ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ನಗರ ಜಿಲ್ಲೆ ವತಿಯಿಂದ 2026-27ನೇ ಸಾಲಿಗೆ ನಿಗಮದ ಯೋಜನೆಗಳಾದ ಉದ್ಯೋಗಿನಿ, ಚೇತನ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಹಾಗೂ ಧನಶ್ರೀ ಯೋಜನೆಗಳಡಿ ಆರ್ಥಿಕ ಸೌಲಭ್ಯ ಪಡೆದು ಸ್ವಂತ ಉದ್ಯೋಗ ಪ್ರಾರಂಭಿಸಲು ಬಡತನಕ್ಕೆ ಸೇರಿದ ನಿರುದ್ಯೋಗಿ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಮಹಿಳಾ ಅಭ್ಯರ್ಥಿಗಳು https://sevasindhu.karnataka.gov.in ಸೇವಾಸಿಂಧು ಪೋರ್ಟಲ್ ಮೂಲಕ ಅಥವಾ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31, 2026 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7619291200 ಅಥವಾ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಬೆಂಗಳೂರು ನಗರ ಜಿಲ್ಲೆ ಹಾಗೂ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೋಷಣ್ ಅಭಿಯಾನ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಗೌರವಧನ ಆಧಾರದ ಮೇಲೆ ಜಿಲ್ಲಾ ಕಾರ್ಯಕ್ರಮ ಸಂಯೋಜಕರು ಹಾಗೂ ಜಿಲ್ಲಾ ಕಾರ್ಯಕ್ರಮ ಸಹಾಯಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸದರಿ ನೇಮಕಾತಿಯು 12 ತಿಂಗಳ ಅವಧಿಯಾಗಿದ್ದು, ಕೆಲಸ ನಿರ್ವಹಣೆಯ ಆಧಾರದ ಮೇರೆಗೆ ಹುದ್ದೆಯನ್ನು ಜಿಲ್ಲಾ ಸಮಿತಿ ಅನುಮೋದನೆ ಮೇರೆಗೆ ಮುಂದಿನ ಅವಧಿಗೆ ಮುಂದುವರಿಸಲಾಗುವುದು ಮೇರೆಗೆ ಭರ್ತಿ ಮಾಡಿಕೊಳ್ಳಲಾಗುವ ಜಿಲ್ಲಾ ಕಾರ್ಯಕ್ರಮ ಸಂಯೋಜಕರ ಹುದ್ದೆಗೆ 30,000 ಹಾಗೂ ಜಿಲ್ಲಾ ಕಾರ್ಯಕ್ರಮ ಸಾಹಿತ್ಯ ಹುದ್ದೆಗೆ 18 ಸಾವಿರ ಮಾಸಿಕ ವೇತನ ವಾಗಿ ನೀಡಲಾಗುವುದು.
ಅಭ್ಯರ್ಥಿಗಳ ವಯೋಮಿತಿಯು ಕನಿಷ್ಟ 21 ವರ್ಷ ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು ಸದರಿ ಯೋಜನೆಯು ಕೇಂದ್ರ ಪರಿಸ್ಕೃತ ಯೋಜನೆಯಾಗಿರುವುದರಿಂದ ಕನ್ನಡ ಮತ್ತು ಇಂಗ್ಲಿಷ್ ಅಥವಾ ಭಾಷಾಜ್ಞಾನ ಅಗತ್ಯವಾಗಿರುತ್ತದೆ.ಸದರಿ ಹುದ್ದೆಗೆ ಯಾವುದೇ ಮೀಸಲಾತಿ ಅನ್ವಯಿಸುವುದಿಲ್ಲ ಅಭ್ಯರ್ಥಿಗಳ ಕಂಪ್ಯೂಟರ್ ಜ್ಞಾನದ ಬಗ್ಗೆ ಖಾತ್ರಿಪಡಿಸಿಕೊಂಡು ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ನಮೂನೆಯನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ.ಎಚ್. ಮರಿಗೌಡ ರಸ್ತೆ, ಇಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಆಕ್ಟೋಬರ್ 29 . 2026 ರೊಳಗೆ ಇದೇ ಕಚೇರಿಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ 080-29578688 ಅಥವಾ ಇ-ಮೇಲ್ [email protected] ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

