HomeKarnatakaಎಸ್ಐಆರ್ ವಿವಾದ: ಕಾಂಗ್ರೆಸ್‌ನವರಿಂದಲೇ 420 ಕೆಲಸ: ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸ: ವಿಜಯೇಂದ್ರ ...

ಎಸ್ಐಆರ್ ವಿವಾದ: ಕಾಂಗ್ರೆಸ್‌ನವರಿಂದಲೇ 420 ಕೆಲಸ: ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸ: ವಿಜಯೇಂದ್ರ ಆರೋಪ

ಬೆಂಗಳೂರು: ಎಸ್‌ಐಆರ್ (SIR) ಪ್ರಕ್ರಿಯೆಯಲ್ಲಿ ಅಕ್ರಮ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವುದು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳ ಕರ್ತವ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಪಾದಿಸಿದ್ದಾರೆ.

ಎಸ್‌ಐಆರ್ ಆರಂಭವಾದ ಸಮಯದಲ್ಲಿ ಕಾಂಗ್ರೆಸ್ ಪುಢಾರಿಗಳು ಸಭಾಂಗಣಗಳು (ಚೌಟ್ರಿ) ಹಾಗೂ ಮದರಸಾಗಳಲ್ಲಿ ಬಿಎಲ್‌ಒಗಳಿಂದ ಅರ್ಜಿಗಳನ್ನು ಪಡೆದು ಅಕ್ರಮವಾಗಿ ಹೆಸರುಗಳನ್ನು ಸೇರಿಸುವ ‘420’ ಕೆಲಸ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ನವರೇ ಇಂತಹ ಕೆಲಸ ಮಾಡಿ ಈಗ ಬಿಜೆಪಿಯವರ ವಿರುದ್ಧ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದರು. ಈಗ ಆ ತಪ್ಪನ್ನು ಬಿಜೆಪಿಯ ಮೇಲೆ ಹೊರಿಸಲಾಗುತ್ತಿದೆ ಎಂದು ಕಿಡಿಕಾರಿದರು.

50 ಲಕ್ಷ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ ಎಂಬ ಮುಖ್ಯಮಂತ್ರಿಗಳ ಆರೋಪವನ್ನು ಸಾಬೀತುಪಡಿಸುವಂತೆ ಸವಾಲೆಸೆದ ವಿಜಯೇಂದ್ರ, ದೆಹಲಿಯಲ್ಲಿ ರಾಹುಲ್ ಗಾಂಧಿ ನಡೆಸುತ್ತಿರುವ ಆರೋಪಗಳಿಗೆ ಶಕ್ತಿ ತುಂಬಲು ರಾಜ್ಯ ಕಾಂಗ್ರೆಸ್ ನಾಯಕರು ಇಲ್ಲಿ ನಾಟಕವಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಂಪುಟ ಸಭೆಯನ್ನೇ ಮುಂದೂಡಿ ಸಿಎಂ ಧರಣಿ ನಡೆಸಿದ್ದು ದುರಂತ: ನಕಲಿ ಗಾಂಧಿಗಳ ಓಲೈಸಲು, ಆಡಳಿತ ವೈಫಲ್ಯ ಮರೆಮಾಚಲು ಈ ಕಸರತ್ತು: ಪ್ರಲ್ಹಾದ್ ಜೋಶಿ ವಾಗ್ದಾಳಿ

ನವದೆಹಲಿ: ಕರ್ನಾಟಕದಲ್ಲಿ ಬರ ಪರಿಸ್ಥಿತಿ, ರೈತರ ಸಂಕಷ್ಟ ಹಾಗೂ ಜನರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಬೇಕಾದ ಮುಖ್ಯಮಂತ್ರಿ ರಾಜ್ಯ ಸಚಿವ ಸಂಪುಟ ಸಭೆಯನ್ನೇ ಮುಂದೂಡಿ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿರುವುದು ನಿಜಕ್ಕೂ ದುರಂತವೇ ಸರಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನಕಲಿ ಗಾಂಧಿಗಳನ್ನು ಓಲೈಸಲು ಇಲ್ಲದ SIR ಗುಮ್ಮವನ್ನು ಸೃಷ್ಟಿಸಿ ಜನರ ದಿಕ್ಕು ತಪ್ಪಿಸುವ ನಾಟಕವಾಡುತ್ತಿದ್ದಾರೆ. ತಮ್ಮ ಸರ್ಕಾರದ ಆಡಳಿತ ವೈಫಲ್ಯವನ್ನು ಮರೆ ಮಾಚಲು ಇನ್ನಿಲ್ಲದ ಕಸರತ್ತು ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ರಾಜ್ಯದ ಒಬ್ಬ ಮುಖ್ಯಮಂತ್ರಿಯಾಗಿ ಬರದಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಪರಿಹಾರ ಕಾರ್ಯಗಳ ಬಗ್ಗೆ ಚರ್ಚಿಸುವ ಬದಲು ರಾಜ್ಯ ಸಚಿವ ಸಂಪುಟ ಸಭೆಯನ್ನೇ ಮುಂದೂಡಿ ಬೆಂಗಳೂರಿನಲ್ಲಿ ಮುಖ್ಯ ಚುನಾವಣಾಧಿಕಾರಿ ಕಚೇರಿ ಎದುರು ಏಕಾಏಕಿ ಧರಣಿ ನಡೆಸುತ್ತಿರುವುದು ನಿಜಕ್ಕೂ ಖಂಡನೀಯ. ಇದು ರೈತರ ಮತ್ತು ಜನಸಾಮಾನ್ಯರ ಮೇಲೆ ಇವರಿಗೆ ಅದೆಷ್ಟು ಕಾಳಜಿಯಿದೆ ಎಂಬುದನ್ನು ಪ್ರತಿಬಿಂಬಿಸುತ್ತಿದೆ ಎಂದಿದ್ದಾರೆ,

ರಾಜ್ಯದ ದೊರೆಯಾಗಿ ರೈತರ ಸಂಕಷ್ಟ, ಬರಗಾಲದ ಪರಿಸ್ಥಿತಿ ಹಾಗೂ ಜನರ ಮೂಲಭೂತ ಅಗತ್ಯಗಳಿಗೆ ಆದ್ಯತೆ ನೀಡುವುದನ್ನು ಬಿಟ್ಟು ಆಡಳಿತವನ್ನು ಸಂಪೂರ್ಣ ನಿರ್ಲಕ್ಷಿಸಿ, ನಕಲಿ ಗಾಂಧಿಗಳನ್ನು ಓಲೈಸಲು ಮತ್ತು ಸಂದೇಹಾಸ್ಪದ ಮತದಾರರನ್ನು ರಕ್ಷಿಸಲು ಈ ರೀತಿ ಧರಣಿ ನಡೆಸುತ್ತಿರುವುದು ವಿಷಾದನೀಯ.

ಚುನಾವಣಾ ಪ್ರಕ್ರಿಯೆ, ಎಸ್ಐಆರ್ ಪ್ರಕ್ರಿಯೆ, ಫಾರ್ಮ್ 7, ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಚುನಾವಣಾ ಅಧಿಕಾರಿಗಳಿಗೆ ಹಾಗೂ ಬಿಎಲ್ಎ, ಬಿಎಲ್ಓಗಳಿಗೂ ಸ್ಪಷ್ಟ ಅರಿವಿರುತ್ತದೆ ಮತ್ತು ಚುನಾವಣಾ ಆಯೋಗವೂ ಈ ಬಗ್ಗೆ ನಿರಂತರವಾಗಿ ಗಮನಹರಿಸುತ್ತಿರುತ್ತದೆ. ​ಹೀಗಿದ್ದರೂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆಗಿ ಧರಣಿಯ ಹಾದಿ ತುಳಿದಿರುವುದು ಅಕ್ಷಮ್ಯ ಎಂದು ಹೇಳಿದ್ದಾರೆ.

ಪೊಲೀಸರು ಈಗೇಕೆ ಎಫ್‌ಐಆರ್‌ ಹಾಕಿಲ್ಲ? ​ಬೆಂಗಳೂರಿನಲ್ಲಿ ಪ್ರತಿಭಟನೆಗೆ ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆಡೆ ಅವಕಾಶವಿಲ್ಲ ಎನ್ನುವ ಪೊಲೀಸರು, ಬೇರೆಯವರು ಎಲ್ಲಾದರೂ ಧರಣಿ ನಡೆಸಿದರೆ ತತ್‌ಕ್ಷಣವೇ ಕ್ರಮ ಕೈಗೊಳ್ಳುತ್ತಾರೆ. ಈಗ ಕಾನೂನು ಉಲ್ಲಂಘಿಸಿ ಧರಣಿ ಕುಳಿತವರ ಮೇಲೆ ಎಫ್‌ಐಆರ್ ದಾಖಲಿಸದೆ ಸುಮ್ಮನಿರುವುದೇಕೆ? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular