HomeKarnatakaPSI ಸೋಗಿನಲ್ಲಿ 25ಕ್ಕೂ ಹೆಚ್ಚು ಮಂದಿಗೆ ಕೋಟ್ಯಂತರ ರೂ. ವಂಚನೆ ; ಚಿಕ್ಕಮಗಳೂರಲ್ಲಿ ಖತರ್ನಾಕ್ ಯುವತಿ...

PSI ಸೋಗಿನಲ್ಲಿ 25ಕ್ಕೂ ಹೆಚ್ಚು ಮಂದಿಗೆ ಕೋಟ್ಯಂತರ ರೂ. ವಂಚನೆ ; ಚಿಕ್ಕಮಗಳೂರಲ್ಲಿ ಖತರ್ನಾಕ್ ಯುವತಿ ಅರೆಸ್ಟ್

ಬೆಂಗಳೂರು: ಪೊಲೀಸ್ ಇಲಾಖೆಯ ಪಿಎಸ್‌ಐ ಎಂದು ಪರಿಚಯಿಸಿಕೊಂಡು ಜನರನ್ನು ನಂಬಿಸಿ ಹಣ, ಚಿನ್ನ ಹಾಗೂ ಐಷಾರಾಮಿ ಕಾರುಗಳನ್ನು ಪಡೆದು ವಂಚಿಸಿದ ಆರೋಪದ ಮೇಲೆ ಯುವತಿಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತಳನ್ನು ನಿವೇದಿತಾ ಗೌಡ ಎಂದು ಗುರುತಿಸಲಾಗಿದೆ.

ತಾನು ಪೊಲೀಸ್ ಇಲಾಖೆಯ PSI ಎಂದು ನಂಬಿಸಿ 25ಕ್ಕೂ ಹೆಚ್ಚು ಮಂದಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪದ ಮೇಲೆ ಯುವತಿನ್ನು ಪೊಲೀಸರು ಬಂಧಿಸಿದ್ದಾರೆ. PSIಯಂತೆ ಡ್ರೆಸ್‌ ಮಾಡಿಕೊಂಡು, ಪೊಲೀಸ್ ಅಧಿಕಾರಿಯ ಪರಿಚಯ ಹಾಗೂ ಪ್ರಭಾವವನ್ನು ಬಳಸಿಕೊಂಡು ಹಣ, ಚಿನ್ನ ಹಾಗೂ ದುಬಾರಿ ವಸ್ತುಗಳನ್ನು ಪಡೆದುಕೊಂಡಿದ್ದಾಳೆ ಎನ್ನಲಾಗಿದೆ. ಚಿಕ್ಕಮಗಳೂರಿನಲ್ಲಿ ಕೆಫೆ ನಡೆಸುತ್ತಿದ್ದ ಯುವತಿ, ರಾಜಗೋಪಾಲನಗರ ಠಾಣೆಯ PSI ಎಂದು ಪರಿಚಯಿಸಿಕೊಂಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ನಿವೇದಿತಾ ಗೌಡ ತಾನು ಪೊಲೀಸ್ ಇಲಾಖೆಯಲ್ಲಿ ಪಿಎಸ್‌ಐ ಎಂದು ಹೇಳಿಕೊಂಡು ಹಲವರನ್ನು ಪರಿಚಯಿಸಿಕೊಂಡಿದ್ದಳು. ಪೊಲೀಸ್ ಅಧಿಕಾರಿಯಂತೆ ಕಾಣುವ ರೀತಿಯಲ್ಲಿ ಉಡುಪು ಧರಿಸುವುದು ಹಾಗೂ ಹೇರ್‌ಕಟ್ ಮಾಡಿಸಿಕೊಳ್ಳುವ ಮೂಲಕ ಜನರಲ್ಲಿ ಅನುಮಾನ ಮೂಡದಂತೆ ನಡೆದುಕೊಳ್ಳುತ್ತಿದ್ದಳು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜಗೋಪಾಲನಗರ ಠಾಣೆಯ PSI ಎಂದು ಪರಿಚಯ

ತಾನು ರಾಜಗೋಪಾಲನಗರ ಪೊಲೀಸ್ ಠಾಣೆಯ ಪಿಎಸ್‌ಐ ಎಂದು ಹೇಳಿಕೊಂಡು ಹಲವರ ವಿಶ್ವಾಸ ಗಳಿಸುತ್ತಿದ್ದಳು ಎಂದು ಆರೋಪಿಸಲಾಗಿದೆ. ಬಳಿಕ ಇದೇ ಪರಿಚಯವನ್ನು ಬಳಸಿಕೊಂಡು ವಿವಿಧ ಕಾರಣಗಳನ್ನು ನೀಡಿ ಹಣ, ಚಿನ್ನ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಪಡೆದುಕೊಳ್ಳುತ್ತಿದ್ದಳು ಎನ್ನಲಾಗಿದೆ.

ಇದುವರೆಗೆ 25ಕ್ಕೂ ಹೆಚ್ಚು ಮಂದಿಗೆ ವಂಚನೆ ಮಾಡಿರುವ ಆರೋಪ ನಿವೇದಿತಾ ಗೌಡ ವಿರುದ್ಧ ಕೇಳಿಬಂದಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಹಣ ಹಾಗೂ ವಸ್ತುಗಳನ್ನು ಪಡೆದುಕೊಂಡಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಚಿಕ್ಕಮಗಳೂರಿನಲ್ಲಿ ಕೆಫೆ ನಡೆಸುತ್ತಿದ್ದಳಂತೆ

ನಿವೇದಿತಾ ಗೌಡ ಚಿಕ್ಕಮಗಳೂರಿನಲ್ಲಿ ಕೆಫೆಯೊಂದನ್ನು ನಡೆಸುತ್ತಿದ್ದಳು ಎಂಬ ಮಾಹಿತಿಯೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆಕೆಯ ಹಿನ್ನೆಲೆ ಹಾಗೂ ಬೆಂಗಳೂರಿನಲ್ಲಿ ನಡೆಸಿದ್ದ ಚಟುವಟಿಕೆಗಳ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ವಂಚನೆಯ ಹಣ ಪ್ರಿಯಕರನಿಗೆ ನೀಡುತ್ತಿದ್ದಳೇ?

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ವಂಚನೆಯ ಮೂಲಕ ಪಡೆದ ಹಣವನ್ನು ತನ್ನ ಪ್ರಿಯಕರ ದೇವುಗೆ ನೀಡುತ್ತಿದ್ದಳು ಎನ್ನಲಾಗಿದೆ. ಈ ವಂಚನೆ ಪ್ರಕರಣದಲ್ಲಿ ದೇವು ಕೂಡ ಭಾಗಿಯಾಗಿದ್ದಾನೆಯೇ ಎಂಬ ಅನುಮಾನ ಪೊಲೀಸರಿಗೆ ಇದ್ದು, ಆತನ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಇನ್ನೆಷ್ಟು ಮಂದಿಗೆ ವಂಚನೆ?

ನಿವೇದಿತಾ ಗೌಡಳನ್ನು ಬಂಧಿಸಿರುವ ಪೊಲೀಸರು ಇದೀಗ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಆಕೆ ನಿಜವಾಗಿಯೂ ಎಷ್ಟು ಮಂದಿಗೆ ವಂಚಿಸಿದ್ದಾಳೆ, ಎಷ್ಟು ಹಣ, ಚಿನ್ನ ಹಾಗೂ ಇತರ ಬೆಲೆಬಾಳುವ ವಸ್ತುಗಳನ್ನು ಪಡೆದುಕೊಂಡಿದ್ದಾಳೆ ಮತ್ತು ಈ ಪ್ರಕರಣದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ತನಿಖೆ ಮುಂದುವರಿದಿದ್ದು, ಪ್ರಕರಣದ ಕುರಿತು ಮತ್ತಷ್ಟು ಮಾಹಿತಿ ಹೊರಬರುವ ಸಾಧ್ಯತೆಯಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಯುವತಿಯನ್ನು ವಿಚಾರಣೆ ನಡೆಸುತ್ತಿರುವ ಪೊಲೀಸರು, ವಂಚನೆಗೊಳಗಾದವರ ಸಂಖ್ಯೆ, ವಂಚಿಸಲಾದ ಒಟ್ಟು ಹಣ ಹಾಗೂ ಚಿನ್ನಾಭರಣದ ಪ್ರಮಾಣದ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಈ ವಂಚನೆಗೆ ಇನ್ನಷ್ಟು ಮಂದಿ ಸಹಕರಿಸಿದ್ದಾರೆಯೇ ಎಂಬ ಬಗ್ಗೆಯೂ ತನಿಖೆ ಮುಂದುವರಿದಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular