HomeUncategorizedಹಾಸನದಲ್ಲಿ ಭೀಕರ ಅಪಘಾತ: ಪಿಯುಸಿ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

ಹಾಸನದಲ್ಲಿ ಭೀಕರ ಅಪಘಾತ: ಪಿಯುಸಿ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

ಹಾಸನ: ಲಾರಿ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ವಿದ್ಯಾರ್ಥಿನಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ ಹಾಅಸನ ನಗರದಲ್ಲಿ ನಡೆದಿದೆ.

ಹಾಸನ ನಗರದ ವಿಶ್ವಕರ್ಮ ವೃತ್ತದಲ್ಲಿ ಈ ಅಪಘಾತ ಸಂಭವಿಸಿದೆ. ಸ್ಕೂಟಿ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಲಿಖಿತಾ (18) ಅಪಘಾತಕ್ಕೆ ಬಲಿಯಾದ ವಿದ್ಯಾರ್ಥಿನಿ. ಚಿನ್ಮಯಿ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಿಖಿತಾ ತನ್ನ ಗೆಳತಿ ಸ್ಕೂಟಿಯಲ್ಲಿ ಹಾಸನ ನಗರಕ್ಕೆ ತೆರಳಿದ್ದರು. ಹಾಸನದ ಬಸ್ ನಿಲ್ದಾಣ ಕಡೆಯಿಂದ ಡೈರಿ ಕಡೆಗೆ ಸ್ಕೂಟರ್ ತಿರುಗಿಸಿದ್ದಾರೆ. ಈ ವೇಳೆ ವೇಗವಾಗಿ ಬಂದ ಲಾರಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ ಲಿಖಿತಾ ಮೃತಪಟ್ಟಿದ್ದಾರೆ.

ಲಾರಿ ಚಾಲಕ ಕುಡಿದ ಮತ್ತಿನಲ್ಲಿ ಲಾರಿ ಓಡಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳೀಯರು ಚಾಲಕನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ನಗರದ ಒಳಗೆ ಭಾರಿ ಪ್ರಮಾಣದ ಲಾರಿಯನ್ನು ಹೇಗೆ ಬಿಟ್ಟಿರಿ ಎಂದು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಲಾರಿ ಚಾಲಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೊಬೈಲ್ ಫೋನ್ ಬಿಟ್ಟು, ವಿದ್ಯಾಭ್ಯಾಸದ ಕಡೆ ಗಮನ ಕೊಡು ಎಂದು ಬುದ್ಧಿ ಹೇಳಿದ್ದೇ ತಪ್ಪಾಯ್ತು; ನೊಂದ ವಿದ್ಯಾರ್ಥಿ ಆತ್ಮಹತ್ಯೆ

ಹಾವೇರಿ: ಮಕ್ಕಳ ಕೈಯಲ್ಲಿ ಮೊಬೈಲ್ ಇದ್ದರೆ ಸಾಕು ಅವರಿಗೆ ಬೇರೇನೂ ಬೇಕಾಗುವುದಿಲ್ಲ. ಊಟ-ಆಟ ಮಾತ್ರವಲ್ಲ ಓದುವುದನ್ನೂ ಮರೆತು ಬಿಡುತ್ತಾರೆ. ಹೀಗೆ ಸದಾಅಕಾಲ ಮೊಬೈಲ್ ಫೋನ್ ಹಿಡಿದುಕೊಂಡು ಕೂರುತ್ತಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗೆ ಪೋಷ್ಕರು ಬೈದು ಬುದ್ಧಿ ಹೇಳಿದ್ದಾರೆ. ಇದನ್ನೇ ಮನಸ್ಸಿಗೆ ಹಚ್ಚಿಕೊಂಡ ಆತ ದುಡುಕಿನ ನಿರ್ಧಾರ ಮಾಡಿದ್ದಾನೆ.

ಮೊಬೈಲ್ ಫೋನ್ ನಲ್ಲಿ ಕಾಲ ಕಳೆಯುವುದನ್ನು ಬಿಟ್ಟು ಸಮಯ ವ್ಯರ್ಥ ಮಾಡದೇ ಓದಿನತ್ತ ಗಮನ ಕೊಡು. ಪರೀಕ್ಷೆಗಳು ಸಮೀಪುಸುತ್ತಿವೆ. ಚೆನ್ನಾಗಿ ಓದು ಎಂದು ಪೋಷಕರು ಮಗನಿಗೆ ಬುದ್ಧಿವಾದ ಹೇಳಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿ ಬೇರೆ ಯೋಚನೆ ಮಾಡದೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮಲ್ಲೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. 16 ವರ್ಷದ ಹರ್ಷ ಮೋರೆ ಮೃತ ಬಾಲಕ. ಎಸ್.ಎಸ್.ಎಲ್.ಸಿ ಓದುತ್ತಿದ್ದ. ಪರೀಕ್ಷೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪೋಷಕರು ಮಗನಿಗೆ ಮೊಬೈಲ್ ಬಿಟ್ಟು ವಿದ್ಯಾಭ್ಯಾಸದ ಕಡೆ ಗಮನ ಕೊಡು ಎಂದು ಬೈದಿದ್ದಾರೆ. ಇಷ್ಟಕ್ಕೆ ಮನನೊಂದ ಹರ್ಷ ಮನೆಯ ಕೋಣೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮಗ ಎಷ್ಟು ಹೊತ್ತಾದರೂ ರೂಮ್ ಬಾಗಿಲು ತೆಗೆಯದಿದ್ದಾಗ ಮಗನನ್ನೆ ಕರೆದಿದ್ದಾರೆ. ಆದರೆ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಇರಲಿಲ್ಲ. ಇದರಿಂದ ಆತಂಕಕ್ಕೊಳಗಾದ ಪೋಷರು ಬಾಗಿಲು ತೆರೆದು ಒಳ ನುಗ್ಗಿದಾಗ ಮಗ ಆತ್ಮಹತ್ಯೆಗೆ ಶರಣಾಗಿರುವುದು ಗೊತ್ತಾಗಿದೆ. ಮಗನನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular