HomeKarnatakaಪ್ರಯಾಣಿಕರಿಗೆ ಗುಡ್ ನ್ಯೂಸ್: ಅಕ್ಟೋಬರ್ 3 ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಪ್ರಯಾಣಿಕರಿಗೆ ಗುಡ್ ನ್ಯೂಸ್: ಅಕ್ಟೋಬರ್ 3 ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಅಕ್ಟೋಬರ್ 3 ರಂದು ನಮ್ಮ ಮೆಟ್ರೋ ರೈಲು ಸೇವೆ ವಿಸ್ತರಣೆ ಮಾಡಿದೆ.

ಪ್ರಯಾಣಿಕರ ನಿರೀಕ್ಷಿತ ದಟ್ಟಣೆ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಆರ್‌ಸಿಎಲ್ ಅಕ್ಟೋಬರ್ 3 ರಂದು ನಮ್ಮ ಮೆಟ್ರೋ ರೈಲು ಸೇವೆಯನ್ನು ವಿಸ್ತರಿಸಿದೆ.

ಟರ್ಮಿನಲ್‌ ನಿಲ್ದಾಣಗಳಿಂದ ಕೊನೆಯ ರೈಲು ಹೊರಡುವ ಸಮಯ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೇರಳೆ ಮಾರ್ಗ

ವೈಟ್‌ಫೀಲ್ಡ್ (ಕಾಡುಗೋಡಿ) – ರಾತ್ರಿ 12:00

ಚಲ್ಲಘಟ್ಟ – ರಾತ್ರಿ 12:20

ಹಸಿರು ಮಾರ್ಗ

ಮಾದಾವರ- ರಾತ್ರಿ 12:15

ಸಿಲ್ಕ್ ಇನ್‌ಸ್ಟಿಟ್ಯೂಟ್ – ರಾತ್ರಿ 12:20

ಹಳದಿ ಮಾರ್ಗ

ಆರ್.ವಿ. ರಸ್ತೆ –ರಾತ್ರಿ 1.15

ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ – ರಾತ್ರಿ 11:55

ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್‌ನಿಂದ ಕೊನೆಯ ಸಂಪರ್ಕ ರೈಲು ರಾತ್ರಿ 12:55ಕ್ಕೆ ಹೊರಡಲಿದೆ.

ಟಿಕೆಟ್ ಕೌಂಟರ್‌ಗಳಲ್ಲಿ ಜನದಟ್ಟಣೆ ತಪ್ಪಿಸಲು ಪ್ರಯಾಣಿಕರು QR ಟಿಕೆಟ್, ಸ್ಮಾರ್ಟ್ ಕಾರ್ಡ್ ಅಥವಾ NCMC ಕಾರ್ಡ್‌ಗಳನ್ನು ಬಳಸುವಂತೆ ಕೋರಲಾಗಿದೆ.

ಸುಗಮ ಪ್ರಯಾಣಿಕರ ಸಂಚಾರಕ್ಕಾಗಿ ಮೆಟ್ರೋ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿಯೊಂದಿಗೆ ಸಹಕರಿಸುವಂತೆ ಬಿಎಂಆರ್‌ಸಿಎಲ್ ಪ್ರಯಾಣಿಕರಲ್ಲಿ ವಿನಂತಿಸಿದೆ.

ಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ ಅನಾವರಣ

​ಬೆಂಗಳೂರು: ಮಹಾತ್ಮ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ 87 ಐತಿಹಾಸಿಕ ಸ್ಥಳಗಳಲ್ಲಿ ‘ಗಾಂಧಿ ಸ್ಮಾರಕ ಸ್ತಂಭ’ ಸ್ಥಾಪಿಸುವ ಕರ್ನಾಟಕ ಸರ್ಕಾರದ ಆಯವ್ಯಯ ಘೋಷಣೆಯ ಭಾಗವಾಗಿ, ರಾಜ್ಯದ ಮೊದಲ ಗಾಂಧಿ ಸ್ಮಾರಕ ಸ್ತಂಭವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಂಗಳೂರಿನ ಇಂದಿನ ಸರ್ಕಾರಿ ಕಲಾ ಕಾಲೇಜು (GAS ಕಾಲೇಜು) ಆವರಣದಲ್ಲಿ ಅನಾವರಣಗೊಳಿಸಿದರು.

​ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷಗಳು ಪೂರೈಸಿದ ನೆನಪಿಗಾಗಿ “ಗಾಂಧಿ ಭಾರತ” ಅಭಿಯಾನದಡಿಯಲ್ಲಿ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಈ ಸ್ಮಾರಕ ಸ್ತಂಭಗಳನ್ನು ನಿರ್ಮಿಸಲಾಗುತ್ತಿದೆ.

ಶಾಸಕರು ಹಾಗೂ ಗಾಂಧಿ ಭಾರತ ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಎಚ್. ಕೆ. ಪಾಟೀಲ, ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಹಾಗೂ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಬಿ.ಎಲ್.ಶಂಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಗಳಾದ ಜೆ. ಮಂಜುನಾಥ್ ಐ.ಎ.ಎಸ್.  ಸೇರಿದಂತೆ ಗಾಂಧಿ ಭಾರತ ಸಮಿತಿಯ ಪದಾಧಿಕಾರಿಗಳು, ಸರ್ಕಾರಿ ಕಲಾ ಕಾಲೇಜಿನ ಪ್ರಾಧ್ಯಾಪಕರು, ಅಪಾರ ಸಂಖ್ಯೆಯ ವಿಧ್ಯಾರ್ಥಿಗಳು  ಈ ‌ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಗಾಂಧಿ ಸ್ಮಾರಕ ಸ್ತಂಭ  ಸಿದ್ದಡಿಸಿದ ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್, ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ನಾಗೇಂದ್ರ ಕುಮಾರ್ ಜಿ.ಸಿ. ನಿರ್ಮಿತಿ ಕೇಂದ್ರದ ಅಭಿಯಂತರರಾದ ರಾಜೀವ್ ಅವರನ್ನು ಸನ್ಮಾನಿಸಿದರು.

ಅಲ್ಲದೇ ಈ ಮಹತ್ವದ ಕಾರ್ಯಕ್ರಮಕ್ಕೆ ಸಾಕ್ಷಿಯಾದಂತೆ ಸರ್ಕಾರಿ ಕಲಾ ಕಾಲೇಜಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಗಿಡ ನೆಟ್ಟು ನೀರೆರದರು.

​ಬೆಂಗಳೂರಿನ ಐತಿಹಾಸಿಕ ಕ್ಷಣ:

ಮಹಾತ್ಮ ಗಾಂಧೀಜಿಯವರು ತಮ್ಮ ಪತ್ನಿ ಕಸ್ತೂರಬಾ ಅವರೊಂದಿಗೆ 1915ರ ಮೇ 8ರ ಶನಿವಾರದಂದು ಪ್ರಥಮ ಬಾರಿಗೆ ಬೆಂಗಳೂರಿಗೆ ಆಗಮಿಸಿದ್ದರು. ಅಂದು ಆಗಿನ ಸರ್ಕಾರಿ ಪ್ರೌಢಶಾಲೆಗೆ (ಇಂದಿನ ಸರ್ಕಾರಿ ಕಲಾ ಕಾಲೇಜು) ಭೇಟಿ ನೀಡಿ, ತಮ್ಮ ರಾಜಕೀಯ ಗುರುಗಳಾಗಿದ್ದ ಗೋಪಾಲಕೃಷ್ಣ ಗೋಖಲೆ ಅವರ ಭಾವಚಿತ್ರವನ್ನು ಅನಾವರಣಗೊಳಿಸಿದ್ದರು. ಅದರ ನೆನಪಿಗಾಗಿ ಈ ಸಭಾಂಗಣಕ್ಕೆ ಬಾಪೂಜಿ ಅವರ ಹೆಸರು ಇರಿಸಲಾಗಿದ್ದು, ಈಗ ಇದೇ ಆವರಣದಲ್ಲಿ ಮೊದಲ ಗಾಂಧಿ ಸ್ಮಾರಕ ಸ್ತಂಭ ನಿರ್ಮಿಸಲಾಗಿದೆ.

​ಆಕರ್ಷಕ ಸ್ಮಾರಕ ಸ್ತಂಭದ ವಿವರ:

​ಶಿಲ್ಪಿ: ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಈ ಸ್ಮಾರಕದ ಆಕರ್ಷಕ ಕಲಾಕೃತಿಯನ್ನು ಸಿದ್ಧಪಡಿಸಿದ್ದು, ಸ್ಮಾರಕವು 10 ಅಡಿ ಎತ್ತರ ಹಾಗೂ 3 1/4 (ಮೂರು ಕಾಲು) ಅಡಿ ಅಗಲದ ಏಕಶಿಲಾ ಗ್ರಾನೈಟ್ ಕಲಾಕೃತಿ ಹೊಂದಿದೆ.

​ವಿನ್ಯಾಸ: ಸ್ತಂಭದ ಮೇಲ್ಭಾಗದಲ್ಲಿ ನಾಲ್ಕು ಮುಖ ಸಿಂಹವುಳ್ಳ ರಾಷ್ಟ್ರೀಯ ಲಾಂಛನ, ಅದರ ಕೆಳಗೆ ಅಶೋಕ ಚಕ್ರ, ಧ್ಯಾನಸ್ಥ ಮಹಾತ್ಮ ಗಾಂಧೀಜಿ, ಅವರು ಬೋಧಿಸಿದ ಸಪ್ತ ಸಾಮಾಜಿಕ ಪಾತಕಗಳು, ಗಾಂಧೀಜಿಯವರ ಸಹಿ ಹಾಗೂ ಚರಕದ ಚಿತ್ರಣವಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಂ. ಎನ್. ಅನುಚೇತ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular