HomeKarnatakaಕಾವೇರಿ ನದಿ ನೀರು ಹಂಚಿಕೆ ವಿಚಾರ: ನೀರಿನ ಹರಿವು 2,000 ಕ್ಯೂಸೆಕ್ಸ್‌ಗೆ ಇಳಿಸಲು CWMAಗೆ ಕರ್ನಾಟಕ...

ಕಾವೇರಿ ನದಿ ನೀರು ಹಂಚಿಕೆ ವಿಚಾರ: ನೀರಿನ ಹರಿವು 2,000 ಕ್ಯೂಸೆಕ್ಸ್‌ಗೆ ಇಳಿಸಲು CWMAಗೆ ಕರ್ನಾಟಕ ಮನವಿ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡಿಗೆ 4,000 ಕ್ಯೂಸೆಕ್ಸ್ ನೀರು ಹರಿಸುವ ಆದೇಶ ಮರುಪರಿಶೀಲನೆಗೆ ಕರ್ನಾಟಕ ಸರ್ಕಾರ CWMAಗೆ ಮನವಿ ಮಾಡಿದೆ.

ಕಾವೇರಿ ನೀರಿನ ಹರಿವು 2,000 ಕ್ಯೂಸೆಕ್ಸ್‌ಗೆ ಇಳಿಸಲು CWMAಗೆ ರಾಜ್ಯ ಸರ್ಕಾರ ಮನವಿ ಸಲ್ಲಿದೆ. ಕಾವೇರಿ ಜಲಾಶಯಗಳಿಗೆ ಒಳಹರಿವು ತೀವ್ರವಾಗಿ ಕ್ಷೀಣಿಸಿದೆ. ಕೆಆರ್‌ಎಸ್ ಸೇರಿದಂತೆ 4 ಜಲಾಶಯಗಳಲ್ಲಿ ಲಭ್ಯವಿರುವ ನೀರು ಕೇವಲ 49 ಟಿಎಂಸಿ ಮಾತ್ರ. ಮುಂದಿನ ಜೂನ್ ವರೆಗೆ ಕುಡಿಯುವ ನೀರಿಗೆ ಕಾಯ್ದಿರಿಸುವುದು ಅನಿವಾರ್ಯವಾಗುದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಣಿವೆಯ 47 ತಾಲೂಕುಗಳು ತೀವ್ರ ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಇಲ್ಲಿಯವರೆಗೆ ಬಿಳಿಗುಂಡ್ಲುವಿನಲ್ಲಿ 44.21 ಟಿಎಂಸಿ ನೀರಿನ ಹರಿವು ದಾಖಲಾಗಿದೆ. ತಮಿಳುನಾಡಿನಲ್ಲಿ ಈಶಾನ್ಯ ಮಾನ್ಸೂನ್ ಉತ್ತಮವಾಗಿರುವ ಭರವಸೆ ಇದೆ. ಹೀಗಾಗಿ ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳಿಂದ ಗಣನೀಯ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ.

ಬಿಳಿಗುಂಡ್ಲುವಿನಲ್ಲಿ ಹರಿಸಬೇಕಾದ ನೀರಿನ ಪ್ರಮಾಣ 2,000 ಕ್ಯೂಸೆಕ್ಸ್‌ಗೆ ತಗ್ಗಿಸಬೇಕು ಎಂದು ಸರ್ಕಾರ ಮನವಿ ಮಾಡಿದೆ.

ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳಿಂದ ಗಣನೀಯ ಪ್ರಮಾಣದ ನೀರನ್ನು ಬಿಡುಗಡೆ ಮಾಡಲು ಸಾಧ್ಯವೇ ಇಲ್ಲದ ಇಕ್ಕಟ್ಟಿನಲ್ಲಿ ರಾಜ್ಯವಿದೆ. ಆದ್ದರಿಂದ ಪ್ರಾಧಿಕಾರವು ತನ್ನ ಹಿಂದಿನ ನಿರ್ಧಾರವನ್ನು ಮರು ಪರಿಶೀಲಿಸಿ, ಬಿಳಿಗುಂಡ್ಲುವಿನಲ್ಲಿ ಹರಿಸಬೇಕಾದ ನೀರಿನ ಪ್ರಮಾಣವನ್ನು ದಿನಕ್ಕೆ 2,000 ಕ್ಯೂಸೆಕ್​ಗೆ ಇಳಿಸುವ ಮೂಲಕ ರಾಜ್ಯದ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಪ್ರಾಧಿಕಾರಕ್ಕೆ ವಿನಂತಿಸಲಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಮಾಫಿ ಸಾಕ್ಷಿ ಪ್ರದೋಷ್ ವಿಡಿಯೋ ವೈರಲ್ ಮಾಡಿದವರಿಗೆ ಬಿಗ್ ಶಾಕ್: ಕಠಿಣ ಕ್ರಮಕ್ಕೆ ಕೋರ್ಟ್ ಆದೇಶ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಫಿ ಸಾಕ್ಷಿ ಪ್ರದೋಷ್ ವಿಡಿಯೋ ವೈರಲ್ ಮಾಡಿದವರಿಗೆ ಸಂಕಷ್ಟ ಎದುರಾಗಿದೆ.

ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿರುವ ಸೋಷಿಯಲ್ ಮೀಡಿಯಾ ಖಾತೆದಾರರು ಹಾಗೂ ಯೂಟ್ಯೂಬರ್‌ಗಳನ್ನು ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಮಾಫಿ ಸಾಕ್ಷಿ ಪ್ರದೋಷ್ ನೀಡಿದ್ದ ಹೇಳಿಕೆಯ ವಿಡಿಯೋವನ್ನು ದುರ್ಬಳಕೆ ಮಾಡಿಕೊಂಡು ಜಾಲತಾಣಗಳಲ್ಲಿ ವೈರಲ್ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರದ 59ನೇ ಸಿಸಿಹೆಚ್ ಕೋರ್ಟ್ ಆದೇಶಿಸಿದೆ.

ಪ್ರಕರಣದ ತನಿಖೆ ಹಾಗೂ ನ್ಯಾಯಾಂಗ ಪ್ರಕ್ರಿಯೆಯ ಭಾಗವಾಗಿದ್ದ ಮಾಫಿ ಸಾಕ್ಷಿ ಪ್ರದೋಷ್ ಅವರ ಹೇಳಿಕೆಯ ವಿಡಿಯೋವನ್ನು ಕೆಲವರು ಸ್ಕ್ರೀನ್ ರೆಕಾರ್ಡ್ ಮಾಡಿ ಯೂಟ್ಯೂಬ್ ಹಾಗೂ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ನ್ಯಾಯಾಲಯದ ಗೌಪ್ಯತೆಯನ್ನು ಉಲ್ಲಂಘಿಸಿ, ಈ ವಿಡಿಯೋವನ್ನು ದುರ್ಬಳಕೆ ಮಾಡಿಕೊಂಡಿರುವುದನ್ನು 59ನೇ ಸಿಸಿಹೆಚ್ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.

ಸಾಕ್ಷಿಯ ಹೇಳಿಕೆಯ ವಿಡಿಯೋವನ್ನು ಶೇರ್ ಮಾಡಿದ ಹಾಗೂ ಪೋಸ್ಟ್ ಮಾಡಿದ ಸೋಷಿಯಲ್ ಮೀಡಿಯಾ ಖಾತೆಗಳು ಮತ್ತು ಯೂಟ್ಯೂಬರ್‌‌ಗಳ ವಿರುದ್ಧ ‘ನ್ಯಾಯಾಂಗ ನಿಂದನೆ’ ಪ್ರಕರಣ ದಾಖಲಿಸುವಂತೆ ನ್ಯಾಯಾಲಯವು ಪೊಲೀಸರಿಗೆ ಮತ್ತು ಕೋರ್ಟ್ ರಿಜಿಸ್ಟ್ರಾರ್‌ಗೆ ಸ್ಪಷ್ಟ ನಿರ್ದೇಶನ ನೀಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular