HomeKarnatakaದೇವಸ್ಥಾನಕ್ಕೆ ಹೋಗುತ್ತಿದ್ದಗ ದುರಂತ: ಒಂದೇ ಕುಟುಂಬದ ಮೂವರು ಕೃಷಿ ಹೊಂಡದಲ್ಲಿ ಮುಳುಗಿ ಸಾವು

ದೇವಸ್ಥಾನಕ್ಕೆ ಹೋಗುತ್ತಿದ್ದಗ ದುರಂತ: ಒಂದೇ ಕುಟುಂಬದ ಮೂವರು ಕೃಷಿ ಹೊಂಡದಲ್ಲಿ ಮುಳುಗಿ ಸಾವು

ಚಿಕ್ಕಬಳ್ಳಾಪುರ: ಜಮೀನಿನಲ್ಲಿಯೇ ಇದ್ದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪೂಜೆಗೆಂದು ತೆರಳಿದ್ದ ವೇಳೆ ದುರಂತವೊಂದು ಸಂಭವಿಸಿದೆ. ಒಂದೇ ಕುಟುಂಬದ ಮೂವರು ಕೃಷೀ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ದೇವಸ್ಥಾನಕ್ಕೆಂದು ಹೋದ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಹುಸೇನಪುರ ಗ್ರಾಮದಲ್ಲಿ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುಸೇನಪುರ ನಿವಾಸಿ ಮುನಿನಾರಾಯಣಪ್ಪ (60) ಹಾಗೂ ಅವರ ಮೊಮ್ಮಕ್ಕಳಾದ ಯಶ್ವಿನ್ ಮತ್ತು ಪ್ರಜ್ವಲ್ ಮೃತಪಟ್ಟ ದುರ್ದೈವಿಗಳು. ಒಂದೇ ಕುಟುಂಬದ ಮೂವರು ಒಟ್ಟಿಗೆ ಜಲಸಮಾಧಿಯಾಗಿರುವುದು ಗ್ರಾಮದಲ್ಲಿ ತೀವ್ರ ಶೋಕದ ಛಾಯೆ ಮೂಡಿಸಿದೆ.

ಮುನಿನಾರಾಯಣಪ್ಪ ಅವರು ಪ್ರತಿ ಶನಿವಾರ ತಮ್ಮ ಜಮೀನಿನಲ್ಲಿರುವ ಆಂಜನೇಯಸ್ವಾಮಿ ಗುಡಿಗೆ ತೆರಳಿ ಪೂಜೆ ಸಲ್ಲಿಸುವುದನ್ನು ರೂಢಿಸಿಕೊಂಡಿದ್ದರು. ಶನಿವಾರ ಬೆಳಗ್ಗೆಯೂ ಪೂಜೆಗಾಗಿ ಜಮೀನಿಗೆ ಹೊರಟಾಗ, ಮೊಮ್ಮಕ್ಕಳಾದ ಯಶ್ವಿನ್ ಹಾಗೂ ಪ್ರಜ್ವಲ್ “ತಾತ, ನಾವೂ ನಿಮ್ಮ ಜೊತೆ ಬರುತ್ತೇವೆ” ಎಂದು ಹಠ ಹಿಡಿದು ಜೊತೆಯಲ್ಲೇ ತೆರಳಿದ್ದರು.

ಬೆಳಗ್ಗೆ ಮನೆಯಿಂದ ತೆರಳಿದ ಮೂವರೂ ಸಂಜೆಯಾದರೂ ವಾಪಸ್ ಬಾರದಿದ್ದಾಗ ಆತಂಕಗೊಂಡ ಕುಟುಂಬಸ್ಥರು ಜಮೀನಿನತ್ತ ಹುಡುಕಾಟ ನಡೆಸಿದ್ದಾರೆ. ಈ ವೇಳೆ ದೇವಾಲಯದ ಸಮೀಪದಲ್ಲೇ ಇದ್ದ ಅಶ್ವತ್ಥಪ್ಪ ಎಂಬುವರ ಜಮೀನಿನ ಕೃಷಿ ಹೊಂಡದಲ್ಲಿ ಮೂವರ ಶವಗಳು ತೇಲುತ್ತಿರುವುದು ಕಂಡುಬಂದಿದೆ.

ಮಕ್ಕಳು ಆಟವಾಡುತ್ತಾ ಅಥವಾ ನೀರು ತರಲು ಕೃಷಿ ಹೊಂಡದ ಬಳಿ ಹೋಗಿ ಕಾಲುಜಾರಿ ಬಿದ್ದಿರಬಹುದು. ಮೊಮ್ಮಕ್ಕಳು ಮುಳುಗುತ್ತಿರುವುದನ್ನು ಕಂಡು ಅವರನ್ನು ರಕ್ಷಿಸಲು ಹೋದ ತಾತ ಮುನಿನಾರಾಯಣಪ್ಪ ಕೂಡ ನೀರಿನಲ್ಲಿ ಮುಳುಗಿರಬಹುದು ಎಂದು ಶಂಕಿಸಲಾಗಿದೆ.

ಕೃಷಿ ಹೊಂಡದ ಸಮೀಪ ವಿದ್ಯುತ್ ತಂತಿಗಳು ಹಾಗೂ ಪಂಪ್‌ಸೆಟ್ ಸಂಪರ್ಕವಿದ್ದು, ವಿದ್ಯುತ್ ಸ್ಪರ್ಶದಿಂದ ಅವಘಡ ಸಂಭವಿಸಿರಬಹುದೇ ಎಂಬ ಸಂಶಯವನ್ನೂ ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಹೊರತೆಗೆದು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular