HomeKarnatakaಚೂರಿ ತೋರಿಸಿ ಮೊಮ್ಮಗಳ ಮೇಲೆ ಅಜ್ಜನಿಂದಲೇ ಲೈಂಗಿಕ ದೌರ್ಜನ್ಯ: ಬಾಯಿಗೆ ಬಟ್ಟೆ ತುರುಕಿ ಕೊಲೆಗೆ ಯತ್ನ

ಚೂರಿ ತೋರಿಸಿ ಮೊಮ್ಮಗಳ ಮೇಲೆ ಅಜ್ಜನಿಂದಲೇ ಲೈಂಗಿಕ ದೌರ್ಜನ್ಯ: ಬಾಯಿಗೆ ಬಟ್ಟೆ ತುರುಕಿ ಕೊಲೆಗೆ ಯತ್ನ

ಯಾದಗಿರಿ: ಮೊಮ್ಮಗಳ ಮೇಲೆ ತಾತನೇ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿರುವ ಘಟನೆ ಯಾಅದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಾಲಕಿಗೆ ಚೂರು ತೋರಿಸಿ ಬೆದರಿಕೆ ಹಾಕಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಅಜ್ಜ ಯತ್ನಿಸಿದ್ದು, ಆಕೆಯ ಬಾಯಿಗೆ ಬಟ್ಟೆ ತುರುಕಿ ಕೊಲೆ ಮಾಡಲು ಯತ್ನಿಸಿದ್ದಾನೆ. ಈ ದುಷ್ಕೃತ್ಯ ಕಂಡ ವ್ಯಕ್ತಿಯೊಬ್ಬ 112ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸರು ಬರುವಷ್ಟರಲ್ಲಿ ವ್ಯಕ್ತಿ ಬಾಲಕಿಯನ್ನು ರಕ್ಷಿಸಿದ್ದಾರೆ. ಆರೋಪಿ ಶರಣಪ್ಪ (75) ಎಂಬಾತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಸೆಪ್ಟೆಂಬರ್ 23ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಗಳನ್ನು ಅಜ್ಜ-ಅಜ್ಜಿ ಮನೆಯಲ್ಲಿ ಬಿಟ್ಟು ಬಾಲಕಿ ತಾಯಿ ಬೆಂಗಳೂರಿಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಜ್ಜ, ಮೊಮ್ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ.

ಸದ್ಯ ಬಾಲಕಿಗೆ ಚಿಕಿತ್ಸೆ ಹಾಗೂ ರಕ್ಷಣೆ ಹಿನ್ನೆಲೆಯಲ್ಲಿ ಬಾಲಕಿಯನ್ನು ಬಾಲಮಂದಿರಕ್ಕೆ ರವಾನಿಸಲಾಗಿದೆ. ಕೆಂಭಾವಿ ಪೊಲೀಸರು ಆರೋಪಿ ಶರಣಪ್ಪ ಟಣಕೇದಾರ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಶರಣಪ್ಪ ವಿರುದ್ಧ ಪೋಕ್ಸೋ ಕೇಸ್ ಹಾಗೂ ವಿವಿಧ ಸೆಕ್ಷನ್ ಗಳ ಅಡಿ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಮೊಬೈಲ್ ಫೋನ್ ಬಿಟ್ಟು, ವಿದ್ಯಾಭ್ಯಾಸದ ಕಡೆ ಗಮನ ಕೊಡು ಎಂದು ಬುದ್ಧಿ ಹೇಳಿದ್ದೇ ತಪ್ಪಾಯ್ತು; ನೊಂದ ವಿದ್ಯಾರ್ಥಿ ಆತ್ಮಹತ್ಯೆ

ಹಾವೇರಿ: ಮಕ್ಕಳ ಕೈಯಲ್ಲಿ ಮೊಬೈಲ್ ಇದ್ದರೆ ಸಾಕು ಅವರಿಗೆ ಬೇರೇನೂ ಬೇಕಾಗುವುದಿಲ್ಲ. ಊಟ-ಆಟ ಮಾತ್ರವಲ್ಲ ಓದುವುದನ್ನೂ ಮರೆತು ಬಿಡುತ್ತಾರೆ. ಹೀಗೆ ಸದಾಅಕಾಲ ಮೊಬೈಲ್ ಫೋನ್ ಹಿಡಿದುಕೊಂಡು ಕೂರುತ್ತಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗೆ ಪೋಷ್ಕರು ಬೈದು ಬುದ್ಧಿ ಹೇಳಿದ್ದಾರೆ. ಇದನ್ನೇ ಮನಸ್ಸಿಗೆ ಹಚ್ಚಿಕೊಂಡ ಆತ ದುಡುಕಿನ ನಿರ್ಧಾರ ಮಾಡಿದ್ದಾನೆ.

ಮೊಬೈಲ್ ಫೋನ್ ನಲ್ಲಿ ಕಾಲ ಕಳೆಯುವುದನ್ನು ಬಿಟ್ಟು ಸಮಯ ವ್ಯರ್ಥ ಮಾಡದೇ ಓದಿನತ್ತ ಗಮನ ಕೊಡು. ಪರೀಕ್ಷೆಗಳು ಸಮೀಪುಸುತ್ತಿವೆ. ಚೆನ್ನಾಗಿ ಓದು ಎಂದು ಪೋಷಕರು ಮಗನಿಗೆ ಬುದ್ಧಿವಾದ ಹೇಳಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿ ಬೇರೆ ಯೋಚನೆ ಮಾಡದೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮಲ್ಲೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. 16 ವರ್ಷದ ಹರ್ಷ ಮೋರೆ ಮೃತ ಬಾಲಕ. ಎಸ್.ಎಸ್.ಎಲ್.ಸಿ ಓದುತ್ತಿದ್ದ. ಪರೀಕ್ಷೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪೋಷಕರು ಮಗನಿಗೆ ಮೊಬೈಲ್ ಬಿಟ್ಟು ವಿದ್ಯಾಭ್ಯಾಸದ ಕಡೆ ಗಮನ ಕೊಡು ಎಂದು ಬೈದಿದ್ದಾರೆ. ಇಷ್ಟಕ್ಕೆ ಮನನೊಂದ ಹರ್ಷ ಮನೆಯ ಕೋಣೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮಗ ಎಷ್ಟು ಹೊತ್ತಾದರೂ ರೂಮ್ ಬಾಗಿಲು ತೆಗೆಯದಿದ್ದಾಗ ಮಗನನ್ನೆ ಕರೆದಿದ್ದಾರೆ. ಆದರೆ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಇರಲಿಲ್ಲ. ಇದರಿಂದ ಆತಂಕಕ್ಕೊಳಗಾದ ಪೋಷರು ಬಾಗಿಲು ತೆರೆದು ಒಳ ನುಗ್ಗಿದಾಗ ಮಗ ಆತ್ಮಹತ್ಯೆಗೆ ಶರಣಾಗಿರುವುದು ಗೊತ್ತಾಗಿದೆ. ಮಗನನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular