HomeCrimeಮೈಸೂರಿನಲ್ಲಿ ವ್ಯಕ್ತಿ ಮೇಲೆ 6 ಜನರ ತಂಡದಿಂದ ದಾಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ

ಮೈಸೂರಿನಲ್ಲಿ ವ್ಯಕ್ತಿ ಮೇಲೆ 6 ಜನರ ತಂಡದಿಂದ ದಾಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ

ಮೈಸೂರು: ಮೈಸೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಹೇಶ್(40) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಆರು ಜನರ ಗುಂಪಿನಿಂದ ದಾಳಿ ಮಾಡಲಾಗಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಮಹೇಶನನ್ನು ಕೊಲೆ ಮಾಡಲಾಗಿದೆ. ಮೈಸೂರಿನ ಗೋಕುಲಂ ಬಡಾವಣೆಯಲ್ಲಿ ಘಟನೆ ನಡೆದಿದೆ. ಮಹಿಳೆಯ ವಿಚಾರಕ್ಕೆ ಕೊಲೆ ನಡೆದಿರುವ ಆರೋಪ ಕೇಳಿ ಬಂದಿದೆ.

ಸ್ಥಳಕ್ಕೆ ವಿವಿ ಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಬಂದನಕೆ ಎರಡು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಮೈಸೂರಿನ ವಿವಿ ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಂಬಳ, ಡ್ರೋನ್ ಶೋ ಸೇರಿ ಈ ಬಾರಿ ಮೈಸೂರು ದಸರಾದಲ್ಲಿ ಹಲವು ವಿಶೇಷತೆ: ಸಿಎಂ ಡಿ.ಕೆ. ಶಿವಕುಮಾರ್

ಮೈಸೂರು: ರಾಜಕೀಯ ಲೇಪವಿಲ್ಲದೆ ವೈಭವದ ದಸರಾ ನಡೆಯಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ದಸರಾ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಮುಖ ಅಂಶಗಳು ಇಂತಿವೆ:

– ರಾಜಕೀಯಕ್ಕೆ ಅವಕಾಶವಿಲ್ಲದಂತೆ ವೈಭವದಿಂದ ದಸರಾ ನಡೆಯಬೇಕು. ದಸರಾ ಮಹೋತ್ಸವದಲ್ಲಿ ಅಂಬಾರಿ ಹೊರಲು ಧನಂಜಯ, ಏಕಲವ್ಯ ಸೇರಿ ಐದು ಆನೆಗಳಿಗೆ ತರಬೇತಿ ನೀಡಲಾಗಿದೆ. ಇನ್ನೂ ಹೆಚ್ಚಿನ ತರಬೇತಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

– ರಾಜ ವಂಶಸ್ಥರಿಗೂ ಗೌರವಪೂರ್ವಕ ಆಹ್ವಾನ ನೀಡಬೇಕು. ಯಾರ ಸ್ಥಾನ, ಸ್ವಾಭಿಮಾನಕ್ಕೂ ಧಕ್ಕೆ ತರುವ ಕೆಲಸ ಆಗಬಾರದು. ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಬೇಕು. ಇಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲದಂತೆ ವೈಭವದಿಂದ ದಸರಾ ನಡೆಸಲು ಸೂಚಿಸಲಾಗಿದೆ.

– ಏಷ್ಯನ್ ಗೇಮ್ಸ್‌ನಲ್ಲಿ ಪದಕ‌ ಗೆದ್ದಿರುವ ರಾಜ್ಯದ ಕ್ರೀಡಾಪಟುಗಳನ್ನು ದಸರಾ ಕ್ರೀಡಾಕೂಟಕ್ಕೆ ಆಹ್ವಾನಿಸಿ ಗೌರವ ನೀಡಬೇಕು.

– ಎಲ್ಲಾ ಸಚಿವರಿಗೂ ಹೊಣೆ: ದಿನಕ್ಕೆ ಇಬ್ಬರು ಸಚಿವರಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬೆಂಬಲವಾಗಿ ಕೆಲಸ ಮಾಡಬೇಕು. ಏಕೆಂದರೆ ಒಬ್ಬರ ಮೇಲೆಯೇ ಒತ್ತಡ ಹೆಚ್ಚುವುದನ್ನು ತಪ್ಪಿಸಬೇಕು ಎನ್ನುವ ಕಾರಣಕ್ಕೆ ಈ ಕ್ರಮ ತೆಗೆದುಕೊಳ್ಳಲಾಗಿದೆ. ಎಲ್ಲರ ಸಲಹೆಯಂತೆ ದಸರಾ ಕಾರ್ಯಕ್ರಮ ನಡೆಸಬೇಕು.

– ಫ್ಲೆಕ್ಸ್‌ಗಳಿಗಿಲ್ಲ ಅವಕಾಶ: ನಗರದಲ್ಲಿ ಎಲ್ಲಿಯೂ ಖಾಸಗಿ ಫ್ಲೆಕ್ಸ್‌ಗಳಿಗೆ ಅವಕಾಶ ನೀಡಬಾರದು. ನನ್ನ ಫೋಟೋ ಸೇರಿದಂತೆ ಯಾವ ಫೋಟೋಗಳನ್ನೂ ಹಾಕಬಾರದು. ದಸರಾ ಹಬ್ಬ ಮಾತ್ರ ವಿಜೃಂಭಿಸಬೇಕು. ದಸರಾ ಸೌಂದರ್ಯವನ್ನು ಯಾವ ಕಾರಣಕ್ಕೂ ಹಾಳುಗೆಡವಬಾರದು.

– 21 ದಿನಗಳ ಕಾಲ ದೀಪಾಲಂಕಾರ: ಈ ವರ್ಷ ದೀಪಾಲಂಕಾರವನ್ನು ವಿಶೇಷವಾಗಿ ಆಯೋಜನೆ ಮಾಡಲಾಗುವುದು. 21 ದಿನಗಳ ಕಾಲ ಇದು ನಡೆಯಲಿದೆ. ಯುವ ದಸರಾ, ಕಂಬಳ ಸೇರಿದಂತೆ ಇತರೆಡೆ ಆಹಾರ ಮೇಳ ಆಯೋಜನೆ ಮಾಡಬೇಕು.‌ಐತಿಹಾಸಿಕವಾದ ಡ್ರೋನ್ ಶೋ ಆಯೋಜನೆ ಮಾಡಲಾಗುವುದು.

– ಈ ಬಾರಿ ಯುವ ದಸರಾದಲ್ಲಿ ಎರಡು ಲಕ್ಷ ಜನ ಆಗಮಿಸುವ ನಿರೀಕ್ಷೆ ಇದೆ. ಅಲ್ಲಲ್ಲಿ ಶೌಚಾಲಯ, ನೀರಿನ ವ್ಯವಸ್ಥೆ ಕಲ್ಪಿಸಬೇಕು.

– ಪ್ರವಾಸಿಗರಿಂದ ಸುಲಿಗೆ ಮಾಡಬಾರದು: ಹೋಟೆಲ್‌ಗಳು ಯಾವುದೇ ಕಾರಣಕ್ಕೂ ಪ್ರವಾಸಿಗರಿಂದ ಸುಲಿಗೆ ಮಾಡಬಾರದು. ಗೌರವಯುತ ಮೊತ್ತ ಪಡೆಯಬೇಕು.

– ವೈವಿಧ್ಯಮಯ ಕಲಾ ತಂಡಗಳಿಗೆ ಅವಕಾಶ: ದಸರಾ ಮೆರವಣಿಗೆ ಹೋಗುವಾಗ ಒಂದೇ ರೀತಿಯ ತಂಡಗಳಿಗೆ ಅವಕಾಶ ನೀಡಬಾರದು. ವೈವಿಧ್ಯಮಯ ಕಲಾ ತಂಡಗಳಿಗೆ ಅವಕಾಶ ನೀಡಬೇಕು. ಟ್ಯಾಬ್ಲೋಗಳೂ ಸಹ ಶಿಸ್ತು ಕಾಪಾಡಬೇಕು.

– ಗವಿಸಿದ್ಧೇಶ್ವರ ಶ್ರೀಗಳಿಗೆ ದಸರಾ ಉದ್ಘಾಟನೆಗೆ ಭಾನುವಾರ ಆಹ್ವಾನ: ಭಾನುವಾರ ಗವಿಸಿದ್ಧೇಶ್ವರ ಶ್ರೀಗಳನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಲು ಜಿಲ್ಲಾಡಳಿತ ತೆರಳಲಿದೆ. ಜಾತಿ, ಧರ್ಮ ಭೇದವಿಲ್ಲದೆ ಎಲ್ಲ ಮಠಾಧೀಶರು, ಕ್ರೈಸ್ತ, ಬೌದ್ಧ, ಸಿಖ್, ಅಲ್ಪಸಂಖ್ಯಾತರು ಮತ್ತಿತರ ಧರ್ಮಗಳ ಗುರುಗಳನ್ನು ಆಹ್ವಾನಿಸಲು ಸೂಚಿಸಲಾಗಿದೆ. ಧಾರ್ಮಿಕ ಪ್ರಮುಖರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗುವುದು.

– ಟಿಬೆಟಿಯನ್ನರ ಸ್ತಬ್ಧಚಿತ್ರಕ್ಕೆ ಅವಕಾಶ: ಟಿಬೆಟಿಯನ್ನರಿಗೂ ದಸರಾ ಮೆರವಣಿಗೆಯಲ್ಲಿ ಟ್ಯಾಬ್ಲೋ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ. ಮಂಗಳೂರಿನ ಇತಿಹಾಸ ಬಿಂಬಿಸುವ ಟ್ಯಾಬ್ಲೋ, ಕೇರಳ,‌ ತಮಿಳುನಾಡು ಹಾಗೂ ಆಂಧ್ರಪ್ರದೇಶದವರಿಗೂ ಅವರ ಪರಂಪರೆ ಬಿಂಬಿಸುವ ಟ್ಯಾಬ್ಲೋಗಳನ್ನು ಕಳುಹಿಸಿ ಎಂದು ಪತ್ರ ಬರೆಯಲಾಗಿದೆ. ಜೊತೆಗೆ ಚಿತ್ರರಂಗದವರೂ ಸಹ ಈ ಬಾರಿ ಭಾಗವಹಿಸಲು ಆಹ್ವಾನ ನೀಡಲಾಗಿದೆ. ಜಯಮಾಲಾ ಅವರೊಟ್ಟಿಗೆ ಈ ಬಗ್ಗೆ ಸಂವಹನ ನಡೆಸಲಾಗಿದೆ.

– ತುಳುನಾಡಿನ ಪ್ರತ್ಯೇಕ ಸ್ತಬ್ಧಚಿತ್ರ: ತುಳುನಾಡಿಗೆ ಸುದೀರ್ಘ ಇತಿಹಾಸವಿದೆ. ಅವರ ಭಾವನಾತ್ಮಕ ವಿಚಾರಕ್ಕೆ ಗೌರವ ಸಲ್ಲಿಸಿದ್ದು, ಅವರ ಸಂಸ್ಕೃತಿ ಬಿಂಬಿಸಲು ಪ್ರತ್ಯೇಕ ಸ್ತಬ್ಧಚಿತ್ರ ಸಿದ್ಧಪಡಿಸಲು ಆಹ್ವಾನಿಸಲಾಗಿದೆ.

– ಪೌರಕಾರ್ಮಿಕರು ದೇಶದ ಆಸ್ತಿ: ದಸರಾ ಸಂದರ್ಭದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುವ ಪೌರಕಾರ್ಮಿಕರ ಕಾರ್ಯವನ್ನು ಸೂಕ್ತ ರೀತಿಯಲ್ಲಿ ಗೌರವಿಸಲಾಗುವುದು. ಚಾಮರಾಜನಗರ, ಮಡಿಕೇರಿ, ಶ್ರೀರಂಗಪಟ್ಟಣ ‌ದಸರಾ ಎಂದಿನಂತೆ ನಡೆಯಲಿದೆ.

– ದಸರಾ ಜಂಬೂಸವಾರಿಯಲ್ಲಿ ರಕ್ಷಣಾ ಪಡೆಗಳು: ಭೂಸೇನೆ, ವಾಯು ಹಾಗೂ ನೌಕಾಪಡೆ ಮೂರು ತಂಡಗಳು ಜಂಬೂಸವಾರಿಯಲ್ಲಿ ಭಾಗವಹಿಸಲು ಒಪ್ಪಿಗೆ ನೀಡಿದ್ದು, ಇವರ ಶಿಸ್ತು ಎಲ್ಲರಿಗೂ‌ ಮಾದರಿಯಾಗಬೇಕು. ಕಂಬಳವು ಸಂಪ್ರದಾಯದ ಪ್ರಕಾರ ನಡೆಯಬೇಕು. ಜನರಿಗೆ ವೀಕ್ಷಿಸಲು ಅಲ್ಲಲ್ಲಿ ಎಲ್.ಇ.ಡಿ ಪರದೆಗಳನ್ನು ಅಳವಡಿಸಿ ನೇರ ಪ್ರಸಾರ ನಡೆಯುವಂತೆ ನೋಡಿಕೊಳ್ಳಬೇಕು.

– ಜಂಬೂಸವಾರಿ ವೀಕ್ಷಣೆಗೆ ಸೂಕ್ತ ಆಸನ ವ್ಯವಸ್ಥೆ: ಹಣ ಕೊಟ್ಟು ಟಿಕೆಟ್ ಖರೀದಿಸಿ ಜಂಬೂಸವಾರಿ ವೀಕ್ಷಿಸಲು ಆಗಮಿಸುವವರಿಗೆ ಸೂಕ್ತ ಆಸನದ ವ್ಯವಸ್ಥೆಯಾಗಬೇಕು‌‌. ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಚಿವರಿಗೆ ಕಡ್ಡಾಯವಾಗಿ ಆಹ್ವಾನ ಪತ್ರಿಕೆ ತಲುಪಬೇಕು.

ದಸರಾ ಪೂರ್ವ ಸಿದ್ಧತಾ ಸಭೆ

ಸಿಎಂ ಡಿ.ಕೆ. ಶಿವಕುಮಾರ್ ಅವರು ದಸರಾ ಮಹೋತ್ಸವ 2026ರ ಪೂರ್ವಸಿದ್ಧತೆ ಕುರಿತು ಮೈಸೂರಿನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಈ ಸಭೆಯಲ್ಲಿ ಸಚಿವರಾದ ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವರು ಹಾಗೂ ಶಾಸಕರಾದ ಜಿ. ಟಿ. ದೇವೇಗೌಡ, ತನ್ವೀರ್ ಸೇಠ್, ಹರೀಶ್ ಗೌಡ, ರಮೇಶ್ ಬಾಬು ಬಂಡಿಸಿದ್ದೇಗೌಡ, ರವಿಶಂಕರ್, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ವಾರ್ತಾ ಇಲಾಖೆಯ ಆಯುಕ್ತರಾದ ಎಂ. ಎನ್. ಅನುಚೇತ್ ಮತ್ತಿತರರು ಭಾಗವಹಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular