HomeKarnatakaನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಘೋರ ದುರಂತ: ಜಲಾಶಯದಲ್ಲಿ ಮುಳುಗಿ ತಾಯಿ, ಮಗ ಸಾವು

ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಘೋರ ದುರಂತ: ಜಲಾಶಯದಲ್ಲಿ ಮುಳುಗಿ ತಾಯಿ, ಮಗ ಸಾವು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ತಾಯಿ ಮಗ ಮೃತಪಟ್ಟಿದ್ದಾರೆ.

ತಾಯಿ ರೇಖಾ, ಪುತ್ರ ಹೇಮಂತ್ ಮೃತಪಟ್ಟವರು ಎಂದು ಹೇಳಲಾಗಿದೆ. ಕುಟುಂಬ ಸಮೇತರಾಗಿ ಜಲಾಶಯದ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಹೇಮಂತ್(19) ಮೊದಲು ಡ್ಯಾಮ್ ನೀರಿನಲ್ಲಿ ಮುಳುಗಿದ್ದಾನೆ. ಮಗನ ರಕ್ಷಣೆಗೆ ತೆರಳಿದ ತಾಯಿ ರೇಖಾ(39) ಕೂಡ ಮೃತಪಟ್ಟಿದ್ದಾರೆ. ತಂದೆ ಮಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ತಾಯಿ, ಮಗನ ಶವಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ ಶೋಧ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾಸನಾಂಬ ದೇವಿ ಜಾತ್ರೆ: ಭಕ್ತರಿಗೆ ಸುಗಮ ದರ್ಶನಕ್ಕೆ ಸಿದ್ಧತೆಗೆ ಸೂಚನೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಸನ: ಹಾಸನಾಂಬ ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಸುಗಮ ದರ್ಶನ ಮಾಡಿ ಸಂತೋಷದಿಂದ ತೆರಳುವಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಗಮನಹರಿಸಿ ಸಿದ್ಧತೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅ.1 ರಂದು ಶ್ರೀ ಹಾಸನಾಂಬ ದೇವಿಯ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಸಂಬಂದಿಸಿದಂತೆ ಪೂರ್ವ ಸಿದ್ದತಾ ಸಭೆ ನಡೆಸಿ ಮಾತನಾಡಿದ ಅವರು, ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ಹೊರರಾಜ್ಯಗಳಿಂದ 30 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆ ಹಿನ್ನೆಲೆಯಲ್ಲಿ ಜಾತ್ರೆಯನ್ನು ಸುಸೂತ್ರವಾಗಿ ನಡೆಸಲು ನಿಗಾವಹಿಸಿ ಅಗತ್ಯ ಸಿದ್ಧತೆಗೆ ಹೆಚ್ಚಿನ ಒತ್ತು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

 ಜಾತ್ರೆಯ ಪ್ರಮುಖ ಕೇಂದ್ರಗಳಾದ ದೇವಾಲಯ, ದರ್ಶನ ಸರತಿ ಸಾಲುಗಳು, ಪ್ರವೇಶ ಮತ್ತು ನಿರ್ಗಮನ ಮಾರ್ಗಗಳು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಪ್ರದೇಶಗಳಲ್ಲಿ ಕುಡಿಯುವ ನೀರು, ಶೌಚಾಲಯ, ಸ್ವಚ್ಛತೆ, ಆರೋಗ್ಯ ಮತ್ತು ತುರ್ತು ಸೇವೆಗಳಿಗೆ ಆದ್ಯತೆ ನೀಡಿ ಸರತಿ ಸಾಲುಗಳ ನಿರ್ವಹಣೆಗೆ ಬ್ಯಾರಿಕೇಡ್ ಹಾಗೂ ಜರ್ಮನ್ ಟೆಂಟ್ ವ್ಯವಸ್ಥೆಯನ್ನು ವಿಸ್ತರಿಸುವುದರೊಂದಿಗೆ ಜನದಟ್ಟಣೆಯನ್ನು ನಿರಂತರವಾಗಿ ಗಮನಿಸಲು ತಾಂತ್ರಿಕ ತಂಡಗಳು ಮತ್ತು ಡ್ರೋನ್ ಮೇಲ್ವಿಚಾರಣೆಯ ವ್ಯವಸ್ಥೆಗೆ ಕ್ರಮವಹಿಸಲು ಸೂಚಿಸಿದರು.

ಜಾತ್ರೆಯ ನಿರ್ವಹಣೆಯಲ್ಲಿ ಡಿಜಿಟಲ್ ತಂತ್ರಜ್ಞಾನವನ್ನು ವ್ಯಾಪಕವಾಗಿ ಬಳಸಲು ಆನ್ ಲೈನ್ ಟಿಕೆಟ್ ಬುಕ್ಕಿಂಗ್, ವಾಟ್ಸ್ ಆ್ಯಪ್ ಚಾಟ್ಬಾಟ್, ದೇವಾಲಯದ ವೆಬ್‌ ಸೈಟ್, ಜಿಯೋ-ಟ್ಯಾಗಿಂಗ್, ಎ.ಐ. ಆಧಾರಿತ ಕ್ಯಾಮೆರಾಗಳು ಹಾಗೂ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ವ್ಯವಸ್ಥೆ ಮೂಲಕ ಭಕ್ತರ ಸಂಚಾರ ಮತ್ತು ಜನದಟ್ಟಣೆಯ ಮಾಹಿತಿಯನ್ನು ಸಂಗ್ರಹಿಸಿ ಅಗತ್ಯ ಕ್ರಮವಹಿಸಲು ಅನುಕೂಲವಾಗುವಂತೆ ಕೇಂದ್ರಿಕೃತ ನಿಯಂತ್ರಣ ಕೊಠಡಿಯನ್ನೂ ರೂಪಿಸಲು ಕ್ರಮವಹಿಸುವಂತೆ ತಿಳಿಸಿದರು.

ಜಾತ್ರಾ ಸಂದರ್ಭದಲ್ಲಿ ನಗರದಲ್ಲಿ ಉಂಟಾಗಬಹುದಾದ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಪ್ರತ್ಯೇಕ ಸಂಚಾರ ಮತ್ತು ಪಾರ್ಕಿಂಗ್ ವ್ಯವಸ್ಥೆ, ಪ್ರಮುಖ ರಸ್ತೆಗಳಲ್ಲಿ ನೋ-ಪಾರ್ಕಿಂಗ್ ಸೂಚನಾ ಫಲಕಗಳನ್ನು ಅಳವಡಿಸುವುದರ ಜೊತೆಗೆ, ಪಾರ್ಕಿಂಗ್ ಪ್ರದೇಶಗಳಿಂದ ದೇವಾಲಯದ ಪ್ರಮುಖ ಪ್ರವೇಶ ದ್ವಾರಗಳವರೆಗೆ ಮಿನಿ ಬಸ್ ಶಟಲ್ ಸೇವೆ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಶೇಷ ಚೇತನರು, ಒಂದು ವರ್ಷದೊಳಗಿನ ಶಿಶುವಿನೊಂದಿಗೆ ಬರುವ ತಾಯಂದಿರು, ಗರ್ಭಿಣಿಯರಿಗೆ ಪ್ರತ್ಯೇಕ ಸರತಿ ಸಾಲಿನಲ್ಲಿ ದರ್ಶನ ವ್ಯವಸ್ಥೆ ಕಲ್ಪಿಸಲು ಹಾಗೂ ಸಹಾಯ ಕೇಂದ್ರ, ವೀಲ್ಚೇರ್, ಬ್ಯಾಟರಿ ವಾಹನ, ಕಾಯುವ ಸ್ಥಳ ಹಾಗೂ ಅಗತ್ಯ ವೈದ್ಯಕೀಯ ನೆರವು ಒದಗಿಸುವ ವ್ಯವಸ್ಥೆ ಮಾಡಲು ನಿರ್ದೇಶನ ನೀಡಿದರು.

ಲಕ್ಷಾಂತರ ಭಕ್ತರ ಆರೋಗ್ಯದ ದೃಷ್ಟಿಯಿಂದ ವೈದ್ಯರು, ಶುಶ್ರೂಷಕರು, ಅಂಬುಲೆನ್ಸ್ ಗಳು ಹಾಗೂ ತುರ್ತು ವೈದ್ಯಕೀಯ ತಂಡಗಳನ್ನು ಸನ್ನದ್ಧವಾಗಿಡಲು ಕ್ರಮ ಕೈಗೊಳ್ಳುವಂತೆ ಭಕ್ತರಿಗೆ ನಿರಂತರ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಹೆಲ್ಪ್ ಡೆಸ್ಕ್, ಸಹಾಯವಾಣಿ ಮತ್ತು ಸಾರ್ವಜನಿಕ ಪ್ರಕಟಣೆ ವ್ಯವಸ್ಥೆಗಳನ್ನು ಪರಿಣಾಮಕಾರಿಯಾಗಿ ಮಾಡುವಂತೆ ಸೂಚಿಸಿದರು.

ಬಹುಮುಖ್ಯವಾಗಿ ತಾತ್ಕಾಲಿಕ ಶೌಚಾಲಯಗಳನ್ನು ಅತ್ಯಂತ ಸ್ವಚ್ಛವಾಗಿಡಬೇಕು. ಈ ನಿಟ್ಟಿನಲ್ಲಿ ಪ್ರತಿ ಬಾರಿ ಬಳಸಿದ ತಕ್ಷಣ ಸ್ವಚ್ಚಗೊಳಿಸಬೇಕು ಎಂದ ಅವರು ಕೈ ತೊಳೆಯಲು ಸಿಂಕ್ ಹಾಗೂ ಕಾಲು ತೊಳೆದುಕೊಳ್ಳಲು ಟ್ಯಾಪ್ ವ್ಯವಸ್ಥೆ ಮಾಡುವಂತೆ ತಿಳಿಸಿದರಲ್ಲದೆ ನೀರು ಎಲ್ಲಿಯೂ ನಿಲ್ಲದಂತೆ ಸರಾಗವಾಗಿ ಹರಿದು ಹೋಗುವಂತೆ ಸೂಕ್ತ ವ್ಯವಸ್ಥೆಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸ್ವಚ್ಚತಾ ಕಾರ್ಯದಲ್ಲಿ ತೊಡಗುವ ಸಿಬ್ಬಂದಿಗಳಿಗೆ ತರಬೇತಿ ನೀಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಪ್ರತಿದಿನ ಹಾಜರಾತಿ ಹಾಕಬೇಕು. ಜೊತೆಗೆ ಶೌಚಾಲಯ ಸ್ವಚ್ಛತೆಯನ್ನು ಮೇಲ್ವಿಚಾರಣೆ ಮಾಡಲು ತಂಡ ರಚನೆ ಮಾಡುವಂತೆ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಉಪವಿಭಾಗಾಧಿಕಾರಿಗಳಾದ ಜಗದೀಶ್ ಗಂಗಣ್ಣನವರ್, ಹುಲ್ಲುಮನಿ ತಿಮ್ಮಣ್ಣ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular