HomeKarnatakaರಾಜ್ಯ ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ: ಅಕ್ಟೋಬರ್ 15 ಕೊನೆಯ ದಿನ

ರಾಜ್ಯ ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ: ಅಕ್ಟೋಬರ್ 15 ಕೊನೆಯ ದಿನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ನೀಡಲಾಗುವ ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳನ್ನು ಅಕ್ಟೋಬರ್ 15 ರೊಳಗೆ ನಾಮನಿರ್ದೇಶನ ಮಾಡಬಹುದಾಗಿದೆ.

ಕರ್ತವ್ಯ ನಿಷ್ಠೆ, ಗುಣಮಟ್ಟದ ಹಾಗೂ ಪ್ರಾಮಾಣಿಕ ಸೇವೆ, ಸಾರ್ವಜನಿಕ ಹಿತಕ್ಕಾಗಿ ಕೈಗೊಂಡ ವಿಶೇಷ ಕಾರ್ಯಗಳು, ಕಚೇರಿ ಕಾರ್ಯಕ್ಷಮತೆ, ಸಮಯ ಪಾಲನೆ, ದುರ್ಬಲ ವರ್ಗಗಳ ಬಗ್ಗೆ ಕಾಳಜಿ ಮತ್ತು ಸಹೋದ್ಯೋಗಿಗಳೊಂದಿಗೆ ಉತ್ತಮ ಸಮನ್ವಯ ಹೊಂದಿರುವುದನ್ನು ಈ ಪ್ರಶಸ್ತಿಗೆ ಮಾನದಂಡವಾಗಿ ಪರಿಗಣಿಸಲಾಗುತ್ತದೆ.

ಅರ್ಹತೆಗಳು:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರದ ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದದ ಖಾಯಂ ನೌಕರರು ಅರ್ಹರು. ಸಂಘಕ್ಕೆ ಪ್ರತಿ ವರ್ಷ ಸದಸ್ಯತ್ವ ಶುಲ್ಕ ಪಾವತಿಸಿರಬೇಕು. ಸರ್ಕಾರಿ ಸೇವೆಗೆ ಸೇರ್ಪಡೆಗೊಂಡು ಕನಿಷ್ಠ ಐದು ವರ್ಷ ಪೂರೈಸಿರಬೇಕು.

ನಾಮನಿರ್ದೇಶನಕ್ಕೆ ಅವಕಾಶ:

ಅರ್ಹ ಅಧಿಕಾರಿಗಳು ಅಥವಾ ನೌಕರರು ಪ್ರಶಸ್ತಿಗೆ ಸ್ವಯಂ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಇಲಾಖಾ ಮುಖ್ಯಸ್ಥರು, ಮೇಲಾಧಿಕಾರಿಗಳು, ಸಹೋದ್ಯೋಗಿಗಳು, ಸಂಘ-ಸಂಸ್ಥೆಗಳು, ಸಾರ್ವಜನಿಕರು ಹಾಗೂ ಸರ್ಕಾರಿ ನೌಕರರ ಸಂಘದ ಜಿಲ್ಲಾ ಮತ್ತು ತಾಲೂಕು ಅಧ್ಯಕ್ಷರು/ಪದಾಧಿಕಾರಿಗಳು ಅರ್ಹರನ್ನು ನಾಮನಿರ್ದೇಶನ ಮಾಡಬಹುದು.

ಅಧಿಕಾರಿ/ನೌಕರರ ಇತ್ತೀಚಿನ ಭಾವಚಿತ್ರದೊಂದಿಗೆ POWER MEDIA.INFO ಮೂಲಕ ಅಕ್ಟೋಬರ್ 15 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬಳ್ಳಾರಿ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷ ಸದಾನಂದ ನೆಲ್ಕುದ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯೋಜನೆಗಳು: ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2026-27 ನೇ ಸಾಲಿಗೆ ಸಂಬಂಧಿಸಿದಂತೆ ವಿವಿಧ ಯೋಜನೆಗಳ ಅಡಿಯಲ್ಲಿ ಧನಸಹಾಯ ಹಾಗೂ ಪ್ರೋತ್ಸಾಹಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಚೇತನ ಯೋಜನೆ , ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ ಪ್ರೋತ್ಸಾಹಧನಕ್ಕಾಗಿ ಹಾಗೂ ಉದ್ಯೋಗಿನಿ ಯೋಜನೆ ಸಹಾಯಧನಕ್ಕಾಗಿ.

ಆಸಕ್ತ ಅರ್ಜಿಧಾರರು ಗ್ರಾಮ ಒನ್, ಶಿವಮೊಗ್ಗ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 31 ಕಡೆಯ ದಿನವಾಗಿದ್ದು ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ: 08182-295514 ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಅಕ್ಟೋಬರ್ 2 : ‘157ನೇ ಗಾಂಧಿ ಜಯಂತಿ’ ಕಾರ್ಯಕ್ರಮ

ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಮಹಾನಗರ ಪಾಲಿಕೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ರಾಷ್ಟ್ರೀಯ ಸೇವಾ ಸಂಘ ಹಾಗೂ ಸೇವಾದಳ ಇವರುಗಳ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ 157ನೇ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮವು ದಿನಾಂಕ: 02-10-2026 ರ ಶುಕ್ರವಾರ ಬೆಳಿಗ್ಗೆ 9-30 ಗಂಟೆಗೆ ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನ, ಶಿವಮೊಗ್ಗ ಇಲ್ಲಿ ನಡೆಯಲಿದೆ.‌ಶ್ರೀ ಪ್ರಹ್ಲಾದ್ ದೀಕ್ಷಿತ್ ಮತ್ತು ತಂಡದಿಂದ ಗಾಂಧಿ ಸ್ಮೃತಿ ಹಾಗೂ ಸಾಹಿತಿಗಳು ಮತ್ತು ವಿಶ್ರಾಂತ ಪ್ರಾಂಶುಪಾಲರಾದ ಡಾ.ಹೆಚ್.ಟಿ.ಕೃಷ್ಣಮೂರ್ತಿ ಇವರಿಂದವಿಶೇಷ ಉಪನ್ಯಾಸ ವಿರುತ್ತದೆ.

ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ತುಕಾರಾಂ ರಾವ್ ಬಿ.ವಿ.ಕೋರಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular