HomeKarnatakaಮಾಫಿ ಸಾಕ್ಷಿಗೆ ಸಂಬಂಧಿಸಿದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೂರು ಮೇಲ್ಮನವಿ ಸಲ್ಲಿಸಿದ ದರ್ಶನ್...

ಮಾಫಿ ಸಾಕ್ಷಿಗೆ ಸಂಬಂಧಿಸಿದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೂರು ಮೇಲ್ಮನವಿ ಸಲ್ಲಿಸಿದ ದರ್ಶನ್ ಪತ್ನಿ ವಿಜಯಲಕ್ಷ್ಮೀ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಅವರು ಸುಪ್ರೀಂಕೋರ್ಟ್‌ಗೆ ಒಟ್ಟು 3 ಮೇಲ್ಮನವಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಪ್ರದೋಷ್ ಮಾಫಿ ಸಾಕ್ಷಿಯಾಗಿ ಹೇಳಿಕೆ ನೀಡಲು ಹೊರಡಿಸಿರುವ ಆದೇಶಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನ ವಿವಿಧ ಆದೇಶಗಳನ್ನು ಪ್ರಶ್ನಿಸಿ ಈ ಮೇಲ್ಮನವಿಗಳನ್ನು ಸಲ್ಲಿಸಲಾಗಿದ್ದು, ಅರ್ಜಿಗಳ ವಿಚಾರಣೆ ಇದೇ ವಾರದಲ್ಲೇ ನಡೆಯುವ ಸಾಧ್ಯತೆಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿ ನಿಯಮಾವಳಿಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ನಟ ದರ್ಶನ್ ಸುಪ್ರೀಂ ಕೋರ್ಟ್‌ಗೆ ಎರಡು ಪ್ರತ್ಯೇಕ ಮೇಲ್ಮನವಿಗಳನ್ನು ಸಲ್ಲಿಸಿದ್ದಾರೆ. ‘ಮಾಫಿ ಸಾಕ್ಷಿ ಆದೇಶ ನೀಡುವ ಮುನ್ನ ಸಹ-ಆರೋಪಿಯ ವಾದ ಆಲಿಸುವ ಅಗತ್ಯವಿಲ್ಲ’ ಎಂಬ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಲಾಗಿದೆ. ಇನ್ನು, ಮಾಫಿ ಸಾಕ್ಷಿ ನಿರ್ಧಾರವನ್ನು ಮರುಪರಿಶೀಲಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ದರ್ಶನ್ ಪ್ರಶ್ನೆ ಮಾಡಿದ್ದಾರೆ.

ಇದೇ ವೇಳೆ ಮಾಫಿ ಸಾಕ್ಷಿ ಆದೇಶವನ್ನು ಎತ್ತಿಹಿಡಿದಿದ್ದ ಹೈಕೋರ್ಟ್‌ನ ಸೆಪ್ಟೆಂಬರ್ 23ರ ತೀರ್ಪನ್ನು ಪ್ರಶ್ನಿಸಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಸುಪ್ರೀಂ ಕೋರ್ಟ್‌ಗೆ ಮತ್ತೊಂದು ಮೇಲ್ಮನವಿ ಸಲ್ಲಿಸಿದ್ದಾರೆ. ಹೀಗಾಗಿ ಮಾಫಿ ಸಾಕ್ಷಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ದರ್ಶನ್ ಹಾಗೂ ವಿಜಯಲಕ್ಷ್ಮಿ ಕಡೆಯಿಂದ ಒಟ್ಟು ಮೂರು ಮೇಲ್ಮನವಿ ಅರ್ಜಿಗಳು ಸಲ್ಲಿಕೆಯಾಗಿದ್ದು, ಸುಪ್ರೀಂ ಕೋರ್ಟ್ ನೀಡಲಿರುವ ಆದೇಶ ತೀವ್ರ ಕುತೂಹಲ ಮೂಡಿಸಿದೆ.

ರೇಣುಕಾಸ್ವಾಮಿ ಹತ್ಯೆ ಕೇಸ್ ಸಂಬಂಧ ಮಾಫಿ ಸಾಕ್ಷಿ ವಿಚಾರಣೆ ಕೋರ್ಟ್​​ನಲ್ಲಿ ನಡೆಯುತ್ತಿದೆ. ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ​ದರ್ಶನ್ ಪಾತ್ರ ಏನು ಎಂಬುದನ್ನು ಪ್ರದೋಷ್ ಪ್ರತಿಯೊಂದು ಮಾಹಿತಿ ಬಿಚ್ಚಿಡುತ್ತಿದ್ದಾರೆ. ಇದರಿಂದ ದರ್ಶನ್ ಹಾಗೂ ಗ್ಯಾಂಗ್ ನಲ್ಲಿ ಆತಂಕ ಶುರುವಾಗಿದೆ. ಪ್ರದೋಷ್ ಹೇಳಿಕೆಗಳು ಮಹತ್ವವಾಗಿದ್ದು, ತನಗೆ ಇನ್ನಷ್ಟು ಮುಳುವಾಗಲಿವೆಯೇ? ಎಂಬ ಆತಂಕದಲ್ಲಿ ದರ್ಶನ್ ಇದ್ದಾರೆ. ಈ ಹಿನ್ನೆಲೆಯಲ್ಲಿ ಮಾಫಿ ಸಾಕ್ಷಿ ಹೇಳಿಕೆಗಳನ್ನು ತಡೆಯಲು ಇನ್ನಿಲ್ಲದ ಕಸರತ್ತನ್ನು ದರ್ಶನ್ ಮಾಡುತ್ತಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಅಮಾನವೀಯವಾಗಿ ವರ್ತಿಸಿದ್ದ ದರ್ಶನ್: ಘಟನೆಯ ಬಗ್ಗೆ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಪ್ರದೋಷ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಿ ಬದಲಾಗಿದ್ದು, ನ್ಯಾಯಾಲಯದಲ್ಲಿ ಕೊಲೆ ನಡೆದ ಸಂದ್ರಭದ ಬಗ್ಗೆ ಹಾಗೂ ನಟ ದರ್ಶನ್ ಅಟ್ಟಹಾಸದ ಬಗ್ಗೆ ಇಂಚಿಂಚೂ ಮಾಹಿತಿ ಬಿಚ್ಚಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ 14ನೇ ಆರೋಪಿ ಆಗಿರುವ ಪ್ರದೋಶ್ ಮಾಫಿ ಸಾಕ್ಷಿಯಾಗಿ ಬದಲಾಗಿದ್ದು, ಬೆಂಗಳೂರಿನ 59ನೇ ಸೆಷನ್ಸ್‌ ನ್ಯಾಯಾಲಯದ ಮುಂದೆ ಸಾಕ್ಷಿ ದಾಖಲಿಸಿದ್ದಾರೆ. ಪ್ರದೋಶ್ ಅವರ ಸಾಕ್ಷಿ ಹೇಳಿಕೆಯನ್ನು ತಡೆಯಲು ದರ್ಶನ್ ಪರ ವಕೀಲರು ಇನ್ನಿಲ್ಲದ ಪ್ರಯತ್ನ ಮಾಡಿದರಾದರೂ ಸಾಧ್ಯವಾಗಿಲ್ಲ, (ಸೆಪ್ಟೆಂಬರ್ 28ರಂದು ನ್ಯಾಯಾಲಯದಲ್ಲಿ ಸುಮಾರು ಮೂರು ಗಂಟೆಗಳ ಕಾಲ ಪ್ರದೋಷ್ ಸಾಕ್ಷ್ಯ ನುಡಿದಿದ್ದು, ಪ್ರಕರಣದ ಭೀಕರತೆಯನ್ನು ವಿವರಿಸಿದ್ದಾರೆ.

ರೇಣುಕಾಸ್ವಾಮಿ ವಿಚಾರವಾಗಿ ದರ್ಶನ್ ಹೇಗೆಲ್ಲ ನಡೆದುಕೊಂಡರು.ಹೇಗೆ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿ ಅಟ್ಟಹಾಸ ಮೆರೆದರು ಎಂಬುದನ್ನು ಸಹ ವಿವರಿಸಿದ್ದಾರೆ.

ಆರ್​​ಆರ್​​ ನಗರದ ಸ್ಟೋನಿ ಬ್ರೂಕ್‌ನಲ್ಲಿ ಪ್ರದೋಶ್, ವಿನಯ್, ದರ್ಶನ್, ಚಿಕ್ಕಣ್ಣ ಇನ್ನಿತರರ ನಡುವೆ ನಡೆದ ಸಭೆಯಿಂದ ಆರಂಭಗೊಂಡು, ಪಟ್ಟಣಗೆರೆ ಶೆಡ್‌ನಲ್ಲಿ ನಡೆದ ಘಟನೆಗಳ ವರೆಗೆ ಅಂದು ನಡೆದ ಪ್ರತಿಯೊಂದು ಕೃತ್ಯವನ್ನು ಪ್ರದೋಷ್ ನ್ಯಾಯಾಲಯದ ಮುಂದೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ವಿಶೇಷವಾಗಿ ದರ್ಶನ್ ಹಾಗೂ ಇನ್ನೂ ಕೆಲವರು ರೇಣುಕಾಸ್ವಾಮಿ ಮೇಲೆ ಎಸಗಿದ ಅಮಾನವೀಯ ಹಲ್ಲೆ, ರೇಣುಕಾಸ್ವಾಮಿಯನ್ನು ನಡೆಸಿಕೊಂಡ ರೀತಿಯ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದಾರೆ.

ರೇಣುಕಾಸ್ವಾಮಿ, ಪವಿತ್ರಾ ಗೌಡಗೆ ಮಾಡಿದ ಸಂದೇಶದಿಂದಾಗಿ ಸಿಟ್ಟಿನಲ್ಲಿದ್ದ ದರ್ಶನ್, ಪಟ್ಟಣಗೆರೆ ಶೆಡ್​​​ನಲ್ಲಿ ಹಲವಾರು ಬಾರಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿರುವುದಾಗಿ ಪ್ರತ್ಯಕ್ಷದರ್ಶಿ ಪ್ರದೋಷ್ ಹೇಳಿದ್ದಾರೆ. ಪವಿತ್ರಾ ಗೌಡ ಸಹ ಚಪ್ಪಲಿಯಲ್ಲಿ ರೇಣುಕಾಸ್ವಾಮಿ ಕೆನ್ನೆಗೆ ಹೊಡೆದ ವಿಷಯ. ರೇಣುಕಾಸ್ವಾಮಿ ಪವಿತ್ರಾ ಗೌಡ ಮತ್ತು ದರ್ಶನ್ ಕಾಲಿಗೆ ಬಿದ್ದು ಕ್ಷಮೆ ಕೇಳಿದ ವಿಷಯಗಳನ್ನು ಅಂದು ನಡೆದಂತೆ ಎಲವನ್ನೂ ನ್ಯಾಯಾಲಯದ ಮುಂದೆ ಪ್ರದೋಶ್ ವಿವರಿಸಿದ್ದಾರೆ.

ಪ್ರದೋಷ್ ಹೇಳಿಕೆಯನ್ನು ಭದ್ರವಾಗಿ ಇಡಲಾಗಿದೆ. ಇಂದು ಕೂಡ ಪ್ರದೋಷ್ ಕೋರ್ಟ್ ಗೆ ಹಾಜರಾಗಿ ಹೇಳಿಕೆ ಮುಂದುವರೆಸಲಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular