HomeKarnatakaಸಾಲ ತೀರಿಸಲು ಕಿಡ್ನ್ಯಾಪ್ ನಾಟಕ: ತಂದೆಗೆ ಕರೆ ಮಾಡಿ 90 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ...

ಸಾಲ ತೀರಿಸಲು ಕಿಡ್ನ್ಯಾಪ್ ನಾಟಕ: ತಂದೆಗೆ ಕರೆ ಮಾಡಿ 90 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ ಮಗ

ಬೆಂಗಳೂರು: ಮೈತುಂಬ ಸಾಲ ಮಾಡಿಕೊಂಡಿದ್ದ ಮಗರಾಯನೊಬ್ಬ, ಸಾಲ ತೀರಿಸುವ ಸಲುವಾಗಿ ತಾನು ಕಿಡ್ನ್ಯಾಪ್ ಆಗಿದ್ದಾಗಿ ಕಥೆ ಕಟ್ಟಿ ತಂದೆಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಬೆಂಗಳೂರಿನ ಆರ್.ಆರ್.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮನೀಷ್ (40) ಎಂಬಾತ ತನ್ನ ತಂದೆ ಮನೋಹರ್ ಪಟೇಲ್ (62) ಅವರಿಗೆ ಸ್ನೇಹಿತರ ಮೂಲಕ ತನ್ನದೇ ನಂಬರ್‌ನಿಂದ ವಾಟ್ಸಾಪ್ ಕರೆ ಮಾಡಿಸಿ, ನಿಮ್ಮ ಮಗನನ್ನು ಕಿಡ್ನ್ಯಾಪ್‌ ಮಾಡಿದ್ದೇವೆ ಎಂದು ಹೇಳಿ ಹೆದರಿಸಿದ್ದ. ಮಗನನ್ನು ಬಿಡಬೇಕು ಎಂದಾದರೆ 90 ಲಕ್ಷ ರೂ. ಹಣ ನೀಡಬೇಕು ಎಂದು ಡಿಮ್ಯಾಂಡ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂದಿನ ದಿನ ಹಣದ ವ್ಯವಹಾರಕ್ಕೆಂದು ರೈಲಿನಲ್ಲಿ ಗದಗಕ್ಕೆ ಹೋಗುವುದಾಗಿ ಹೇಳಿ ಮನೀಷ್ ಹೊರಟಿದ್ದ. ಬೆಳಗ್ಗೆ ಫೋನ್ ಮಾಡ್ತೀನಿ ಎಂದಿದ್ದ, ಆದರೆ ಬೆಳಗ್ಗೆ ಕರೆ ಮಾಡಿದವರು ನಿಮ್ಮ ಮಗ ಕಿಡ್ನ್ಯಾಪ್ ಆಗಿದ್ದಾನೆ. ಆತನನ್ನು ಬಿಡುಗಡೆ ಮಾಡಬೇಕೆಂದರೆ ಹಣ ನೀಡುವಂತೆ ಬೆದರಿಕೆ ಹಾಕಿದ್ದರು. ಇದರಿಂದ ಕಂಗಾಲಾದ ಮನೀಷ್ ತಂದೆ ಮನೋಹರ್, ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದರು.

ಆರ್.ಆರ್,ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮನೀಷ್ ಮೊಬೈಲ್ ಟ್ರ್ಯಾಕ್ ಮಾಡಿದಾಗ ಸ್ವಿಚ್​ಆಫ್ ಬಂದಿದೆ. ಬಳಿಕ ಬೇರೊಂದು ನಂಬರ್​​ನಿಂದ ಹಣ ಅರೆಂಜ್ ಆಯ್ತಾ ಎಂದು ಕರೆ ಬಂದಿದ್ದು, ಆ ನಂಬರ್ ಟ್ರ್ಯಾಕ್ ಮಾಡಿದಾಗ ಅದು ಹಾಸನ ಭಾಗದಲ್ಲಿರುವುದು ಪತ್ತೆಯಾಗಿದೆ.

ಈ ವೇಳೆ ಮನೀಷ್ ಇನ್ನಿಬ್ಬರು ವ್ಯಕ್ತಿಗಳ ಜೊತೆ ಒಂದು ರೂಮ್ ನಲ್ಲಿ ಇರುವುದು ಗೊತ್ತಾಗಿದೆ. ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮನೀಷ್ ಸಾಲ ತೀರಿಸಲು ಹಣದ ಅಗತ್ಯವಿತ್ತು. ಹಾಗಾಗಿ ಹೀಗೆ ಮಾಡಿದ್ದಾಗಿ ಬಾಯ್ಬಿಟ್ಟಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಮನೀಷ್ ಸೇರಿ ಮೂವರು ಆರೋಪಿಗಳನ್ನು ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular