HomeKarnatakaನರ್ಸಿಂಗ್, ಪ್ಯಾರಾ ಮೆಡಿಕಲ್ ಕ್ಷೇತ್ರಗಳಲ್ಲಿ ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶ: ಸಚಿವ ಲಕ್ಷ್ಮಣ ಸವದಿ

ನರ್ಸಿಂಗ್, ಪ್ಯಾರಾ ಮೆಡಿಕಲ್ ಕ್ಷೇತ್ರಗಳಲ್ಲಿ ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶ: ಸಚಿವ ಲಕ್ಷ್ಮಣ ಸವದಿ

ಹಾಸನ: ಹೊಸ ತಲೆಮಾರಿನ ಭವಿಷ್ಯ ಹಾಗೂ ಸಮಾಜದ ಒಳಿತಿಗಾಗಿ ರಾಜ್ಯದ ಎಲ್ಲ ಮಠಗಳು ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಉನ್ನತಿಯನ್ನು ಬಯಸುತ್ತಾ ಮಹತ್ವದ ಸೇವೆ ಸಲ್ಲಿಸುತ್ತಿವೆ ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

 ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಧವಲತೀರ್ಥಂ ಚಲ್ಯದಲ್ಲಿ ಜೆ.ಎನ್.ಎಂ. ನರ್ಸಿಂಗ್, ಬಿ.ಎಸ್‌ಸಿ. ನರ್ಸಿಂಗ್, ಎಂ.ಎಸ್‌ಸಿ. ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜುಗಳ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ಗ್ರಾಮೀಣ ಭಾಗದ ಜನರ ಆರೋಗ್ಯಕ್ಕೆ ಪೂರಕವಾಗಿ ಅತ್ಯಂತ ಅವಶ್ಯಕವಾಗಿರುವ ನರ್ಸಿಂಗ್ ಕಾಲೇಜು ಪ್ರಾರಂಭಿಸಲಾಗುತ್ತಿದ್ದು, ಇಂತಹ ಕೆಲಸ ಕಾರ್ಯಗಳನ್ನು ಸಂಘ ಸಂಸ್ಥೆಗಳು ಮಾಡುವುದರ ಮೂಲಕ ಸರ್ಕಾರದ ಭಾರವನ್ನು ಕಡಿಮೆ ಮಾಡುತ್ತಿವೆ ಎಂದು ತಿಳಿಸಿದರು.

ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿರುವ ಇಂದಿನ ಕಾಲದಲ್ಲಿಯೂ ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಶಿಕ್ಷಣಕ್ಕೆ ಹೆಚ್ಚಿನ ಪ್ರಸ್ತುತತೆ ಇದೆ. ಈ ಕ್ಷೇತ್ರಗಳಲ್ಲಿ ಯುವಜನರಿಗೆ ಉತ್ತಮ ಉದ್ಯೋಗಾವಕಾಶಗಳಿದ್ದು, ಆರೋಗ್ಯ ಸೇವೆಯಲ್ಲಿ ನರ್ಸಿಂಗ್ ವೃತ್ತಿಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಶ್ರವಣಬೆಳಗೊಳದ ಸ್ವಾಮೀಜಿಯವರು ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕೋರಸ್ ಗಳನ್ನು ಆರಂಭಿಸುವ ಮೂಲಕ ಸಮಾಜಕ್ಕೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ. ಇಂತಹ ಶಿಕ್ಷಣ ಸಂಸ್ಥೆಗಳ ಮೂಲಕ ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ದೊರೆಯುವುದರ ಜೊತೆಗೆ, ಆರೋಗ್ಯ ಕ್ಷೇತ್ರದಲ್ಲಿ ಸರ್ಕಾರದ ಮೇಲಿನ ಜವಾಬ್ದಾರಿಯೂ ಒಂದಷ್ಟು ಕಡಿಮೆಯಾಗುತ್ತದೆ. ಈ ಮೂಲಕ ಸ್ವಾಮೀಜಿಯವರು ಸರ್ಕಾರಕ್ಕೂ ಸಹಕಾರ ನೀಡಿದಂತಾಗಿದೆ ಎಂದರು.

ಎಲ್ಲವು ಸರ್ಕಾರದಿಂದಲೇ ಆಗಲಿ ಎಂದು ಭಾವಿಸದೆ ಸಂಘ ಸಂಸ್ಥೆಗಳ ಮೂಲಕ ಇಂತಹ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿರುವ ಪೂಜ್ಯರಿಗೆ ಅಭಿನಂದನೆಗಳನ್ನು ತಿಳಿಸಿದರಲ್ಲದೇ, ಸಕಲ ಜೀವಿಗಳಿಗೂ ಸೌಖ್ಯ ಬಯಸುವ ಜೈನ ಧರ್ಮ ಧಾರ್ಮಿಕ ಸೇವೆ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದೆ ಎಂದು ತಿಳಿಸಿದರು.

ಕ್ಷೇತ್ರ ಶ್ರವಣಬೆಳಗೊಳ ಮಠದ ಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಅವರು ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿಸೇವಾ ಮನೋಭಾವವೇ ನರ್ಸಿಂಗ್ ಕ್ಷೇತ್ರದ ದೊಡ್ಡ ಶಕ್ತಿ ಎಂದು ತಿಳಿಸಿದರು.

ಕರುಣೆ, ಮಾತೃತ್ವದ ಗುಣ ಹಾಗೂ ಸೇವಾ ಮನೋಭಾವ ನರ್ಸಿಂಗ್ ವೃತ್ತಿಯ ಪ್ರಮುಖ ಅಂಶಗಳಾಗಿವೆ, ರೋಗಿಗಳ ಆರೈಕೆ ಮತ್ತು ಆರೋಗ್ಯ ಸೇವೆಯಲ್ಲಿ ನರ್ಸಿಂಗ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಶಾಸಕ ಸಿ.ಎನ್.ಬಾಲಕೃಷ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ. ಗೋಪಾಲಸ್ವಾಮಿ, ಕರ್ನಾಟಕ ರಾಜ್ಯ ಶುಶ್ರೂಷಾ ಪರೀಕ್ಷೆ ಮಂಡಳಿ ಪರೀಕ್ಷಾ ಮೇಲ್ವಿಚಾರಕ ಶರತ್ ಬಾಬು ಎಂ.ಎಸ್., ಕರ್ನಾಟಕ ರಾಜ್ಯ ಶುಶ್ರೂಷಾ ಪರಿಷತ್ ಕುಲ ಸಚಿವ ಶ್ರೀಕಾಂತ್ ಪುಲಾರೆ ಮತ್ತಿತರರು ಉಪಸ್ಥಿತರಿದ್ದರು.

ಅಕ್ಟೋಬರ್ 2:  ‘157ನೇ ಗಾಂಧಿ ಜಯಂತಿ’ ಕಾರ್ಯಕ್ರಮ

ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಮಹಾನಗರ ಪಾಲಿಕೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ರಾಷ್ಟ್ರೀಯ ಸೇವಾ ಸಂಘ ಹಾಗೂ ಸೇವಾದಳ ಇವರುಗಳ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ 157ನೇ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮವು ದಿನಾಂಕ: 02-10-2026 ರ ಶುಕ್ರವಾರ ಬೆಳಿಗ್ಗೆ 9-30 ಗಂಟೆಗೆ ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನ, ಶಿವಮೊಗ್ಗ ಇಲ್ಲಿ ನಡೆಯಲಿದೆ.‌ ಪ್ರಹ್ಲಾದ್ ದೀಕ್ಷಿತ್ ಮತ್ತು ತಂಡದಿಂದ ಗಾಂಧಿ ಸ್ಮೃತಿ ಹಾಗೂ ಸಾಹಿತಿಗಳು ಮತ್ತು ವಿಶ್ರಾಂತ ಪ್ರಾಂಶುಪಾಲ ಡಾ.ಹೆಚ್.ಟಿ.ಕೃಷ್ಣಮೂರ್ತಿ ಇವರಿಂದವಿಶೇಷ ಉಪನ್ಯಾಸ ವಿರುತ್ತದೆ.

ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ತುಕಾರಾಂ ರಾವ್ ಬಿ.ವಿ.ಕೋರಿದ್ದಾರೆ.

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular