ಬೆಂಗಳೂರು: PGCET-26: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಅ.7ರವರೆಗೆ ದಿನಾಂಕ ವಿಸ್ತರಿಸಲಾಗಿದೆ.
ಶುಲ್ಕ ಪಾವತಿ ನಂತರ ಸೀಟು ಖಾತರಿ ಚೀಟಿ ಡೌನ್ಲೋಡ್ ಮಾಡಿಕೊಂಡು ಕಾಲೇಜಿನಲ್ಲಿ ಪ್ರವೇಶ ಪಡೆಯಲು ಅ.8ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ತಿಳಿಸಿದೆ.
ಪಿಜಿಸಿಇಟಿ-2026-ಮೊದಲನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟಣೆಯ ನಂತರದ ಪ್ರಕ್ರಿಯೆಗಳಿಗೆ ದಿನಾಂಕ ವಿಸ್ತರಣೆ ಮಾಡಲಾಗಿದೆ.
ಎಂಬಿಎ / ಎಂಸಿಎ / ಎಂಇ / ಎಂಟೆಕ್ / ಎಂ.ಆರ್ಕಿಟೆಕ್ಟರ್ ಕೋರ್ಸುಗಳ ಪ್ರವೇಶಾತಿಗೆ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ದಿನಾಂಕ 25/09/2026 ರಂದು ಪ್ರಾಧಿಕಾರದ ವೆಬ್ಸೈಟಿನಲ್ಲಿ ಪ್ರಕಟಿಸಲಾಗಿದೆ. ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಶುಲ್ಕ ಪಾವತಿಸಿ (ಚಲನ್ ಡೌನ್ ಲೋಡ್ ಮಾಡಿಕೊಂಡು) ಆಯಾ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ವೇಳಾಪಟ್ಟಿಯನ್ನು ಪರಿಷ್ಕರಿಸಿ ಈ ಕೆಳಗೆ ನೀಡಲಾಗಿದೆ.
ಸೀಟು ಹಂಚಿಕೆಯಾಗಿ ಇಲ್ಲಿಯವರೆಗೆ ಶುಲ್ಕ ಪಾವತಿಸದೆ ಇರುವ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಶುಲ್ಕ ಪಾವತಿಸಿ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಸೂಚಿಸಿದೆ.
1. ಪಿಜಿ ಪ್ರವೇಶ ನಿಯಮಾವಳಿಗಳಲ್ಲಿ ನೀಡಿರುವ ಶೈಕ್ಷಣಿಕ ವಿದ್ಯಾರ್ಹತೆಗಳು ಹಾಗೂ ಇತರೆ ಮಾನದಂಡಗಳು ಎಂಬಿಎ, ಎಂಸಿಎ, ಎಂಇ / ಎಂ.ಟೆಕ್ / ಎಂ.ಆರ್ಕಿಟೆಕ್ಟರ್ ಕೋರ್ಸುಗಳ ಪ್ರವೇಶಕ್ಕೆ ಅನ್ವಯಿಸುತ್ತದೆ. SC/ST/CATEGORY-I ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ‘ಮಾನದಂಡಗಳು ಕರ್ನಾಟಕದ SC/ST/CATEGORY-I
2. ಕೌನ್ಸಿಲಿಂಗ್ ನಡೆಸಲು ವೇಳಾಪಟ್ಟಿಯಲ್ಲಿನ ಲಭ್ಯವಿರುವ ಸೀಮಿತ ಸಮಯವನ್ನು ಗಮನದಲ್ಲಿಟ್ಟುಕೊಂಡು, ಭಾಗವಹಿಸುತ್ತಿರುವ ಎಲ್ಲಾ ಸಂಸ್ಥೆಗಳು / ಕಾಲೇಜುಗಳು ಎಲ್ಲಾ ಶನಿವಾರ ಮತ್ತು ಭಾನುವಾರಗಳು ಮತ್ತು ಸಾರ್ವತ್ರಿಕ ರಜಾ ದಿನಗಳನ್ನು ಕೆಲಸದ ದಿನಗಳೆಂದು ಪರಿಗಣಿಸಲು ಸೂಚಿಸಿದೆ.
ಬೆಳೆ ಸಮೀಕ್ಷೆ ವಿವರ ಪರಿಶೀಲನೆಗೆ ಅಕ್ಟೋಬರ್ 5 ಕೊನೆಯ ದಿನ: ಆಕ್ಷೇಪಣೆ ಸಲ್ಲಿಸಲು ಅವಕಾಶ
ಬಳ್ಳಾರಿ: ಪ್ರಸ್ತಕ ಸಾಲಿನ ಮುಂಗಾರು ಬೆಳೆ ಸಮೀಕ್ಷೆ ಕಾರ್ಯವು ಅಕ್ಟೋಬರ್ 5 ರಂದು ಮುಕ್ತಾಯಗೊಳ್ಳಲಿದ್ದು, ರೈತರು ತಮ್ಮ ಜಮೀನಿನ ಬೆಳೆ ವಿವರಗಳನ್ನು ಪರಿಶೀಲಿಸಿ, ವ್ಯತ್ಯಾಸಗಳಿದ್ದಲ್ಲಿ ತಕ್ಷಣವೇ ಆಕ್ಷೇಪಣೆ ಸಲ್ಲಿಸುವಂತೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಆಗಸ್ಟ್ 15 ರಿಂದ ಆರಂಭವಾಗಿರುವ ಬೆಳೆ ಸಮೀಕ್ಷೆಯ ವಿವರಗಳು ಸರಿಯಾಗಿ ದಾಖಲಾಗಿವೆಯೇ ಎಂಬುದನ್ನು ರೈತರು ಕಡ್ಡಾಯವಾಗಿ ಪರಿಶೀಲಿಸಿಕೊಳ್ಳಬೇಕು. ರೈತರು ತಮ್ಮ ಮೊಬೈಲ್ನಲ್ಲಿ ‘ಬೆಳೆ ದರ್ಶಕ’ ಆಪ್ ಡೌನ್ಲೋಡ್ ಮಾಡಿಕೊಂಡು, ಬೆಳೆ ಸಮೀಕ್ಷೆಯ ವಿವರಗಳನ್ನು ವೀಕ್ಷಿಸಬಹುದಾಗಿದೆ.
ಆಕ್ಷೇಪಣೆ ಸಲ್ಲಿಕೆಗೆ ಅವಕಾಶ:
ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರುವ ಬೆಳೆ, ವಿಸ್ತೀರ್ಣ ಅಥವಾ ಇತರ ಯಾವುದೇ ವಿವರಗಳಲ್ಲಿ ವ್ಯತ್ಯಾಸ ಅಥವಾ ತಪ್ಪುಗಳು ಕಂಡುಬAದಲ್ಲಿ, ರೈತರು ಇದೇ ‘ಬೆಳೆ ದರ್ಶಕ’ ಆಪ್ ಮೂಲಕವೇ ನೇರವಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಸರ್ಕಾರಿ ಸೌಲಭ್ಯಗಳಿಗೆ ಬೆಳೆ ಸಮೀಕ್ಷೆ ಆಧಾರ:
ಬೆಳೆ ಸಮೀಕ್ಷೆಯಲ್ಲಿ ನಿಖರವಾಗಿ ದಾಖಲಾದ ಬೆಳೆ ವಿವರಗಳೇ ಮುಂದಿನ ದಿನಗಳಲ್ಲಿ ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ ಹಾಗೂ ಸರ್ಕಾರದ ವಿವಿಧ ಕೃಷಿ/ತೋಟಗಾರಿಕೆ ಯೋಜನೆಗಳ ಸೌಲಭ್ಯ ಪಡೆಯಲು ಪ್ರಮುಖ ಆಧಾರವಾಗಿರುತ್ತವೆ. ಹಾಗಾಗಿ ರೈತರು ಅಕ್ಟೋಬರ್ 5 ರೊಳಗಾಗಿ ತಮ್ಮ ಬೆಳೆ ವಿವರಗಳನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಬಳ್ಳಾರಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು (ದೂರವಾಣಿ: 08392-294126) ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

