HomeEntertainment65 ಕೋಟಿ ಅವ್ಯವಹಾರ ಪ್ರಕರಣ: ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್

65 ಕೋಟಿ ಅವ್ಯವಹಾರ ಪ್ರಕರಣ: ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್

ಮುಂಬೈ: 65.54 ಕೋಟಿ ರೂಪಾಯಿ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್​​ನ ಜನಪ್ರಿಯ ನಟ ಡಿನೊ ಮೊರಿಯಾ ಅವರನ್ನು ಮುಂಬೈನ ಆರ್ಥಿಕ ಅಪರಾಧ ಇಲಖೆ ಅಧಿಕಾರಿಗಳು ಬಂಧಿಸಿದ್ದಾರೆ.

65.54 ಕೋಟಿ ರೂಪಾಯಿ ಹಗರಣದ ತನಿಖೆಯ ಸಂಬಂಧ ನಟನನ್ನು ಅವರ ಸ್ವಗೃಹದಿಂದಲೇ ಮುಂಬೈ ಪೊಲೀಸ್​​ನ ಆರ್ಥಿಕ ಅಪರಾಧ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮುಂಬೈನ ಮಿಥಿ ನದಿಯ ಹೂಳು ತೆಗೆಯುವ ಮತ್ತು ನವೀಕರಣ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ.ಗಳ ಅವ್ಯವಹಾರ ಹಾಗೂ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂಬೈನ ಬಾಂದ್ರಾದಲ್ಲಿರುವ ನಟ ಡಿನೊ ಮೊರಿಯಾ ನಿವಾಸದಲ್ಲಿ ಮುಂಬೈ ಪೊಲೀಸರು ಸುಮಾರು ಎಂಟು ಗಂಟೆಗಳಿಗೂ ಹೆಚ್ಚು ಕಾಲ ತೀವ್ರ ವಿಚಾರಣೆ ನಡೆಸಿದ್ದು, ವಿಚಾರಣೆ ಬಳಿಕ ನಟನನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಬಿಎಂಸಿ (BMC) ಕಚೇರಿಗೆ ಸುಮಾರು 65.54 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎನ್ನಲಾಗಿದೆ.

ಮಿಥಿ ನದಿ ಹೂಳು ತೆಗೆಯುವ ಗುತ್ತಿಗೆಗೆ ಸಂಬಂಧಿಸಿದಂತೆ ನಡೆದ ಆರ್ಥಿಕ ಅನಿಯಮಿತತೆಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಹಗರಣದಲ್ಲಿ ಗುತ್ತಿಗೆದಾರರು, ಮಧ್ಯವರ್ತಿಗಳು ಮತ್ತು ನಾಗರಿಕ ಸಂಸ್ಥೆಯ ಅಧಿಕಾರಿಗಳ ಕೈವಾಡವಿರುವ ಬಗ್ಗೆ ತನಿಖಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಡಿನೊ ಮೊರಿಯಾ ಅವರನ್ನು ಈ ಹಿಂದೆ ಮೇ 2025ರಲ್ಲೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗಿತ್ತು. ತನಿಖೆಯ ವೇಳೆ ಪೊಲೀಸರಿಗೆ ದೊರೆತ ಫೋನ್ ದಾಖಲೆಗಳು ಮತ್ತು ನಟನ ಸಹೋದರ ಸ್ಯಾಂಟಿನೋ ಮೊರಿಯಾ ಅವರ ‘ಯುಬಿಒ ರೈಡ್ಜ್’ ಕಂಪನಿಯ ಆರ್ಥಿಕ ವ್ಯವಹಾರಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಈ ಹಗರಣದಲ್ಲಿ ಈಗಾಗಲೇ 2025ರಲ್ಲಿ ಬಂಧನಕ್ಕೊಳಗಾಗಿರುವ ಕೇತನ್ ಕದಮ್ ಎಂಬಾತನ ಮೇಲೆಯೂ ತನಿಖೆ ನಡೆಸಲಾಗಿದೆ. ನದಿ ಸ್ವಚ್ಛತಾ ಕಾರ್ಯದ ಗುತ್ತಿಗೆಗಳ ಹಂಚಿಕೆ ಮತ್ತು ಅದಕ್ಕೆ ಸಂಬಂಧಿಸಿದ ಹಣಕಾಸಿನ ಪಾವತಿಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಮುಂಬೈ ಪೊಲೀಸರು ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದಾರೆ.

ಡಿನೊ ಮೊರಿಯಾ ಬಾಅಲಿವುಡ್ ಮಾತ್ರವಲ್ಲ ಕನ್ನಡದಲ್ಲಿ ನಟಿ ರಮ್ಯಾ ಜೊತೆಗೆ 2006 ರಲ್ಲಿ ಬಿಡುಗಡೆ ಆಗಿದ್ದ ‘ಜೂಲಿ’ ಸಿನಿಮಾನಲ್ಲಿ ನಟಿಸಿದ್ದರು. ಹಿಂದಿಯ ಸೂಪರ್ ಹಿಟ್ ಸಿನಿಮಾ ‘ರಾಜ್’, ‘ಜಿಸ್ಮ್’ಹೌಸ್​​​ಫುಲ್ 5,ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಅಪಘಾತದಲ್ಲಿ ಬೆನ್ನು ಮೂಳೆ ಮುರಿದುಕೊಂಡ ಬಾಲಿವುಡ್ ನಟಿ ನುಸ್ರತ್ ಭರುಚಾ

ಮುಂಬೈ: ಬಾಲಿವುಡ್ ಖ್ಯಾತ ನಟಿ ನುಸ್ರತ್ ಭರೂಚಾ ಸಿನಿಮಾ ಚಿತ್ರೀಕರಣಕ್ಕೆ ಇಂಡೋನೇಷ್ಯಾದ ಬಾಲಿ ಪ್ರವಾಸದಲ್ಲಿದ್ದಾಗ ಅಪಘಾತಕ್ಕೀಡಾಗಿದ್ದು, ಅವರ ಬೆನ್ನು ಮೂಳೆ ಮುರಿದಿದೆ ಎಂದು ತಿಳಿದುಬಂದಿದೆ.

ನುಸ್ರತ್ ಭರೂಚಾ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬಾಲಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಗಾಗಿ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಮುಂಬೈಗೆ ಸ್ಥಾಳಂತರಿಸುವ ನಿಟ್ಟಿನಲ್ಲಿ ಸಿದ್ಧತೆಗಳು ನಡೆಯುತ್ತಿವೆ.

ನುಸ್ರತ್ ಅವರು ಚಿತ್ರೀಕರಣದಲ್ಲಿದ್ದಾಗಲೇ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಅವರ ಬೆನ್ನು ಮೂಳೆಗೆ ಗಂಭೀರವಾದ ಪೆಟ್ಟಾಗಿದೆ. ಅವರ ಮುಂದಿನ ಚಿತ್ರ ಟೈಗರ್ ಶ್ರಾಫ್ ಅವರೊಂದಿಗೆ ತೆರೆ ಹಂಚಿಕೊಳ್ಳಲಿದ್ದರು. ಆದರೆ ಅಷ್ಟರಲ್ಲಿ ಅಪಘಾತದಲ್ಲಿ ಬೆನ್ನು ಮೂಳೆ ಮುರಿದುಕೊಂಡಿದ್ದಾರೆ.

ಈ ಗಾಯದ ಕಾರಣದಿಂದಾಗಿ ನಟಿ ಮುಂದಿನ ಕೆಲವು ವಾರಗಳ ಕಾಲ ವಿಶ್ರಾಂತಿ ಪಡೆಯಲಿದ್ದು, ಅವರ ಮುಂಬರುವ ಚಿತ್ರಗಳ ಚಿತ್ರೀಕರಣ ಮತ್ತು ಕೆಲಸದ ಬದ್ಧತೆಗಳಿಗೆ ತಾತ್ಕಾಲಿಕವಾಗಿ ವಿರಾಮ ನೀಡಲಾಗಿದೆ. ನುಸ್ರತ್ ಭರೂಚಾ ಅವರಿಗೆ ಅಸಲಿಗೆ ಆಗಿದ್ದೇನು? ಹೇಗೆ ಅಪಘಾತ ಸಂಭವಿಸಿತು ಎಂಬ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಆದರೆ ಅವರ ಬೆನ್ನಿಗೆ ತೀವ್ರ ಪೆಟ್ಟಾಗಿದೆ. ಅವರ ಬೆನ್ನುಮೂಳೆಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂಬ ಮಾಹಿತಿಯಷ್ಟೆ

ನುಶ್ರತ್ ಭರುಚ್ಚಾ ಬಾಲಿವುಡ್‌ನ ಜನಪ್ರಿಯ ನಟಿಯರಲ್ಲಿ ಒಬ್ಬರು. ಅವರು ‘ಪ್ಯಾರ್ ಕಾ ಪಂಚ್‌‌ನಾಮಾ’ ಚಿತ್ರದ ಮೂಲಕ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಗಳಿಸಿದರು. ಅದಾದ ಬಳಿಕ ‘ಸೋನು ಕೆ ಟಿತು ಕಿ ಸ್ವೀಟಿ’, ‘ಡ್ರೀಮ್ ಗರ್ಲ್’, ‘ಛೋರಿ’, ‘ಜನ್‌ಹಿತ್ ಮೇ ಜಾರಿ’, ‘ರಾಮ್ ಸೇತು’, ‘ಅಕೇಲಿ’ ಮುಂತಾದ ವಿಭಿನ್ನ ಕಥಾಹಂದರದ ಚಿತ್ರಗಳಲ್ಲಿ ನಟಿಸಿದ್ದಾರೆ. ದಕ್ಷಿಣ ಭಾರತದ ಸಿನಿಮಾಗಳಲ್ಲೂ ಅವರು ನಟನೆ ಮಾಡಿದ್ದಾರೆ. ತೆಲುಗಿನ ‘ತಾಜ್ ಮಹಲ್’ ತಮಿಳಿನ ‘ವಾಲಿಬಾ ರಾಜಾ’ ಸಿನಿಮಾಗಳಲ್ಲಿಯೂ ಅವರು ನಟಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular