿಕ ಕಿರುಕುಳ, ಸೈಬರ್ ಬುಲ್ಲಿಯಿಂಗ್ ಹಾಗೂ ವೈಯಕ್ತಿಕ ಮಾಹಿತಿಯ ದುರುಪಯೋಗ ಸೇರಿದಂತೆ ಹಲವು ಗಂಭೀರ ಅಪಾಯಗಳಿಂದ ಮಕ್ಕಳನ್ನು ರಕ್ಷಿಸುವ ಅಗತ್ಯವಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ (DPDP) ಕಾಯ್ದೆ-2023ರಲ್ಲಿ ಕೆಲವು ನಿಯಮಗಳಿದ್ದರೂ, ಸಂಪೂರ್ಣ ಕಾನೂನುಬದ್ಧ ಮಾರ್ಗಸೂಚಿಗಳನ್ನು ಇನ್ನೂ ರೂಪಿಸಬೇಕಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದ್ದಾರೆ. ಸೂಕ್ತ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ರೂಪಿಸಲು ಕೇಂದ್ರ ಸರ್ಕಾರ ಕಾಲಾವಕಾಶ ಕೋರಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಖಾತೆ ತೆರೆಯಲು ಕನಿಷ್ಠ ವಯಸ್ಸನ್ನು 18 ವರ್ಷಕ್ಕೆ ನಿಗದಿಪಡಿಸಬೇಕು. ಇಲ್ಲದಿದ್ದರೆ ಮಧ್ಯವರ್ತಿ ಸಂಸ್ಥೆಗಳ ವಿರುದ್ಧ ಕಠಿಣ ಆದೇಶಗಳನ್ನು ಹೊರಡಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ.

ಈ ಹಿನ್ನೆಲೆಯಲ್ಲಿ ಮಕ್ಕಳ ಸಾಮಾಜಿಕ ಮಾಧ್ಯಮ ಬಳಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ಯಾವ ರೀತಿಯ ಕಾನೂನು ಕ್ರಮಗಳನ್ನು ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

ಶಿವಮೊಗ್ಗ ರಂಗಾಯಣದಲ್ಲಿ ಆಸಕ್ತ ಕಲಾವಿದರು/ತಂತ್ರಜ್ಞರಿಂದ ಅರ್ಜಿ ಆಹ್ವಾನ

ಶಿವಮೊಗ್ಗದ ರಂಗಾಯಣದಲ್ಲಿ ರೆಪರ್ಟರಿಗೆ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಇಬ್ಬರು ಮಹಿಳಾ ಕಲಾವಿದರು, ಮತ್ತು ಇಬ್ಬರು ಪುರುಷ ಕಲಾವಿದರನ್ನು ಹಾಗೂ ಒಬ್ಬ ಸಂಗೀತ ಸಂಯೋಜಕರು/ಪಕ್ಕವಾದ್ಯಗಾರರನ್ನು ನೇಮಕ ಮಾಡಿಕೊಳ್ಳಲು ಆಸಕ್ತರಿಂದ ಅರ್ಜಿಯನ್ನು ಕರೆಯಲಾಗಿದೆ.

ಕಲಾವಿದರ ನೇಮಕದ ನಿಬಂಧನೆಗಳು:-

ಆಯ್ಕೆಯಾದ ಕಲಾವಿದರು ರೆಪರ್ಟರಿಯ ಭಾಗವಾಗಿದ್ದು, ರಂಗಶಿಕ್ಷಣದ ಎಲ್ಲಾ ವಿಭಾಗಗಳಲ್ಲಿ ತರಬೇತಿ ಪಡೆಯುವುದರ ಜೊತೆಗೆ ಅಭಿನಯದ ಜವಾಬ್ದಾರಿಯನ್ನು ನಿಭಾಯಿಸಬೇಕು.

ಈ ನೇಮಕ ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಇರುತ್ತದೆ.

ಆಯ್ಕೆಯಾದ ಕಲಾವಿದರಿಗೆ ಮೊದಲನೇ ವರ್ಷ ಮಾಸಿಕ ರೂ.18,000/-, ಈಗಾಗಲೇ ರಂಗಾಯಣಗಳಲ್ಲಿ ಕಲಾವಿದರಾಗಿ ಕಾರ್ಯ ನಿರ್ವಹಿಸಿರುವವರಿಗೆ ಮಾಸಿಕ ರೂ.20,000/-ಗಳನ್ನು ಸಂಚಿತ ವೇತನವಾಗಿ ನಿಯಮಾನುಸಾರ ನೀಡಲಾಗುವುದು. ಇತರೆ ಯಾವುದೇ ಭತ್ಯೆಗಳನ್ನು ನೀಡುವುದಿಲ್ಲ. ಊಟ ಮತ್ತು ವಸತಿ ವ್ಯವಸ್ಥೆಯನ್ನು ಕಲಾವಿದರೇ ಮಾಡಿಕೊಳ್ಳಬೇಕು.

ರಂಗಾಯಣಗಳಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸಿರುವವರು ದೃಢೀಕರಣ ಪತ್ರವನ್ನು ಆಯಾ ರಂಗಾಯಣಗಳಿಂದ ಪಡೆದು ಸಲ್ಲಿಸಬೇಕು.

ದಿನಾಂಕ: 29-09-2026ಕ್ಕೆ ಕಲಾವಿದರ ವಯಸ್ಸು ಕನಿಷ್ಠ 18 ವರ್ಷಗಳಿಂದ ಗರಿಷ್ಠ 32 ವರ್ಷ ಮೀರಿರಬಾರದು.

ಪಾರಂಪರಿಕ ಕಲೆಯ ಕುಟುಂಬಗಳಿಂದ ಬಂದ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಇಂತಹ ಪ್ರಕರಣದಲ್ಲಿ ವಯೋಮಿತಿಯನ್ನು 05 ವರ್ಷ ಸಡಿಲಿಸಬಹುದು. ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸುವುದು.

ಆಯ್ಕೆಯಾದ ಕಲಾವಿದರು ರಂಗಾಯಣ, ಶಿವಮೊಗ್ಗದ ನಿಯಮ ಮತ್ತು ಷರತ್ತುಗಳಿಗೆ ಬದ್ಧರಾಗಿರಬೇಕು.

ಈ ಮೇಲ್ಕಂಡ ಷರತ್ತುಗಳಲ್ಲದೆ ಇತರೆ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ಆಯ್ಕೆ ಸಮಿತಿಗಿರುತ್ತದೆ.

ತಂತ್ರಜ್ಞರ ನೇಮಕದ ನಿಬಂಧನೆಗಳು:-

ಸಂಗೀತ ಸಂಯೋಜಕರು/ಪಕ್ಕವಾದ್ಯಗಾರರು ಪ್ರತಿ ವಿಭಾಗದಲ್ಲಿ ಕನಿಷ್ಠ 10 ವರ್ಷಗಳ ರಂಗಾನುಭವ ಹೊಂದಿರಬೇಕು.

ತಂತ್ರಜ್ಞರಿಗೆ ಕನಿಷ್ಠ ಕನ್ನಡ ಭಾಷೆಯ ಓದುವ, ಬರೆಯುವ, ಗ್ರಹಿಸುವ ಸಾಮರ್ಥ್ಯವಿರಬೇಕು.

ರಂಗಾನುಭವದ ಜೊತೆಗೆ ಶೈಕ್ಷಣಿಕ ಅರ್ಹತೆ ಮತ್ತು ರಂಗಶಿಕ್ಷಣದ ಅರ್ಹತೆಗಳು ಇದ್ದಲ್ಲಿ ಅಂತಹವರಿಗೆ ಆದ್ಯತೆ ನೀಡಲಾಗುವುದು.

ಈ ನೇಮಕ ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಇರುತ್ತದೆ.

ತಂತ್ರಜ್ಞರಿಗೆ ಸಂಚಿತ ವೇತನ, ಕ್ರೋಡೀಕೃತವಾಗಿ ಮಾಸಿಕ ರೂ.25,000/-ಗಳನ್ನು ನೀಡಲಾಗುವುದು. ಇತರೆ ಯಾವುದೇ ಭತ್ಯೆಗಳು ಇರುವುದಿಲ್ಲ. ಊಟ, ವಸತಿ ವ್ಯವಸ್ಥೆಯನ್ನು ತಂತ್ರಜ್ಞರೇ ಮಾಡಿಕೊಳ್ಳಬೇಕು.

ತಂತ್ರಜ್ಞರು ನಿರೀಕ್ಷಿತ ಮಟ್ಟದಲ್ಲಿ ಕೆಲಸ ನಿರ್ವಹಿಸದೆ ಇದ್ದಲ್ಲಿ ಅವರ ನೇಮಕವನ್ನು ಯಾವುದೇ ಸಂದರ್ಭದಲ್ಲಿ ರದ್ದುಗೊಳಿಸುವ ಅಧಿಕಾರ ರಂಗಸಮಾಜಕ್ಕೆ ಇರುತ್ತದೆ.

ತಂತ್ರಜ್ಞರ ನೇಮಕದ ಸಂದರ್ಭದಲ್ಲಿ ರೋಸ್ಟರ್ ನಿಯಮಗಳು ಕಡ್ಡಾಯವಾಗಿರುವುದಿಲ್ಲ. ತಂತ್ರಜ್ಞರಿಗೆ ವಯಸ್ಸಿನ ವಯೋಮಿತಿ ಇರುವುದಿಲ್ಲ.

ಆಸಕ್ತ ಕಲಾವಿದರು, ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ: 08-10-2026 ರ ಸಂಜೆ 5.30 ಗಂಟೆಯೊಳಗಾಗಿ ಆಡಳಿತಾಧಿಕಾರಿಗಳು, ರಂಗಾಯಣ, ಸುವರ್ಣ ಸಂಸ್ಕೃತಿ ಭವನ, ಅಶೋಕ ನಗರ, ಹೆಲಿಪ್ಯಾಡ್ ಹಿಂಭಾಗ, ಶಿವಮೊಗ್ಗ-577201 ವಿಳಾಸಕ್ಕೆ ಅಂಚೆ ಮೂಲಕ, ಖುದ್ದಾಗಿ ಅಥವಾ

ಇ-ಮೇಲ್ ವಿಳಾಸ:[email protected] ಮೂಲಕ ಅಥವಾ ಗೂಗಲ್ ಫಾರಂನ್ನು ವೆಬ್‌ಸೈಟ್ https://rangayanashivamogga.karnataka.gov.in/ ನಿಂದ ಅಥವಾ ಫೇಸ್ಬುಕ್ ಮೂಲಕ ಡೌನ್ಲೋಡ್ ಮಾಡಿಕೊಂಡು ಆನ್ಲೈನ್ ಮೂಲಕವೂ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 08182-256353 ಅಥವಾ ಮೊಬೈಲ್ ಸಂಖ್ಯೆ 7975229166 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ರಂಗಾಯಣದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular