HomeKarnatakaದೊಡ್ಡಗುಬ್ಬಿ ಕೆರೆಯಲ್ಲಿ ಮೀನುಗಳ ಮಾರಣಹೋಮ

ದೊಡ್ಡಗುಬ್ಬಿ ಕೆರೆಯಲ್ಲಿ ಮೀನುಗಳ ಮಾರಣಹೋಮ

ಬೆಂಗಳೂರು: ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಡ್ಡಗುಬ್ಬಿ ಕೆರೆಯಲ್ಲಿ ಮೀನುಗಳ ಮಾರಣಹೋಮವಾಗಿದೆ. 125 ಎಕರೆ ವಿಸ್ತೀರ್ಣದ ಕೆರೆಯಾದ್ಯಂತ ಲಕ್ಷಾಅಂತರ ಮೀನುಗಳು ಸತ್ತು ನೀರಿನಲ್ಲಿ ತೇಲುತ್ತಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದ್ದಕ್ಕಿದ್ದಂತೆ ಮೀನುಗಳ ಸಾವಿಗೆ ಕಾರವೇನು? ಎಂಬುದು ತಿಳಿದುಬಂದಿಲ್ಲ. ಕೆರೆ ನೀರು ಮಲಿನಗೊಂಡು ಈ ರೀತಿ ಮೀನುಗಳು ಸಾವನ್ನಪ್ಪಿರಬಹುದು ಎಂದು ಶಂಕಿಸಹಾಗಿದೆ. ಏಕಾಏಕಿ ಕೆರೆಯಲ್ಲಿನ ಮೀನುಗಳು ಸತ್ತಿರುವುದರಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ನೀರಿನಲ್ಲಿ ಕೆಮಿಕಲ್ ಮಿಶ್ರಣದಿಂದ ಈ ಘಟನೆ ನಡೆದಿರಬಹುದು ಎಂಬ ಮಾತು ಕೇಳಿಬರುತ್ತಿದೆ.

ಸಮರ್ಪಕವಾಗಿ ಸಂಸ್ಕರಿಸದ ಒಳಚರಂಡಿ ನೀರು ಕೆರೆಗೆ ಸೇರಿದಾಗ ಈ ಸಮಸ್ಯೆ ಉಂಟಾಗಬಹುದು. ಈ ರೀತಿಯ ಘಟನೆ ಸಾಮಾನ್ಯವಾಗಿ ನೀರಿನಲ್ಲಿ ಕರಗಿರುವ ಆಮ್ಲಜನಕದ ಪ್ರಮಾಣ ಕುಸಿಯುವುದರಿಂದ ಉಂಟಾಗುತ್ತದೆ ಎಂದು ಪರಿಸರ ತಜ್ಞರು ತಿಳಿಸಿದ್ದಾರೆ.

ಕೆರೆಗೆ ಸೇರಿದ ಒಳಚರಂಡಿ ನೀರಿನಲ್ಲಿರುವ ಸಾವಯವ ವಸ್ತುಗಳು ಮತ್ತು ಪಾಚಿಗಳು ಕೊಳೆಯುವಾಗ, ಅದರಲ್ಲಿನ ಸೂಕ್ಷ್ಮಜೀವಿಗಳು ಹೆಚ್ಚಿನ ಪ್ರಮಾಣದಲ್ಲಿ ನೀರಿನಲ್ಲಿ ಕರಗಿರುವ ಆಮ್ಲಜನಕವನ್ನು ಬಳಸಿಕೊಳ್ಳುತ್ತವೆ. ಇದರಿಂದ ನೀರಿನಲ್ಲಿ ಆಮ್ಲಜನಕದ ಕೊರತೆ ಉಂಟಾಗಿ ಮೀನುಗಳು ಸಾಯುವ ಸಾಧ್ಯತೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯ ಸಮುದಾಯಗಳು ಜಲಮೂಲಗಳನ್ನು ನೋಡಿಕೊಳ್ಳಲು ಆರಂಭಿಸಿದ ಬಳಿಕ ಹಲವು ಕೆರೆಗಳಿಗೆ ಪ್ರಾಣಿಗಳು ಮತ್ತು ಪಕ್ಷಿಗಳು ಮರಳಿದ್ದವು. ಆದರೆ, ಕೆರೆಗಳ ಮೇಲಿನ ನಿಯಂತ್ರಣವನ್ನು ವಾಪಸ್ ಪಡೆದ ಬಳಿಕ ಒಳಚರಂಡಿ ನೀರು ಹರಿಯುವಂತಹ ಸಮಸ್ಯೆಗಳು ಮತ್ತೆ ಕಾಣಿಸಿಕೊಂಡಿವೆ ಎಂದು ಹೇಳಿದ್ದಾರೆ.ಕೆರೆಗಳ ರಕ್ಷಣೆಗೆ ನಿಯೋಜಿಸಲಾಗಿರುವ ಭದ್ರತಾ ಸಿಬ್ಬಂದಿ ಕೂಡ ಹಲವು ಸಂದರ್ಭಗಳಲ್ಲಿ ಸ್ಥಳದಲ್ಲಿ ವಾಸ್ತವವಾಗಿ ಹಾಜರಿರುವುದಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಎಸ್ಐಆರ್ ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿ ಪೇಚೆಗೆ ಸಿಲುಕಿದ ಯತ್ನಾಳ್: ಶಾಸಕರ ವಿರುದ್ಧ ಕ್ರಮಕ್ಕೆ ಆಗ್ರಹ

ವಿಜಯಪುರ: ರಾಜ್ಯದಲ್ಲಿ ನಡೆಯುತ್ತಿರುವ ಎಸ್​​ಐಆರ್​​ ಪ್ರಕ್ರಿಯೆಯಲ್ಲಿ ಗೊಂದಲಗಳು ಉದ್ಭವಿಸಿದ್ದು, ಎಸ್ ಐರ‍್ ವೇಳೆ ಚುನಾವಣಾ ಆಯೋಗದ ಫಾರ್ಮ್-7 ದುರ್ಬಳಕೆ ಆರೋಪ ಕೇಳಿಬ್ವಂದಿದೆ. ಇದೇ ವಿಚಾರ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ಇದರ ಮಧ್ಯೆ ವಿಜಯಪುರಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ , ಬದುಕಿರುವ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿ ಪೇಚೆಗೆ ಸಿಲುಕಿದ್ದಾರೆ. ಹೌದು ವಿಜಯಪುರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿವಾದ ತಾರಕ್ಕೇರಿದೆ.

ಮೃತಪಟ್ಟವರ ಹೆಸರು ಮತದಾರರ ಪಟ್ಟಿಯಲ್ಲಿದೆ ಎಂದು ಯತ್ನಾಳ್ ಆರೋಪಿಸಿದ್ದರು. ಸೆ.30ರಂದು 8 ಮತದಾರರ ಮರಣ ಪ್ರಮಾಣ ಪತ್ರ ಪ್ರದರ್ಶಿಸಿ ಶಾಸಕರು ಆರೋಪ ಮಾಡಿದ್ದರು. ಆದರೆ, ಇದೀಗ ಆ ಎಂಟು ಮತದಾರರು ಪ್ರತ್ಯಕ್ಷರಾಗಿದ್ದು, ನಾವು ಮೃತಪಟ್ಟಿಲ್ಲ, ಜೀವಂತವಾಗಿದ್ದೇವೆ ಎಂದು ಜಿಲ್ಲಾಧಿಕಾರಿ ಮುಂದೆ ಹಾಜರಾಗಿದ್ದಾರೆ.

ನಮ್ಮ ಡೆತ್ ಸರ್ಟಿಫಿಕೇಟ್ ಶಾಸಕ ಯತ್ನಾಳ್‌ಗೆ ಹೇಗೆ ಸಿಕ್ಕಿತು? ಮತದಾರರ ಪಟ್ಟಿಯಿಂದ ಹೆಸರು ತೆಗೆಸಲು ಹುನ್ನಾರ ನಡೆದಿದೆ . ಜೀವಂತ ವ್ಯಕ್ತಿಗಳ ಮರಣ ಪತ್ರ ನೀಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. ಪಾಲಿಕೆಯಿಂದ ನೀಡಿದ ಮರಣ ಪ್ರಮಾಣ ಪತ್ರ ನಕಲಿಯೋ? ಅಸಲಿಯೋ? ಪಾಲಿಕೆ ಸಿಬ್ಬಂದಿಯಿಂದಲೇ ಗೋಲ್ಮಾಲ್ ನಡೆದಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಜೀವಂತ ವ್ಯಕ್ತಿಗಳ ಡೆತ್ ಸರ್ಟಿಫಿಕೇಟ್ ನೀಡಿದವರ ಪತ್ತೆಗೆ ಜಿಲ್ಲಾಧಿಕಾರಿಗಳು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular