HomeKarnatakaBREAKING: ಮಂಗಳೂರು MRPL ಘಟಕದಲ್ಲಿ ಸ್ಫೋಟ: ಓರ್ವ ಕಾರ್ಮಿಕ ಸಾವು; ಇನ್ನೋರ್ವನ ಸ್ಥಿತಿ ಗಂಭೀರ

BREAKING: ಮಂಗಳೂರು MRPL ಘಟಕದಲ್ಲಿ ಸ್ಫೋಟ: ಓರ್ವ ಕಾರ್ಮಿಕ ಸಾವು; ಇನ್ನೋರ್ವನ ಸ್ಥಿತಿ ಗಂಭೀರ

ಮಂಗಳೂರು: ಮಂಗಳೂರಿನ ಜೋಕಟ್ಟೆ ಬಳಿಯ ರಿಫೈನರಿ ಆ್ಯಂಡ್​ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ (ಎಂಆರ್‌ಪಿಎಲ್)ನ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಟೆಸ್ಟಿಂಗ್​​ ಮಾಡುವ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, 9 ಕಾರ್ಮಿಕರಿಗೆ ಗಾಯಗಳಾಗಿವೆ.

30 ವರ್ಷದ ಮನೀಶ್ ಕರ್ಕರ ಎಂಬಾತ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 9 ಕಾರ್ಮಿಕರು ಗಾಯಗೊಂಡಿದ್ದು, ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುರತ್ಕಲ್ ನಿವಾಸಿ ರಾಜೇಶ್​​​ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರು ಶೇಕಡಾ 35ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ. ಶ್ರೀನಿವಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಉಳಿದ ಗಾಯಾಳುಗಳಾದ ಪ್ರಸಾದ್​, ಇಂದ್ರಜೀತ್​, ರಾಮನ್​ಗೆ ಎಜಿ ಆಸ್ಪತ್ರೆಗೆ ಮತ್ತು ಗಾಯಾಳುಗಳಾದ ಜೆರೋಮ್​, ಜಯರಾಮ್​, ಅವಿನಾಶ್ ಹಾಗೂ ಅಕ್ಷಯ್​ ಎಂಬುವರಿಗೆ MRPL ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಮಧ್ಯಾಹ್ನ 12.15 ಗಂಟೆಗೆ ಎಂಆರ್‌ಪಿಎಲ್​​ನ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಟೆಸ್ಟಿಂಗ್​​ ಮಾಡುವ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. 11.30 ಗಂಟೆಗೆ ಶಿಫ್ಟ್ ಬದಲಾವಣೆ ಹಿನ್ನೆಲೆ ಘಟಕದಿಂದ ಕಾರ್ಮಿಕರು ಹೊರ ಹೋಗಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ. ಆದರೆ 9 ಕಾರ್ಮಿಕರು ಗಾಯಗೊಂಡಿದ್ದಾರೆ.

ಐದು ಅಗ್ನಿಶಾಮಕ ದಳ ವಾಹನ, ಎಸ್​​​ಡಿಆರ್​ಎಫ್​ ಮತ್ತು ಆಂಬ್ಯುಲೆನ್ಸ್​​​ಗಳು ಬಂದಿದ್ದು, ಪೊಲೀಸ್ ಕಮಿಷನರ್ ಸುದೀರ್ ಕುಮಾರ್ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಓ ನರ್ವಡೆ ವಿನಾಯಕ್ ಕಾರ್ಬಾರಿ ಕೂಡ ಭೇಟಿ ನೀಡಿದ್ದಾರೆ. ಪ್ರಸ್ತುತ ಬೆಂಕಿಯನ್ನು ನಿಯಂತ್ರಿಸಲಾಗಿದೆ.

ಭೀಕರ ಸ್ಫೋಟದಿಂದ ಪಣಂಬೂರು, ಕಾವೂರು, ಸುರತ್ಕಲ್, ಜೋಕಟ್ಟೆ ಭಾಗದ ಸುತ್ತಮುತ್ತಲಿನ ಕೆಲವೆಡೆ ಮನೆಗಳು ಕಂಪಿಸಿದೆ. ಶಾಲೆ, ಚರ್ಚ್ ಹಾಗೂ ಹಲವು ಮನೆಗಳಿಗೆ ಹಾನಿಯಾಗಿವೆ. ಭಾರೀ ಸ್ಟೋಟದಿಂದಾಗಿ ಜನರು ಬೆಚ್ಚಿ ಬಿದ್ದಿದ್ದಾರೆ.

ರೀಫಿಲ್ಲಿಂಗ್ ವೇಳೆ ನಾಲ್ಕು ಸಿಲಿಂಡರ್ ಗಳು ಸ್ಫೋಟ: ಹೊತ್ತಿಕೊಂಡ ಬೆಂಕಿ: ಪಕ್ಕದಲ್ಲಿದ್ದ ಶಾಲೆ, ಮನೆಗಳಿಗೆ ಹಾನಿ

ಬೆಂಗಳೂರು: ಮಂಗಳೂರಿನ ಎಂಆರ್ ಪಿಎಲ್ ಘಟಾಕದಲ್ಲಿ ಸ್ಫೋಟ ಘಟನೆ ಬೆನ್ನಲ್ಲೇ ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಸ್ಫೋಟ ಸಂಭವಿಸಿದೆ. ಸಿಲಿಂದರ್ ರೀಫಿಲ್ಲಿಂಗ್ ವೇಳೆ ನಾಲ್ಕು ಸಿಲಿಂಡರ್ ಗಳು ಬ್ಲಾಸ್ಟ್ ಆಗಿದ್ದು, ಭಾರಿ ಬೆಂಕಿ ಅವಘಟ ಸಂಭವಿಸಿದೆ.

ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಕ್ರಮವಾಗಿ ಗ್ಯಾಸ್ ಸಿಲಿಂಡರ್‌ಗಳನ್ನು ರೀಫಿಲ್ಲಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ನಾಲ್ಕು ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡಿವೆ.

ಸ್ಫೋಟದ ತೀವ್ರತೆಗೆ ಒಂದು ಸಿಲಿಂಡರ್ ಹಾರಿ ಸಮೀಪದ ಶಾಲೆಯ ಕಿಟಕಿಗೆ ಅಪ್ಪಳಿಸಿದೆ. ಈ ಘಟನೆ ಅಟಲ್ ಬಿಹಾರಿ ವಾಜಪೇಯಿ ಪಾರ್ಕ್ ಬಳಿ, ಕಗ್ಗದಾಸಪುರದಲ್ಲಿ ಸಂಭವಿಸಿದೆ. ಸ್ಫೋಟದಿಂದಾಗಿ ಶಾಲೆ, ಚರ್ಚ್, ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ.

ಸ್ಫೋಟದಿಂದಾಗಿ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ಘಟನೆಯ ಬಗ್ಗೆ ಮಾಹಿತಿ ಲಭಿಸುತ್ತಿದ್ದಂತೆ, ಅಗ್ನಿಶಾಮಕ ದಳದವರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಅದೃಷ್ಟವಶಾತ್, ಈ ದುರ್ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಅಥವಾ ಗಂಭೀರ ಗಾಯಗಳಾಗಿಲ್ಲ. ಸ್ಥಳದಲ್ಲಿ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ನಡೆಯುತ್ತಿತ್ತು ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular