HomeCrimeಗಾಂಜಾ ಮತ್ತಿನಲ್ಲಿ ಯುವಕರ ದುಷ್ಕೃತ್ಯ: 500 ರೂ.ಗಾಗಿ ಕೂಲಿ ಕಾರ್ಮಿಕನ ಕೊಲೆ

ಗಾಂಜಾ ಮತ್ತಿನಲ್ಲಿ ಯುವಕರ ದುಷ್ಕೃತ್ಯ: 500 ರೂ.ಗಾಗಿ ಕೂಲಿ ಕಾರ್ಮಿಕನ ಕೊಲೆ

ಶಿವಮೊಗ್ಗ: ಗಾಂಜಾ ಸೇವನೆಯ ಮತ್ತಿನಲ್ಲಿ ಯುವಕರು ಕೂಲಿ ಕಾರ್ಮಿಕನನ್ನು ಕೊಲೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ಅಶೋಕನಗರದ ತುಂಗಾ ಚಾನೆಲ್ ಬಳಿ ಕೇವಲ 500 ರೂ.ಗಾಗಿ ಮಹಮ್ಮದ್ ಅಲಿ ಎಂಬ ಕೂಲಿ ಕಾರ್ಮಿಕನನ್ನು ಹತ್ಯೆ ಮಾಡಲಾಗಿದೆ.

ಮಹಮ್ಮದ್ ಅಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಶನಿವಾರ ರಾತ್ರಿ ಗಾಂಜಾ ಮತ್ತಿನಲ್ಲಿದ್ದ ಯುವಕರು ಬೈಕ್ ನಲ್ಲಿ ಸ್ಥಳಕ್ಕೆ ಬಂದಿದ್ದಾರೆ. ಅಲಿ ಅವರ ಕೈಯಲ್ಲಿ 500 ರೂ. ನೋಡಿದ ಯುವರು ಹಣ ಕೊಡುವಂತೆ ಕೇಳಿದ್ದಾರೆ. ಅಲಿ ಹಣ ಕೊಡಲು ನಿರಾಕರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ವೇಳೆ ಯುವಕರು ಗಾಂಜಾ ಸೇವನೆಯ ಮತ್ತಿನಲ್ಲಿದ್ದರು ಎನ್ನಲಾಗಿದ್ದು, ₹500 ಹಣದ ವಿಚಾರವಾಗಿ ಮಹಮ್ಮದ್ ಅಲಿ ಅವರೊಂದಿಗೆ ಜಗಳ ಮಾಡಿಕೊಂಡಿದ್ದಾರೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಯುವಕರು ಚಾಕುವಿನಿಂದ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಮಹಮ್ಮದ್ ಅಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆ ಹಾಗೂ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

500 ರೂ. ಹಣಕ್ಕಾಗಿ ನಡೆದ ಜಗಳವೊಂದು ಕೂಲಿ ಕಾರ್ಮಿಕನ ಜೀವವನ್ನೇ ಬಲಿ ಪಡೆದಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪ್ರಕರಣದ ಸಂಪೂರ್ಣ ಹಿನ್ನೆಲೆ, ಆರೋಪಿಗಳ ಸಂಖ್ಯೆ ಸೇರಿದಂತೆ ಹೆಚ್ಚಿನ ವಿವರಗಳನ್ನು ಪೊಲೀಸರು ತನಿಖೆಯ ಬಳಿಕ ಬಹಿರಂಗಪಡಿಸುವ ಸಾಧ್ಯತೆ ಇದೆ.

ಆಹಾರ ದಸರಾ ಸಮಿತಿ ವತಿಯಿಂದ ವಿವಿಧ ಕಾರ್ಯಕ್ರಮಗಳು

ಶಿವಮೊಗ್ಗ: ಶಿವಮೊಗ್ಗ ದಸರಾ -2026ರ ಪ್ರಯುಕ್ತ ಆಹಾರ ದಸರಾ ಸಮಿತಿ ವತಿಯಿಂದ ನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಅ.15 ರಂದು ಸಂಜೆ 6 ಗಂಟೆಗೆ, ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ದಲ್ಲಿ ಆಹಾರ ಮೇಳ – ಮಲೆನಾಡ ಸಾಂಪ್ರದಾಯಿಕ ವಿಶಿಷ್ಟ ಅಡುಗೆಗಳ ಪ್ರದರ್ಶನ ಮತ್ತು ಮಾರಾಟ.

ಅ.16 ರಂದು ಬೆಳಗ್ಗೆ 10.00ಕ್ಕೆ ವೀರಶೈವ ಕಲ್ಯಾಣ ಮಂಟಪದಲ್ಲಿ ಸಹೋದರ-ಸಹೋದರಿಯರಿಮದ ಶೇಂಗಾ ಮತ್ತು ಕೊಬ್ಬರಿ ಉಪಯೋಗಿಸಿ ತಯಾರಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಅ.17 ರಂದು ಬೆಳಿಗ್ಗೆ 10.00ಕ್ಕೆ ಶಿವಪ್ಪ ನಾಯಕ ಸರ್ಕಲ್‌ನಲ್ಲಿ ಸಂಚಾರಿ ಪೊಲೀಸ್‌ರಿಗೆ ಹಾಗೂ ಸಾರ್ವಜನಿಕರಿಗೆ ಇಡ್ಲಿ ಮತ್ತು ಹಣ್ಣು ತಿನ್ನುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಆಸಕ್ತರು ಸ್ಪರ್ಧೆಗಳ ನೋಂದಣೆಗಾಗಿ ಮೊ.ಸಂ.: 9886033982/ 9902525752/ 8123214210 ಗಳನ್ನು ಸಂಪರ್ಕಿಸುವಂತೆ ಆಹಾರ ದಸರಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಉಪವಿಭಾಗ-3: ಮೆಸ್ಕಾಂ ಜನಸಂಪರ್ಕ ಸಭೆ

ಶಿವಮೊಗ್ಗ: ಶಿವಮೊಗ್ಗ ಮೆಸ್ಕಾಂ ಉಪವಿಭಾಗ-3 ಕಛೇರಿ, ಗುಡ್‌ಲಕ್ ಸರ್ಕಲ್ ಹತ್ತಿರ, ಎಸ್. ವಿ. ಬಡಾವಣೆ ಇಲ್ಲಿ ಅ. 05 ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular