ದಾವಣಗೆರೆ: ಅಪ್ರಾಪ್ತೆಯ ಮೇಲೆ ಅತ್ಯಚಹಾರವೆಸಗಿರುವ ಆರೋಪದಲ್ಲಿ ಆರೋಪಿ ಮನೆ ಮೇಲೆ ಸಂತ್ರಸ್ತ ಬಾಲಕಿ ಕುಟುಂಬದವರು ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.
ದಾವಣಗೆರೆ ಜಿಲ್ಲೆಯ ಚಿನ್ನಗಿರಿಯಲ್ಲಿ ಈ ಘಟನೆ ನಡೆದಿದೆ. ಅತ್ಯಾಚಾರ ಎಸಗಿರುವ ಆರೋಪಿಯನ್ನು ಚನ್ನಗಿರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮತ್ತೊಂದೆಡೆ, ಸಂತ್ರಸ್ತೆಯ ಕುಟುಂಬದವರು ಆರೋಪಿಯ ಮನೆ ಮೇಲೆ ಕಲ್ಲು ತೂರಾಟ ನಡೆಸಿರುವ ಆರೋಪ ಕೇಳಿ ಬಂದಿದೆ.
ಕಳೆದ ಎರಡು ತಿಂಗಳ ಹಿಂದೆ ಸಂತ್ರಸ್ತೆ ಕುಟುಂಬಸ್ಥರು ಅತ್ಯಾಚಾರ ಪ್ರಕರಣ ದಾಖಲು ಮಾಡಿದ್ದರು. ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು. ದೂರು ದಾಖಲಿಸಿದರೂ ಚನ್ನಗಿರಿ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಕುಟುಂಬಸ್ಥರು ಆರೋಪ ಮಾಡಿದ್ದರು. ಈ ನಡುವೆ ಸಂತ್ರಸ್ತೆಯ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು.
ನ್ಯಾಯಕ್ಕಾಗಿ ಇಡೀ ಕುಟುಂಬ ಚನ್ನಗಿರಿ ಠಾಣೆ ಮುಂದೆ ಶವವಿಟ್ಟು ಪ್ರತಿಭಟಿಸಿತ್ತು. ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಈ ಸಂಬಂಧ ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದೆಡೆ, ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮನೆ ಮೇಲೆ ಸಂತ್ರಸ್ತೆಯ ಕುಟುಂಬದವರು ಕಲ್ಲು ತೂರಾಟ ನಡೆಸಿದ್ದಾಅರೆ. ಈ ವೇಳೆ ಪೊಲೀಸರು ಹಾಗೂ ಸಂತ್ರಸ್ತೆ ಕುಟುಂಬದವರ ನಡುವೆ ವಾಗ್ವಾದ ಕೂಡ ನಡೆದಿದೆ. ಈ ಸಂದರ್ಭದಲ್ಲಿ ಕಲ್ಲು ಹೊಡೆಯದಂತೆ ಪೊಲೀಸರು ತಾಕೀತು ಮಾಡಿದ್ದಾರೆ.
ಚನ್ನಗಿರಿ ಪೊಲೀಸ್ ಇನ್ಸ್ಪೆಕ್ಟರ್ ರವೀಶ್ ಅವರು ಮಾಹಿತಿ ನೀಡಿ, ಆರೋಪಿಯ ಮೇಲೆ ದಾಳಿ ಮಾಡಲು ಸಂತ್ರಸ್ತೆಯ ಮನೆಯವರು ಮುಂದಾಗಿದ್ದರು. ನಾವು ಮಧ್ಯೆ ಪ್ರವೇಶ ಮಾಡಿ ತಡೆದಿದ್ದಕ್ಕಾಗಿ ಮನೆಯ ಕಿಟಕಿ ಗಾಜುಗಳನ್ನು ಸಂತ್ರಸ್ತೆ ಹಾಗೂ ಕುಟುಂಬಸ್ಥರು ಒಡೆದು ಹಾಕಿದ್ದಾರೆ. ಇದೀಗ ಪರಿಸ್ಥಿತಿ ಶಾಂತವಾಗಿದೆ. ಈಗಾಗಲೇ ಆರೋಪಿಯನ್ನು ನಾವು ಬಂಧಿಸಿ, ಜೈಲಿಗೆ ಕಳಿಸಿದ್ದೇವೆ. ಸಂತ್ರಸ್ತೆಯು ಅಪ್ರಾಪ್ತೆಯಲ್ಲ. ಈಗಾಗಲೇ ಅವರಿಗೆ 20 ವರ್ಷ ಆಗಿದೆ. ಹಾಗಾಗಿ ನಾವು ಪೋಕ್ಸೋ ಪ್ರಕರಣ ದಾಖಲು ಮಾಡಲು ಬರಲ್ಲ ಎಂದು ಅವರಿಗೆ ಹೇಳಿದ್ದೆವು. ಅದರೂ ಪೋಕ್ಸೋ ದೂರು ದಾಖಲು ಮಾಡಿದ್ದರು. ಕೋರ್ಟ್ ಕೂಡ ಆ ಕೇಸ್ಗೆ ತಡೆ ನೀಡಿದೆ. ಆರೋಪವು ತದ್ವಿರುದ್ಧವಾಗಿದೆ ಎಂದು ಹೈಕೋರ್ಟ್ ಪ್ರಕರಣವನ್ನು ರದ್ದು ಮಾಡಿದೆ. ಸಂತ್ರಸ್ತೆಯು ತಾನು 17 ವರ್ಷವಳಿದ್ದಾಗ ನನಗೂ, ಆರೋಪಿಗೂ ಸಂಬಂಧ ಇತ್ತು ಎಂದು ದೂರು ಕೊಟ್ಟಿದ್ದರು. ಇದೀಗ ಎಲ್ಲವೂ ಸುಖಾಂತ್ಯವಾಗಿದೆ. ಈ ಬಗ್ಗೆ ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ.
ಟ್ರೆಕ್ಕಿಂಗ್ ವೇಳೆ ಈಜಲು ಹೋಗಿ ದುರಂತ: ಕಲ್ಲು ಕ್ವಾರಿಯಲ್ಲಿ ಶವವಾಗಿ ಪತ್ತೆಯಾದ ಟೆಕ್ಕಿ
ಜಿಗಣಿ: ಸ್ನೇಹಿತರೊಂದಿಗೆ ಟ್ರೆಕ್ಕಿಂಗ್ ಹೋಗಿದ್ದ ವೇಳೆ ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ ಟೆಕ್ಕಿ ಶವವಾಗಿ ಪತ್ತೆಯಾಗಿದ್ದಾನೆ.
ಬೆಂಗಳೂರು ಹೊರವಲಯದ ಜಿಗಣಿ ಸಮೀಪದ ಯಲ್ಲಮ್ಮನದೊಡ್ಡಿಯಲ್ಲಿ ಕಲ್ಲು ಕ್ವಾರಿಯಲ್ಲಿ ಟೆಕ್ಕಿ ಶವ ಪತ್ತೆಯಾಗಿದೆ. ವಿನಯ್ ಮೃತ ಟೆಕ್ಕಿ. ಕಳೆದ ಎರದು ದಿನಗಳಿಂದ ನಾಪತ್ತೆಯಾಗಿದ್ದ ವಿನಯ್ ಇದೀಗ ಶವವಾಗಿ ಪತ್ತೆಯಾಗಿದ್ದಾನೆ.
ಅಗ್ನಿಶಾಮಕ ದಳ, ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ಸೇರಿದಂತೆ ಈಶ್ವರ್ ಮಲ್ಪೆ ಮುಳುಗು ತಜ್ಞರ ತಂಡದಿಂದ ಎರಡು ದಿನಗಳಿಂದ ಕಲ್ಲು ಕ್ವಾರಿಯ ನೀರಿನಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ನಿರಂತರ ಹುಡುಕಾಟದ ಬಳಿಕ ಕೊನೆಗೂ ಮೃತದೇಹ ಪತ್ತೆಯಾಗಿದೆ.
ಸದ್ಯ ಮೃತದೇಹವನ್ನ ಅತ್ತಿಬೆಲೆಯ ಆಕ್ಸ್ಫರ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆಂಧ್ರಪ್ರದೇಶ ಮೂಲದ ಸಾಫ್ಟ್ವೇರ್ ಉದ್ಯೋಗಿಯಾಗಿದ್ದ ವಿನಯ್ ಬೆಂಗಳೂರಿನ ಹಲಸೂರಿನಲ್ಲಿ ವಾಸವಿದ್ದರು. ಗಾಂಧಿ ಜಯಂತಿ ರಜೆ ಹಿನ್ನೆಲೆ ಟ್ರಕ್ಕಿಂಗ್ ಪ್ಲ್ಯಾನ್ ಮಾಡಿದ್ದು, ಬಿಎಲ್ಆರ್ ಹೈಕ್ ಎಂಬ ಇನ್ಸ್ಟಾ ಗ್ರೂಪ್ ಮೂಲಕ ಎಂಟು ಜನರ ತಂಡ ಟ್ರೆಕ್ಕಿಂಗ್ ತೆರಳಿದ್ದರು.
ಟ್ರೆಕ್ಕಿಂಗ್ ವೇಳೆ ವಿನಯ್ ಸೇರಿದಂತೆ ಇಡೀ ತಂಡ ಕಲ್ಲು ಕ್ವಾರಿಯಲ್ಲಿ ಈಜಲು ತೆರಳಿತ್ತು. ಕಲ್ಲು ಕ್ವಾರಿಯ ಮೇಲಿನಿಂದ ಯುವಕ-ಯುವತಿಯರ ತಂಡ ನೀರಿಗೆ ಡೈವ್ ಹೊಡೆದು ಮೋಜುಮಸ್ತಿ ಮಾಡಿದ್ದರು. ಈ ವೇಳೆ ಟೆಕ್ಕಿ ವಿನಯ್ ಏಕಾಏಕಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು.
ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸತತ ಶೋಧ ಕಾರ್ಯಾಚರಣೆ ಬಳಿಕ ಇಂದು ವಿನಯ್ ಮೃತದೇಹ ಕಲ್ಲು ಕ್ವಾರಿಯಲ್ಲಿ ಪತ್ತೆಯಾಗಿದೆ.

