HomeKarnatakaರಾಜ್ಯದ ಜನತೆ ಗಮನಕ್ಕೆ ; ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ಅ.15ರವರೆಗೆ...

ರಾಜ್ಯದ ಜನತೆ ಗಮನಕ್ಕೆ ; ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ಅ.15ರವರೆಗೆ ವಿಸ್ತರಣೆ

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ವಿವಿಧ ನಿಗಮಗಳಿಂದ 2026-27ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಸಾಲ ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಅಕ್ಟೋಬರ್ 15ರವರೆಗೆ ವಿಸ್ತರಿಸಲಾಗಿದೆ.

 *ಯಾವೆಲ್ಲಾ ನಿಗಮಗಳ ಯೋಜನೆಗಳು ಅನ್ವಯ?

 ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಈ ಹಿಂದೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿತ್ತು. ಇದೀಗ ದಿನಾಂಕ ವಿಸ್ತರಣೆಯಾಗಿದ್ದು, ಆಸಕ್ತ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅಥವಾ ಸಮೀಪದ ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು.

 ಹೆಚ್ಚಿನ ಮಾಹಿತಿಗಾಗಿ ನೂತನ ಜಿಲ್ಲಾಡಳಿತ ಭವನದಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿ ಅಥವಾ ದೂರವಾಣಿ ಸಂಖ್ಯೆ 08392-267038 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ. ಹೊನ್ನೂರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಬೆಳೆ ಸಮೀಕ್ಷೆ ವಿವರ ಪರಿಶೀಲನೆಗೆ ಅಕ್ಟೋಬರ್ 5 ಕೊನೆಯ ದಿನ: ಆಕ್ಷೇಪಣೆ ಸಲ್ಲಿಸಲು ಅವಕಾಶ

 ಬಳ್ಳಾರಿ :  ಪ್ರಸ್ತಕ ಸಾಲಿನ ಮುಂಗಾರು ಬೆಳೆ ಸಮೀಕ್ಷೆ ಕಾರ್ಯವು ಅಕ್ಟೋಬರ್ 5 ರಂದು ಮುಕ್ತಾಯಗೊಳ್ಳಲಿದ್ದು, ರೈತರು ತಮ್ಮ ಜಮೀನಿನ ಬೆಳೆ ವಿವರಗಳನ್ನು ಪರಿಶೀಲಿಸಿ, ವ್ಯತ್ಯಾಸಗಳಿದ್ದಲ್ಲಿ ತಕ್ಷಣವೇ ಆಕ್ಷೇಪಣೆ ಸಲ್ಲಿಸುವಂತೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

 ಆಗಸ್ಟ್ 15 ರಿಂದ ಆರಂಭವಾಗಿರುವ ಬೆಳೆ ಸಮೀಕ್ಷೆಯ ವಿವರಗಳು ಸರಿಯಾಗಿ ದಾಖಲಾಗಿವೆಯೇ ಎಂಬುದನ್ನು ರೈತರು ಕಡ್ಡಾಯವಾಗಿ ಪರಿಶೀಲಿಸಿಕೊಳ್ಳಬೇಕು. ರೈತರು ತಮ್ಮ ಮೊಬೈಲ್‌ನಲ್ಲಿ ‘ಬೆಳೆ ದರ್ಶಕ’ ಆಪ್ ಡೌನ್‌ಲೋಡ್ ಮಾಡಿಕೊಂಡು, ಬೆಳೆ ಸಮೀಕ್ಷೆಯ ವಿವರಗಳನ್ನು ವೀಕ್ಷಿಸಬಹುದಾಗಿದೆ.

 *ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

 ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರುವ ಬೆಳೆ, ವಿಸ್ತೀರ್ಣ ಅಥವಾ ಇತರ ಯಾವುದೇ ವಿವರಗಳಲ್ಲಿ ವ್ಯತ್ಯಾಸ ಅಥವಾ ತಪ್ಪುಗಳು ಕಂಡುಬಂದಲ್ಲಿ, ರೈತರು ಇದೇ ‘ಬೆಳೆ ದರ್ಶಕ’ ಆಪ್ ಮೂಲಕವೇ ನೇರವಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

 ಸರ್ಕಾರಿ ಸೌಲಭ್ಯಗಳಿಗೆ ಬೆಳೆ ಸಮೀಕ್ಷೆ ಆಧಾರ:

ಬೆಳೆ ಸಮೀಕ್ಷೆಯಲ್ಲಿ ನಿಖರವಾಗಿ ದಾಖಲಾದ ಬೆಳೆ ವಿವರಗಳೇ ಮುಂದಿನ ದಿನಗಳಲ್ಲಿ ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ ಹಾಗೂ ಸರ್ಕಾರದ ವಿವಿಧ ಕೃಷಿ/ತೋಟಗಾರಿಕೆ ಯೋಜನೆಗಳ ಸೌಲಭ್ಯ ಪಡೆಯಲು ಪ್ರಮುಖ ಆಧಾರವಾಗಿರುತ್ತವೆ. ಹಾಗಾಗಿ ರೈತರು ಅಕ್ಟೋಬರ್ 5 ರೊಳಗಾಗಿ ತಮ್ಮ ಬೆಳೆ ವಿವರಗಳನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಬಳ್ಳಾರಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು (ದೂರವಾಣಿ: 08392-294126) ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular