ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಮಾರಾಮಾರಿ, ಹೊಡೆದಾಟ ನಡೆದಿದ್ದು, ಓರ್ವ ವಿದ್ಯಾರ್ಥಿ ಕೊಲೆಯಾಗಿರುವ ಘಟನೆ ನಡೆದಿದೆ.
ನಾಗರಬಾವಿ ಮಹೇಶ್ ಪಿಯು ಕಾಲೇಜು ಬಳಿ ಈ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿಗಳ ನಡುವೆ ಆರಂಭವಾದ ಗಲಾಟೆ ವಿಕೋಪಕ್ಕೆ ತುರುಗಿದ್ದು, ಓರ್ವ ವಿದ್ಯಾರ್ಥಿಯ ಕೊಲೆಯಲ್ಲಿ ಅಂತ್ಯವಾಗಿದೆ.
ಮಹೇಶ್ ಪಿಯು ಕಾಲೇಜು ಬಳಿ ಎರಡು ಗುಂಪಿನ ಮಧ್ಯೆ ಗಲಾಟೆ, ಹೊಡೆದಾಟ ನಡೆದಿದೆ. ಈ ಗಲಾಟೆಯಲ್ಲಿ ಓರ್ವ ಬಿಕಾಂ ವಿದ್ಯಾರ್ಥಿಯ ಕೊಲೆಯಾಗಿದೆ. ಯೋಗೇಶ್ ಕೊಲೆಯಾದ ಬಿಕಾಂ ವಿದ್ಯಾರ್ಥಿ.
ಇಂದು ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಕಾಲೇಜು ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆಯಲ್ಲಿ ಯೋಗೇಶ್ ಗೆ ಗಾಯವಾಗಿದ್ದು, ಕೂಡಲೇ ಆತನನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಯೋಗೇಶ್ ಕೊನೆಯುಸಿರೆಳೆದಿದ್ದಾನೆ.
ಅನ್ನಪೂರ್ಣೇಶ್ವರಿ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
ಶಿವಸೇನೆ ನಾಯಕ ಪ್ರದೀಪ್ ಪುರ್ಣೇಕರ್ ಗುಂಡಿಕ್ಕಿ ಹತ್ಯೆ
ಥಾಣೆ: ಶಿವಸೇನೆಯ ನಾಯಕ ಪ್ರದೀಪ್ ಪುರ್ಣೇಕರ್ ಅವರ ಕಚೇರಿಗೆ ನುಗ್ಗಿದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಥಾಣೆಯಲ್ಲಿ ಈ ದುರ್ಘಟನೆ ನಡೆದಿದೆ. ದುಷ್ಕರ್ಮಿಗಳಿಬ್ಬರು ಪ್ರದೀಪ್ ಪುರ್ಣೇಕರ್ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಯಗೊಂಡಿದ್ದ ಪ್ರದೀಪ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಮಾನಪಾಡ ಉಪವಿಭಾಗದ ಮುಖ್ಯಸ್ಥಾಗಿ ಪ್ರದೀಪ್ ಪುರ್ಣೇಕರ್ ಕಾರ್ಯನಿರ್ವಹಿಸುತ್ತಿದ್ದರು. ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರದೀಪ್ ತಮ್ಮ ಮಾನಪಾಡ ಕಚೇರಿಯಲ್ಲಿರುವಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಕಚೇರಿಗೆ ನುಗ್ಗಿ, ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಎರಡಕ್ಕಿಂತ ಹೆಚ್ಚು ಸುತ್ತು ಗುಂಡು ಹಾರಿಸಿದ್ದಾರೆ. ಗುಂಡೇಟಿಗೆ ಪ್ರದೀಪ್ ಬಲಿಯಾಗಿದ್ದಾರೆ.
ಕಪುರ್ಬಾವಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ದುಷ್ಕರ್ಮಿಗಳ ಪತ್ತೆಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಥಾಣೆಯ ಪ್ರಮುಖ ನಿರ್ಗಮನ ಮಾರ್ಗಗಳಲ್ಲಿ ಚೆಕ್ಪೋಸ್ಟ್ ಸ್ಥಾಪಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.
ಯಾವ ಕಾರಣಕ್ಕೆ ಪ್ರದೀಪ್ ಪುರ್ಣೇಕರ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂಬುದು ತಿಳಿದುಬಂದಿಲ್ಲ. ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

