ಬೆಂಗಳೂರು: ಉಳಿಕೆ ಮೂಲ ವೃಂದದ ಒಟ್ಟು 505 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಇಂದು ಸುಸೂತ್ರವಾಗಿ ಲಿಖಿತ ಪರೀಕ್ಷೆ ನಡೆಯಿತು.
ಒಟ್ಟು 4,11,656 ಅಭ್ಯರ್ಥಿಗಳ ಪೈಕಿ ಬೆಳಗಿನ ಸಾಮಾನ್ಯ ಜ್ಞಾನ ಪತ್ರಿಕೆಯನ್ನು 3,04,096 (ಶೇ 74ರಷ್ಟು) ಮಂದಿ ಬರೆದರು. ಮಧ್ಯಾಹ್ಮದ ನಿರ್ದಿಷ್ಟ ಪತ್ರಿಕೆಯನ್ನು 3,03,058 ಮಂದಿ ಬರೆದಿದ್ದಾರೆ.
ರಾಜ್ಯದ ಒಟ್ಟು 1,037 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಧಾರವಾಡದಲ್ಲಿ ಅತಿ ಹೆಚ್ಚು ಅಂದರೆ 60 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ವೆಬ್ ಕಾಸ್ಟಿಂಗ್ ಮೂಲಕ ಎಲ್ಲೆಡೆ ಬಿಗಿ ನಿಗಾ ವ್ಯವಸ್ಥೆ ಮಾಡಲಾಗಿತ್ತು.
ಲಿಖಿತ ಪರೀಕ್ಷೆ ಮುಗಿದು, ಒಎಂಆರ್ ಉತ್ತರ ಪತ್ರಿಕೆಗಳು ತಲುಪಿದ ಕ್ಷಣದಿಂದಲೇ ಅವುಗಳನ್ನು ಸ್ಕ್ಯಾನ್ ಮಾಡಿ ಕೆಇಎ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡುವ ಕೆಲಸ ಆರಂಭಿಸಲಾಗಿದೆ. ಬೆಂಗಳೂರು, ಕಲ್ಬುರ್ಗಿ, ರಾಯಚೂರು, ಧಾರವಾಡ, ಬಳ್ಳಾರಿ, ವಿಜಯಪುರ, ದಾವಣಗೆರೆ ಮತ್ತು ಮೈಸೂರಿನಲ್ಲಿ ಸ್ಕ್ಯಾನಿಂಗ್ ಕೇಂದ್ರಗಳನ್ನು ತೆರೆದಿದ್ದು, ಸ್ಥಳೀಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸ್ಕ್ಯಾನಿಂಗ್ ನಡೆಯುತ್ತಿದೆ. ನಾಳೆ ಸಂಜೆ ವೇಳೆಗೆ ಎಲ್ಲ ಅಭ್ಯರ್ಥಿಗಳ ಒಎಂಆರ್ ಪ್ರತಿಗಳು ಕೆಇಎ ವೆಬ್ ಸೈಟ್ ನಲ್ಲಿ ಲಭ್ಯ ಇರಲಿವೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಅಕ್ಟೋಬರ್ 30ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಆಯ್ಕೆ ಪ್ರಕ್ರಿಯೆ
ರಾಯಚೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2026-27ನೇ ಸಾಲಿನ ರಾಯಚೂರು ಜಿಲ್ಲಾ ಮಟ್ಟದ ಯುವಜನೋತ್ಸವ ಆಯ್ಕೆ ಪ್ರಕ್ರಿಯೆಯನ್ನು 15 ರಿಂದ 29 ವರ್ಷದೊಳಗಿನವರಿಗೆ ಅಕ್ಟೋಬರ್ 30ರ ಬೆಳಿಗ್ಗೆ 9ಗಂಟೆಗೆ ನಗರದ ವೇದಾಂತ ಡಿಗ್ರಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಆಯ್ಕೆ ಪ್ರಕ್ರಿಯೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಾಲಾ, ಕಾಲೇಜು ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಹಾಗೂ ಸಂಘ-ಸಂಸ್ಥೆಗಳು, ಯುವಕ/ಯುವತಿ ಮಂಡಳಿಗಳು ಇನ್ನಿತರೇ ಸಂಸ್ಥೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಾಳುಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೀರೇಶ ನಾಯಕ ಅವರು ತಿಳಿಸಿದ್ದಾರೆ.
ನಿಗದಿಪಡಿಸಿದ ದಿನಾಂಕ ಹಾಗೂ ಸ್ಥಳದಂದು ಬೆಳಿಗ್ಗೆ 9ಗಂಟೆಯ ಒಳಗಾಗಿ ಸ್ಪರ್ಧಾಳುಗಳು ತಮ್ಮ ಹೆಸರನ್ನು ನೋಂದಾಯಿಸಕೊಳ್ಳತಕ್ಕದ್ದು, ವಯಸ್ಸಿನ ದೃಢೀಕರಣಕ್ಕೆ ಆಧಾರ್ ಕಾರ್ಡ್, ಗುರುತಿನ ಚೀಟಿ ಅಥವಾ ಜನ್ಮ ದಿನಾಂಕ ಇರುವ ಸರ್ಕಾರಿ ಪ್ರಮಾಣಪತ್ರವನ್ನು ಹಾಗೂ ಸ್ವಯಂ ಬ್ಯಾಂಕ್ ಖಾತೆಯ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ಸಲ್ಲಿಸುವುದು.
ಸಾಂಸ್ಕೃತಿಕ ಸ್ಪರ್ಧೆಗಳ ವಿವರ: ಜನಪದನೃತ್ಯ ತಂಡದಲ್ಲಿ 7+3 ಭಾಗವಹಿಸುವರ ಸಂಖ್ಯೆಯನ್ನು ಮಿತಿಗೊಳಿಸಲಾಗಿದ್ದು, 5 ರಿಂದ 8 ನಿಮಿಷಕ್ಕೆ ಅವಧಿಯನ್ನು ನಿಗದಿಪಡಿಸಲಾಗಿದೆ.
ಜನಪದ ಗೀತೆ ತಂಡದಲ್ಲಿ 7+3 ಭಾಗವಹಿಸುವರ ಸಂಖ್ಯೆಯನ್ನು ಮಿತಿಗೊಳಿಸಲಾಗಿದ್ದು, 5 ರಿಂದ 8 ನಿಮಿಷಕ್ಕೆ ಅವಧಿಯನ್ನು ನಿಗದಿಪಡಿಸಲಾಗಿದೆ. ಕವಿತೆ ಬರೆಯುವುದು (ಪ್ರಾದೇಶಿಕಭಾಷೆ/ಹಿಂದಿ/ಆಂಗ್ಲ) ಒಬ್ಬರು ಭಾಗವಹಿಸುವರ ಸಂಖ್ಯೆಯನ್ನು ಮಿತಿಗೊಳಿಸಲಾಗಿದ್ದು, 1 ಗಂಟೆ 30 ನಿಮಿಷಕ್ಕೆ ಅವಧಿಯನ್ನು ನಿಗದಿಪಡಿಸಲಾಗಿದೆ.
ನಾಟಕ 10 ಜನ ಭಾಗವಹಿಸುವರ ಸಂಖ್ಯೆಯನ್ನು ಮಿತಿಗೊಳಿಸಲಾಗಿದ್ದು, ಯಾವುದೇ ಸಮಯವನ್ನು ನಿಗದಿಪಡಿಸಿರುವುದಿಲ್ಲ. ಚಿತ್ರಕಲೆ (ವೈಯಕ್ಕಿಕ) 6 ಗಂಟೆ ನಿಮಿಷಕ್ಕೆ ಅವಧಿಯನ್ನು ನಿಗದಿಪಡಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

