ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್ ಪ್ರಯಾಣ ದರ ಶೀಘ್ರವೇ ಹೆಚ್ಚಳ ಮಾಡಲಾಗುವುದು.
ಸಾರಿಗೆ ಸಚಿವ ಭೈರತಿ ಸುರೇಶ್ ಈ ಬಗ್ಗೆ ಮಾಹಿತಿ ನೀಡಿದ್ದು, ಬಸ್ ಪ್ರಯಾಣದ ಹೆಚ್ಚಳ ಸಂಬಂಧ ನೇಮಿಸಿರುವ ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಇನ್ನೆರಡು ದಿನಗಳಲ್ಲಿ ವರದಿ ನೀಡಲಿದ್ದು, ಅದನ್ನು ಆಧರಿಸಿ ಶೀಘ್ರವೇ ಪ್ರಯಾಣದ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟದಲ್ಲಿದ್ದು, ಪ್ರಯಾಣ ದರ ಹೆಚ್ಚಳ ಅನಿವಾರ್ಯವಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಒಂದು ವರ್ಷದಲ್ಲಿ ನಾಲ್ಕು ಬಾರಿ ಡೀಸೆಲ್ ಬೆಲೆ ಹೆಚ್ಚಳ ಮಾಡಿದ್ದು, ಪ್ರತಿ ಲೀಟರ್ ಡೀಸೆಲ್ ದರ 15 ರಿಂದ 16 ರೂಪಾಯಿ ಹೆಚ್ಚಳವಾಗಿದೆ. ಇದರಿಂದ ನಿಗಮಗಳಿಗೆ ವಾರ್ಷಿಕ 8,000 ಕೋಟಿ ರೂ. ನಷ್ಟವಾಗುತ್ತಿದೆ ಎಂದು ತಿಳಿಸಿದ್ದಾರೆ.
ಅತುಲ್ ತಿವಾರಿ ನೇತೃತ್ವದ ಸಮಿತಿ ನಿಗಮಗಳ ಆರ್ಥಿಕ ಪರಿಸ್ಥಿತಿ ಅಧ್ಯಯನ ನಡೆಸಿದ್ದು, ಇನ್ನೆರಡು ದಿನಗಳಲ್ಲಿ ವರದಿ ಸಲ್ಲಿಸಲಿದೆ. ಈ ವರದಿಯನ್ನು ಸಚಿವ ಸಂಪುಟದ ಮುಂದೆ ಮಂಡಿಸಲಾಗುವುದು. ಮುಖ್ಯಮಂತ್ರಿಗಳು ಸೇರಿ ಸಂಪುಟ ಅನುಮೋದಿಸಿದರೆ ಶೀಘ್ರವೇ ಪ್ರಯಾಣ ದರ ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ.
ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಮತ್ತಷ್ಟು ಪರಿಣಾಮಕಾರಿ ಬಸ್ ಸೇವೆ ನೀಡಲು ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸಲಾಗುವುದು. ಅನ್ಯ ರಾಜ್ಯದ ಮಹಿಳೆಯರು ಕೂಡ ಉಚಿತ ಪ್ರಯಾಣದ ಲಾಭ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿಗಳಿದ್ದು, ಇದನ್ನು ತಡೆಯಲು ಸ್ಮಾರ್ಟ್ ಕಾರ್ಡ್ ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಕರ್ನಾಟಕದಲ್ಲಿ ಸಾರಿಗೆ ಬಸ್ಗಳ ಪ್ರಯಾಣ ದರ ಹೆಚ್ಚಳ ಮಾಡುವ ಸಾಧ್ಯತೆ ಮತ್ತೆ ಮುನ್ನೆಲೆಗೆ ಬಂದಿದೆ.
ಸಾರಿಗೆ ಸಚಿವ ಬೈರತಿ ಸುರೇಶ್ ಅವರು ದರ ಪರಿಷ್ಕರಣೆ ಕುರಿತು ಮಹತ್ವದ ಮಾಹಿತಿ ನೀಡಿದ್ದು, ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಸಮಿತಿ ಬಸ್ ದರ ಪರಿಷ್ಕರಣೆ ಹಾಗೂ ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿಗತಿ ಕುರಿತು ಅಧ್ಯಯನ ನಡೆಸಿದೆ. ಸಮಿತಿಯ ವರದಿ ಅಕ್ಟೋಬರ್ 1 ಅಥವಾ 2ರಂದು ಸರ್ಕಾರಕ್ಕೆ ಸಲ್ಲಿಕೆಯಾಗುವ ನಿರೀಕ್ಷೆಯಿದೆ.
ವರದಿ ಬಂದ ಬಳಿಕ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯೊಂದಿಗೆ ಚರ್ಚಿಸಿ, ನಂತರ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಸುಮಾರು ₹8,000 ಕೋಟಿ ಆರ್ಥಿಕ ಸಂಕಷ್ಟದಲ್ಲಿವೆ. ಡೀಸೆಲ್ ದರದಲ್ಲಿ ನಾಲ್ಕು ಬಾರಿ ಏರಿಕೆಯಾಗಿರುವುದರಿಂದ ಸಾರಿಗೆ ಸಂಸ್ಥೆಗಳ ವೆಚ್ಚ ಹೆಚ್ಚಾಗಿದೆ. ಎಷ್ಟು ರೂಪಾಯಿ ದರ ಹೆಚ್ಚಳವಾಗಲಿದೆ ಎಂಬುದು ಇನ್ನೂ ಅಂತಿಮವಾಗಿಲ್ಲ. ಸಮಿತಿಯ ವರದಿ ಮತ್ತು ಸಂಪುಟದ ನಿರ್ಧಾರದ ಬಳಿಕ ಸ್ಪಷ್ಟವಾಗಲಿದೆ.
ಒಟ್ಟಿನಲ್ಲಿ ಬಸ್ ಪ್ರಯಾಣ ದರ ಏರಿಕೆ ಬಹುತೇಕ ಖಚಿತವಾಗಿದೆ. ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ಸಮಿತಿ ವರದಿ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

